ಕುವೆಂಪು ನಗರದಲ್ಲಿ ವಾಸವಾಗಿದ್ದ ರೀನಾ ಮಾಲಗತ್ತಿ ಹಾಗೂ ಯುವಕ ಪ್ರವೀಣ್ ಭಟ್ ನಡುವೆ ಸ್ನೇಹ ಸಲುಗೆ ಬೆಳೆದಿತ್ತು. ಎರಡು ವರ್ಷದವರೆಗೆ ಇಬ್ಬರ ಮಧ್ಯೆ ಅನೈತಿಕ ಸಂಬಂಧವಿತ್ತು. ಬಳಿಕ ಪ್ರವೀಣ ಅಂತರ ಕಾಯ್ದುಕೊಳ್ಳಲು ಯತ್ನಿಸಿದಕ್ಕೆ ರೀನಾ ತಕರಾರು ತೆಗೆದರು.
ಬೆಳಗಾವಿ(ಜೂನ್,23): 2015ರ ಆಗಸ್ಟ್ 16ರಂದು ನಸುಕಿನ ಜಾವ ಬೆಳಗಾವಿಯ (Belgaum) ಕುವೆಂಪುನಗರದಲ್ಲಿ ಮೂವರ ಕಗ್ಗೊಲೆ (Triple Murder) ಆಗಿತ್ತು. ಗೃಹಿಣಿ ರೀನಾ ಮಾಲಗತ್ತಿ ಹಾಗೂ ಆಕೆಯ ಇಬ್ಬರು ಮಕ್ಕಳಾದ ಆದಿತ್ಯ, ಸಾಹಿತ್ಯಳನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಘಟನೆ ನಡೆದು 24 ಗಂಟೆಯಲ್ಲೇ ಬೆಳಗಾವಿ ಎಪಿಎಂಸಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ರು. ಪ್ರಕರಣದ ವಿಚಾರಣೆ ನಡೆಸಿದ್ದ ಬೆಳಗಾವಿ ಜಿಲ್ಲಾ ಎರಡನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಆರೋಪಿ ಪ್ರವೀಣ್ ಭಟ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಆದೇಶ ಪ್ರಶ್ನಿಸಿ ಕೊಲೆ ಆರೋಪಿ ಹೈಕೋರ್ಟ್ ಮೆಟ್ಟಿಲೇರಿದ್ದ. ಆದ್ರೆ ಹೈಕೋರ್ಟ್ ಧಾರವಾಡ ಪೀಠ ಆರೋಪಿಯನ್ನು ದೋಷಮುಕ್ತಗೊಳಿಸಿದೆ
ಇಬ್ಬರ ಮಧ್ಯೆ ಅನೈತಿಕ ಸಂಬಂಧವಿತ್ತು
ಕುವೆಂಪು ನಗರದಲ್ಲಿ ವಾಸವಾಗಿದ್ದ ರೀನಾ ಮಾಲಗತ್ತಿ ಹಾಗೂ ಯುವಕ ಪ್ರವೀಣ್ ಭಟ್ ನಡುವೆ ಸ್ನೇಹ ಸಲುಗೆ ಬೆಳೆದಿತ್ತು. ಎರಡು ವರ್ಷದವರೆಗೆ ಇಬ್ಬರ ಮಧ್ಯೆ ಅನೈತಿಕ ಸಂಬಂಧವಿತ್ತು. ಬಳಿಕ ಪ್ರವೀಣ ಅಂತರ ಕಾಯ್ದುಕೊಳ್ಳಲು ಯತ್ನಿಸಿದಕ್ಕೆ ರೀನಾ ತಕರಾರು ತೆಗೆದರು. ತನ್ನಿಂದ ದೂರಾದರೆ ಅನೈತಿಕ ಸಂಬಂಧದ ಸಂಗತಿಯನ್ನು ಬಹಿರಂಗ ಮಾಡುತ್ತೇನೆ ಎಂದೂ ಬೆದರಿಸಿದ್ದರು. ಈ ಸಂಗತಿಯೇ ಕೊಲೆಗೆ ಕಾರಣವೆಂದು ದೋಷಾರೋಪ ಪಟ್ಟಿಯಲ್ಲಿ ನಮೂದಿಸಲಾಗಿದೆತ್ತು
ಇದನ್ನೂ ಓದಿ: Sathish Patil Murder: ನ್ಯಾಯಕ್ಕಾಗಿ ಜಿಲ್ಲಾಧಿಕಾರಿ ಕಚೇರಿ ಬಳಿ ಸಂಜಯ್ ಪಾಟೀಲ್ ಕುಟುಂಬಸ್ಥ
ಸಾಕ್ಷ್ಯ ಕೊರತೆಯಿಂದ ದೋಷಮುಕ್ತ
ಈ ಬಗ್ಗೆ ಪ್ರತಿಕ್ರಿಯಿಸಿದ ಆರೋಪಿ ಪರ ವಕೀಲ ಪ್ರವೀಣ ಕರೋಶಿ, ಬೆಳಗಾವಿಯ ಕುವೆಂಪು ನಗರದಲ್ಲಿ ನಡೆದಿದ್ದ ತ್ರಿವಳಿ ಪ್ರಕರಣದಲ್ಲಿ ಹೈಕೋರ್ಟ್ ಪ್ರತ್ಯಕ್ಷ ಸಾಕ್ಷಿ ಕೇಳಿದೆ. ಸಾಕ್ಷ್ಯ ಕೊರತೆಯ ಕಾರಣ ನೀಡಿ ಆರೋಪಿಯನ್ನು ಮುಕ್ತಗೊಳಿಸಿದೆ. ತುಂಬ ಗಂಭೀರವಾದ ಈ ಪ್ರಕರಣದಲ್ಲಿ ಹೈಕೋರ್ಟ್ ದ್ವಿಸದಸ್ಯ ಪೀಠವು ಮಹತ್ವದ ತೀರ್ಪು ನೀಡಿದೆ. ದೂರುದಾರರಿಂದ ಸಮರ್ಥನೀಯ ಹಾಗೂ ಪ್ರತ್ಯಕ್ಷ ಸಾಕ್ಷ್ಯ ಒದಗಿಸಲು ಆಗಿಲ್ಲ. ನನ್ನ ಕಕ್ಷಿದಾರ ಪ್ರವೀಣ ಭಟ್ ಮಂಗಳವಾರ ಬಿಡುಗಡೆ ಆಗಿದ್ದಾರೆ ಎಂ
ಏನೆಲ್ಲಾ ಸಾಕ್ಷ್ಯ ಸಿಕ್ಕಿತ್ತು
ಹೈಕೋರ್ಟ್ ಧಾರವಾಡ ಪೀಠ ನೀಡಿದ ಮಹತ್ವದ ಆದೇಶದ ಬಗ್ಗೆ ಹಿರಿಯ ನ್ಯಾಯವಾದಿ ಮೋಹನ್ ಮಾವಿನಕಟ್ಟಿ ಪ್ರತಿಕ್ರಿಯಿಸಿದ್ದಾರೆ. ಯಾವುದೇ ಪ್ರಕರಣ ಇರಲಿ ನ್ಯಾಯಾಲಯಕ್ಕೆ ಸಮರ್ಪಕ ಸಾಕ್ಷಿ ಮುಖ್ಯ. ನಿಜವಾದ ಆರೋಪಿಗಳಿಗೆ ಶಿಕ್ಷೆ ಆಗಬೇಕು ಎಂಬುದು ನನ್ನ ನಿಲುವು. ಆದರೆ ಅದಕ್ಕೆ ಅಗತ್ಯ ಸಾಕ್ಷಿಗಳು ಬೇಕಾಗುತ್ತದೆ. ಕೊಲೆ ನಡೆದ ಜಾಗದಲ್ಲಿ ಕೊಲೆಯಾದವರ ಜತೆಗೆ ಆರೋಪಿಯ ರಕ್ತದ ಕಲೆಗಳು, ಚಾಕುವಿನ ಮೇಲೆ ಅವರ ಬೆರಳಿನ ಗುರುತು, ನೆಲದ ಮೇಲೆ ಹೆಜ್ಜೆ ಗುರುತು ಸಿಕ್ಕಿವೆ. ಆರೋಪಿ ಪ್ರವೀಣ ಹಾಗೂ ಗೃಹಿಣಿ ರೀನಾ ಅವರಿಗೆ ಕೊನೆಯದಾಗಿ ಮೊಬೈಲ್ ಕರೆ ಮಾಡಿ ಮಾತನಾಡಿದ್ದಾರೆ ಎನ್ನುವುದನ್ನೂ ಸಾಕ್ಷ್ಯ ಮಾಡಲಾಗಿತ್ತು
ಸಾಂದರ್ಭಿಕ ಸಾಕ್ಷ್ಯಾಧಾರ ಪರಿಗಣಿಸಿ ಜಿಲ್ಲಾ ನ್ಯಾಯಾಲಯ 16 ಎಪ್ರಿಲ್ 2016 ರಂದು ಜೀವಾವಧಿ ನೀಡಿತ್ತು. ಆದರೆ, ಆರೋಪಿ ಮೇಲಿನ ಸಾಕ್ಷ್ಯಾಧಾರಗಳು ಒಂದಕ್ಕೊಂದು ತಾಳೆ ಆಗಲಿಲ್ಲ. ಹೈಕೋರ್ಟ್ ಪ್ರತ್ಯಕ್ಷ ಸಾಕ್ಷ್ಯಾಧಾರ ಕೇಳಿತು. ಭಾರತೀಯ ಕಾನೂನಿಗೆ ಬೇಕಾದ ಅಗತ್ಯ ಸಾಕ್ಷ್ಯ ಒದಗಿಸಲು ದೂರುದಾರರ ಪರ ವಕೀಲರು ವಿಫಲರಾಗಿರಬಹುದು ಎಂದರು. .?ದರು. ರ ಧರಣಿ..ಫಲರಾಗಿರಬಹುದು ಎಂದರು.
Post a Comment