IND vs SA: ಅಬ್ಬರಿಸಿದ ವಂಡರ್ ಡುಸ್ಸೆನ್; ದಕ್ಷಿಣ ಆಫ್ರಿಕಾಗೆ 7 ವಿಕೆಟ್​ಗಳ ಜಯ ದಕ್ಷಿಣ ಆಫ್ರಿಕಾ ತಂಡ 19.1 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 212 ರನ್ ಗಳಿಸುವ ಮೂಲಕ 7 ವಿಕೆಟ್​ಗಳ ಜಯ ದಾಖಲಿಸಿತು. ಮೂಲಕ ಸೌತ್​ ಆಫ್ರಿಕಾ ತಂಡ 5 ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆಯನ್ನು ಸಾಧಿಸಿದೆ.


 ಭಾರತ ಮತ್ತು ದಕ್ಷಿಣ (IND vs SA) ಆಫ್ರಿಕಾ ನಡುವಿನ 5 ಪಂದ್ಯಗಳ ಟಿ20ಐ ಸರಣಿ ಆರಂಭವಾಗಿದೆ. ಸರಣಿಯ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ನಾಯಕ ಟೆಂಬಾ ಬೌಮಾ (Temba Bavuma) ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಈ ಮೂಲಕ ಮೊದಲು ಬ್ಯಾಟಿಂಗ್ ಮಾಡಿದ ರಿಷಭ್ ಪಂತ್ (Rishabh Pant) ನಾಯಕತ್ವದ ಟಿಂ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 211 ರನ್ ಗಳ ಬೃಹತ್ ಮೊತ್ತ ಕಲೆಹಾಕಿತು. ಇದು ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಯಲ್ಲಿ ಭಾರತದ ಗರಿಷ್ಠ ಸ್ಕೋರ್ ಆಗಿದೆ. ಈ ಮೊತ್ತ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ 19.1 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 212 ರನ್ ಗಳಿಸುವ ಮೂಲಕ 7 ವಿಕೆಟ್​ಗಳ ಜಯ ದಾಖಲಿಸಿತು. ಮೂಲಕ ಸೌತ್​ ಆಫ್ರಿಕಾ ತಂಡ 5 ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆಯನ್ನು ಸಾಧಿಸಿದೆ.



ಅಬ್ಬರಿಸಿದ ಇಶಾನ್ ಕಿಶನ್:

ಭಾರತ ತಂಡವು ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 211 ರನ್ ಗಳ ಬೃಹತ್ ಮೊತ್ತ ಕಲೆಹಾಕಿತು. ಭಾರತದ ಪರ ಇಶಾನ್ ಕಿಶನ್ ಅಬ್ಬರದ ಬ್ಯಾಟಿಂಗ್ ಮಾಡುವ ಮೂಲಕ ತಂಡವು ಬೃಹತ್ ಮೊತ್ತ ಕಲೆಹಾಕುವಲ್ಲಿ ಪ್ರಮುಖ ಪಾತ್ರವಹಿಸಿದರು. ಇಶಾನ್ ಕಿಶನ್ 48 ಎಸೆತಗಳಲ್ಲಿ 11 ಬೌಂಡರಿ ಹಾಗೂ 3 ಸಿಕ್ಸರ್ ಸೇರಿದಂತೆ 76 ರನ್ ಗಳಿಸಿದರು.

: ಶ್ರೇಯಸ್ ಅಯ್ಯರ್ 27 ಎಸೆತಗಳಲ್ಲಿ 36 ರನ್ ಮತ್ತು ನಾಯಕ ರಿಷಬ್ ಪಂತ್ 16 ಎಸೆತಗಳಲ್ಲಿ 29 ರನ್ ಗಳಿಸಿದರು. ಹಾರ್ದಿಕ್ ಪಾಂಡ್ಯ 12 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 2 ಬೌಂಡರಿಗಳ ಸಹಾಯದಿಂದ 258.33 ಸ್ಟ್ರೈಕ್ ರೇಟ್‌ನೊಂದಿಗೆ ಅಜೇಯ 31 ರನ್ ಗಳಿಸಿದರು.



ಬೌಲಿಂಗ್​ನಲ್ಲಿ ಎಡವಿದ ಸೌತ್ ಆಫ್ರಿಕಾ:



ಇನ್ನು, ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ದಕ್ಷಿಣ ಆಫ್ರಿಕಾದ ಯೋಜನೆಯನ್ನು ಭಾರತೀಯ ಬ್ಯಾಟ್ಸ್​ಮನ್​ಗಳು ತಲೆ ಕೆಳಗು ಮಾಡಿದರು. ದಕ್ಷಿಣ ಆಫ್ರಿಕಾ ಪರ ಕೇಶವ್ ಮಹಾರಾಜ್, ಎನ್ರಿಚ್ ನಾರ್ಸಿಯಾ, ವೇಯ್ನ್ ಪಾರ್ನೆಲ್ ಮತ್ತು ಡ್ವೇನ್ ಪ್ರಿಟೋರಿಯಸ್ ತಲಾ ಒಂದೊಂದು ವಿಕೆಟ್ ಪಡೆದರು.

Post a Comment

Previous Post Next Post