ಇಂದು ರಾಜ್ಯ ರೈತ ಸಂಘದಿಂದ ಶಿವಮೊಗ್ಗದಲ್ಲಿ ಮಹತ್ವದ ಸಭೆಯನ್ನು ನಡೆಸಲಾಯಿತು. ಕೋಡಿಹಳ್ಳಿ ಚಂದ್ರಶೇಖರ್ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಶಿವಮೊಗ್ಗದಲ್ಲಿ ಇಂದು 18 ಜಿಲ್ಲೆಗಳ ರೈತ ಸಂಘದ ಪದಾಧಿಕಾರಿಗಳು, ರಾಜ್ಯ ಸಮಿತಿ ಪದಾಧಿಕಾರಿಗಳು ಸಭೆ ಸೇರಿ ಸಮಾಲೋಚನೆ ನಡೆಸಿದರು. ಈ ಸಭೆಯಲ್ಲಿ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾಗೊಳಿಸುವಂತ ತೀರ್ಮಾನ ಕೈಗೊಳ್ಳಲಾಗಿದೆ.
ಈ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘದ ನೂತನ ಅಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಅವರು, ಇನ್ನುಮುಂದೆ ಕೋಡಿಹಳ್ಳಿ ಚಂದ್ರಶೇಖರ್ ಹೊರಗಿಟ್ಟು ಸಂಘಟನೆ ಬಲಪಡಿಸುತ್ತೇವೆ. ಎಲ್ಲಾ ರೈತ ಸಂಘಗಳು ಒಂದಾಗಿ ಮಾತುಕತೆಗೆ ಬಂದಲ್ಲಿ ನಾನು ಅಧ್ಯಕ್ಷ ಸ್ಥಾನ ತ್ಯಜಿಸುತ್ತೇನೆ ಎಂದು ಹೇಳಿದ್ದಾರೆ.

Post a Comment