Actor Diganth: ನಟ ದಿಗಂತ್ ಕತ್ತಿಗೆ ಬಲವಾದ ಪೆಟ್ಟು, ಗೋವಾದಿಂದ ಬೆಂಗಳೂರಿಗೆ ಏರ್​ಲಿಫ್ಟ್​ ಸದ್ಯ ಗೋವಾದಲ್ಲೆ ದಿಗಂತ್ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವೇ ಗಂಟೆಗಳಲ್ಲಿ ಏರ್ ಲಿಪ್ಟ್ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಿಗಂತ್ ಅವರನ್ನು ಕುಟುಂಬಸ್ಥರು ಕರೆತರಲಿದ್ದಾರೆ ಎಂದು ಹೇಳಲಾಗಿದೆ.


  ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. ಗೋವಾದ ಸಮುದ್ರ ತಟದಲ್ಲಿ ಸೋಮರ್ ಸಾಲ್ಟ್ ಹೊಡೆಯುವ ವೇಳೆ  ದಿಗಂತ್ ಕುತ್ತಿಗೆಗೆ  ಪೆಟ್ಟು ಬಿದ್ದಿದೆ. ಕುಟುಂಬದ ಜೊತೆ ನಟ ದಿಗಂತ್ ಗೋವಾ ಪ್ರವಾಸಕ್ಕೆ (Goa Tour) ತೆರಳಿದ್ದರು. ಈ ವೇಳೆ ದಿಗಂತ್ (Actor Diganth) ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿರುವ ಬಗ್ಗೆ ದಿಗಂತ್ ಆಪ್ತರಿಂದ ನ್ಯೂಸ್ 18ಗೆ  ಮಾಹಿತಿ  ದೊರೆತಿದೆ. ಸದ್ಯ ಗೋವಾದಲ್ಲೆ ದಿಗಂತ್ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವೇ ಗಂಟೆಗಳಲ್ಲಿ ಏರ್ ಲಿಪ್ಟ್ ಮೂಲಕ ಬೆಂಗಳೂರಿನ ಮಣಿಪಾಲ್  ಆಸ್ಪತ್ರೆಗೆ ದಿಗಂತ್ ಅವರನ್ನು ಕುಟುಂಬಸ್ಥರು ಕರೆತರಲಿದ್ದಾರೆ ಎಂದು ಹೇಳಲಾಗಿದೆ.

ಈಕುರಿತು ನ್ಯೂಸ್ 18 ಕನ್ನಡಕ್ಕೆ ನಟ  ದಿಗಂತ್ ಕುಟುಂಬದ ಮೂಲಗಳು ಅಧಿಕೃತ ಮಾಹಿತಿ ನೀಡಿವೆ. ನಟ ದಿಗಂತ್ಗೆ ಕುಟುಂಬ ಸಮೇತ ಗೋವಾ ಪ್ರವಾಸಕ್ಕೆ ತೆರಳಿದ್ದರು. ಆದರೆ ಗೋವಾದಲ್ಲಿ ಈ ಅವಘಡ ಸಂಭವಿಸಿದೆ. ಸಮ್ಮರ್ ಶಾಟ್ ಮಾಡುವ ವೇಳೆ ದಿಗಂತ್ ಅವರ ಕತ್ತಿಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ತಿಳಿದುಬಂದಿದೆ.  ಈಕುರಿತು ಇನ್ನಷ್ಟು ಮಾಹಿತಿ ಅಪ್ಡೇಟ್ ಆಗಬೇಕಿ

ಹಿಂದೊಮ್ಮೆ ನಡೆದಿತ್ತು ದುರ್ಘಟನೆ

ಕೆಲವು  ವರ್ಷಗಳ ಹಿಂದೆ ವಿದೇಶದಲ್ಲಿ ದಿಗಂತ್ ಚಿತ್ರವೊಂದರ ಚಿತ್ರೀಕರಣ ನಡೆಸುವಾಗ ದುರ್ಘಟನೆಯೊಂದು ನಡೆದಿತ್ತು. ಈ ಚಿತ್ರೀಕರಣದ ವೇಳೆ ದಿಗಂತ್ ಕಣ್ಣೊಂದಕ್ಕೆ ಹಾನಿಯಾಗಿತ್ತು. ಸ್ವತಃ ದಿಗಂತ್ ಅವರೇ ಈ ಘಟನೆಯನ್ನು ತಿಳಿಸಿದ್ದರು

ಇತ್ತೀಚಿಗೆ ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ ಬಿಡು

ದೂದ್ಪೇಡಾ ದಿಗಂತ್ ಎಂದೇ ಹೆಸರುವಾಸಿಯಾಗಿರುವ ನಟ ದಿಗಂತ್ ತಮ್ಮ ನಟನೆಯಿಂದಲೇ ಹೆಸರುವಾಸಿಯಾದವರು. ಇತ್ತೀಚಿಗೆ ಅವರ ನಟನೆಯ ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ ಸಿನಿಮಾ ಬಿಡುಗಡೆಗೊಂಡಿತ್ತು

ಇದನ್ನೂPavitra Lokesh Marriage: ಮಹೇಶ್ ಬಾಬು ಸಹೋದರನನ್ನು ಮದುವೆಯಾಗಿದ್ದರಂತೆ ಪವಿತ್ರಾ ಲೋಕೇಶ್ಓ

ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ ಚಿತ್ರದಲ್ಲಿ ಅವರ ಪತ್ನಿ ಐಂದ್ರಿತಾ ರೇ ಸಹ ಅಭಿನಯಿಸಿದ್ದರು. ವಿನಾಯಕ ಕೋಡ್ಸರ ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ ಸಿನಿಮಾ ನಿರ್ದೇಶನ ಮಾಡಿದ್ದ

ಮುಂಗಾರು ಮಳೆಯಿಂದ ಜನಪ್ರಿಯತೆ ಪಡೆದಿದ್ದ ದಿಗಂ

ಮಿಸ್ ಕ್ಯಾಲಿಫೋರ್ನಿಯಾ ಸಿನಿಮಾದಿಂದ ನಟ ದಿಗಂತ್  ಸಿನಿಮಾ ಜಗತ್ತಿಗೆ ಪ್ರವೇಶಿಸಿದ್ದಾರೆ.  ದಿಗಂತ್ ಚಿತ್ರ ಜಗತ್ತಿನಲ್ಲಿ ತೀವ್ರ ಮುನ್ನೆಲೆಗೆ ಬಂದಿದ್ದು, ಜನಪ್ರಿಯವಾಗಿದ್ದು ಮುಂಗಾರು ಮಳೆ ಸಿನಿಮಾದಿಂದ. ಯೋಗರಾಜ್ ಭಟ್ ನಿರ್ದೇಶನದ ಮುಂಗಾರು ಮಳೆ ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆಯನ್ನು ಬರೆದಿತ್ತು. ನಂತರ ಗಾಳಿಪಟ ಸಿನಿಮಾ ಸಹ ದಿಗಂತ್ಗೆ ಭಾರೀ ಜನಪ್ರಿಯತೆ ನೀಡಿತು. ದಿಗಂತ್ ಮಲೆನಾಡು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದವರು. ತ್ರು.ದಿ: .ಗಡೆ.ದೆ. ಮೂಲದವರು.

Post a Comment

Previous Post Next Post