Basavaraj Bommai: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂಬ ಚಿಂತನೆ ಸರ್ಕಾರಕ್ಕಿಲ್ಲ; ಸಿಎಂ ಬಸವರಾಜ ಬೊಮ್ಮಾಯಿ ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಲು ಹಾಗೂ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಹಾಜರಿರಬೇಕೆಂದು ವರಿಷ್ಠರ ಸೂಚನೆ ನೀಡಿದ್ದಾರೆ. ಅದಕ್ಕಾಗಿ ದೆಹಲಿಗೆ ಬಂದಿದ್ದೇನೆ. ಬೇರೆ ವಿಶೇಷ ಏನಿಲ್ಲ ಎಂದು ಸಿಎಂ ಹೇಳಿದರು.


 ನವದೆಹಲಿ (ಜೂ. 23): ಕೇಂದ್ರ ಸರ್ಕಾರದ ಮಟ್ಟದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂಬ ಚಿಂತನೆ, ವಿಚಾರ  ಹಾಗೂ ಪ್ರಸ್ತಾಪವೂ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister Basavaraj Bommai) ಹೇಳಿದ್ದಾರೆ. ಸಚಿವ ಉಮೇಶ ಕತ್ತಿ '2024ರ ಲೋಕಸಭಾ ಚುನಾವಣೆ ಬಳಿಕ ಕರ್ನಾಟಕ ಎರಡು ಭಾಗ ಆಗಲಿದೆ' ಎಂದು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ‌ ಅವರು 'ಉಮೇಶ್ ಕತ್ತಿಯವರು ಈ ರೀತಿ ಹೇಳಿಕೆ ನೀಡಿರುವುದು ಇದು ಮೊದಲ ಬಾರಿಯೇನಲ್ಲ. ಹತ್ತು ಹಲವಾರು ವರ್ಷಗಳಿಂದ ಅವರು ಹೇಳಿದ್ದಾರೆ. ಅದಕ್ಕೆ ಅವರೇ ಉತ್ತರ ನೀಡಬೇಕು' ಎಂದರು.

ವರಿಷ್ಠರ ಸೂಚನೆ ಮೇರೆಗೆ ದೆಹಲಿ ಪ್ರ

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು, ರಾಷ್ಟ್ರಪತಿ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಧಿಕಾರದಲ್ಲಿರುವ  ಎಲ್ಲಾ ಮುಖ್ಯಮಂತ್ರಿಗಳು ಹಾಜರಿದ್ದು ನಾಮಪಾತ್ರಕ್ಕೆ ಸೂಚಕರಾಗಿ ಸಹಿ ಹಾಕಲು ಹಾಗೂ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಎಲ್ಲರೂ ಹಾಜರಿರಬೇಕೆಂದು ವರಿಷ್ಠರ  ಸೂಚನೆ ನೀಡಿದ್ದಾರೆ. ವರಿಷ್ಠರ ಸೂಚನೆ ಮೇರೆಗೆ ದೆಹಲಿಗೆ ಬಂದಿದ್ದೇನೆ. ಬೇರೆ ವಿಶೇಷ ಏನಿಲ್ಲ. ಯಾವುದೇ ರಾಜಕೀಯ ಉದ್ದೇಶ ಇಲ್ಲ, ಯಾವುದೇ ಕೇಂದ್ರ ಮಂತ್ರಿಗಳನ್ನು ಭೇಟಿ ಮಾಡುವುದಿಲ್ಲ ಎಂದು ಹೇಳಿದರು

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಇ

'ನಾನು ಪ್ರತಿ ಬಾರಿ ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಚಿವ ಸಂಪುಟ ಪುನರ್ ರಚನೆ ಅಥವಾ ವಿಸ್ತರಣೆ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಬಂದಿರುತ್ತದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಾನಾಗಿ ಅಧಿಕೃತವಾಗಿ ಹೇಳುವವರೆಗೆ ಏನೂ ಇರುವುದಿಲ್ಲ. ಈ ಬಾರಿಯ ದೆಹಲಿ ಪ್ರವಾಸದ ವೇಳೆ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಬಗ್ಗೆ ಪಕ್ಷದ ವರಿಷ್ಠರನ್ನು ಭೇಟಿಯಾಗಲ್ಲ' ಎಂದು ಹೇಳಿದ

ಇದನ್ನೂ ಓದಿ: PM Modi On Bengaluru Roads: ಕಿತ್ತುಹೋದ ಬೆಂಗಳೂರು ರಸ್ತೆ, ಸ್ವತಃ ವರದಿ ಕೇಳಿದ ಪ್ರಧಾನಿ ಕಚೇ

ಕಳಪೆ ಕಾಮಗಾರಿ ವಿರುದ್ಧ ಕ್ರಮಕ್ಕೆ ಸಿಎಂ ಸೂ

 ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ರಾಜ್ಯ ಪ್ರವಾಸ ಕೈಗೊಂಡಿದ್ದ  ಸಂದರ್ಭದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕೆನಾಮಿಕ್ಸ್(ಬೇಸ್) ಕ್ಯಾಂಪ್ ಬಳಿ ಹೊಸದಾಗಿ ಡಾಂಬರೀಕರಣ ಮಾಡಿದ ರಸ್ತೆ ಕುಸಿದಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಕ್ರಮ ತೆಗೆದುಕೊಳ್ಳುವಂತೆ ಬಿಬಿಎಂಪಿ ಆಯುಕ್ತರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ

ವಿವರ ನೀಡಿದರೆ ತ

ಬಿಬಿಎಂಪಿ ರಸ್ತೆ ಹಾಕಿದ ಎರಡೇ ದಿನದಲ್ಲಿ ಕಿತ್ತುಹೋಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು 'ಇದರ ಬಗ್ಗೆ ಗೊತ್ತಿಲ್ಲ, ವಿವರಗಳನ್ನು ನೀಡಿದರೆ ತನಿಖೆ ಮಾಡಿಸಲಾಗುವುದು' ಎಂದು ತಿಳಿಸಿದ

ಇದನ್ನೂ ಓದಿ: Maharashtra Political Crisis: ಮಾಲ್ಡೀವ್ಸ್ಗೆ ಹಾರಿದ ಪ್ರಿಯಾಂಕಾ ಗಾಂಧಿ! ಮಹಾ ಸರ್ಕಾರ ಪತನ ಸನ್ನಿ

ನಾಳೆ ದೆಹಲಿಯಲ್ಲೇ ಇರುವ ಸಿ

ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ವತಿಯಿಂದ ದ್ರೌಪದಿ ಮುರ್ಮು ನಾಳೆ (ಜೂನ್ 24) ನಾಮಪತ್ರ ಸಲ್ಲಿಕೆ ಮಾಡಲಿದ್ದು, ಈ ವೇಳೆ ಹಾಜರಿರುವ ದೃಷ್ಟಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ನಾಳೆ‌ ದೆಹಲಿಯಲ್ಲೇ ಇರಲಿದ್ದಾರೆ. ಎಂಹಿತರು.ನಿಖೆ.ಚನೆರಿರು.ಲ್ಲ.ವಾಸನಾಳೆ‌ ದೆಹಲಿಯಲ್ಲೇ ಇರಲಿದ್ದಾರೆ.

Post a Comment

Previous Post Next Post