![]() |
ಮಹಾರಾಷ್ಟ್ರದ ನೂತನ ಸಿಎಂ ಆಗಿ ಶಿವಸೇನೆಯ ಏಕನಾಥ ಶಿಂಧೆ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ್ರು. ಇನ್ನು ಬಿಜೆಪಿ ಹೈಕಮಾಂಡ್ ನಾಯಕರ ಸೂಚನೆ ಮೇರೆಗೆ ಉಪ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ಸ್ವೀಕರಿಸಿದ್ರು. ಮುಂಬೈನ ರಾಜಭವನದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಇಬ್ಬರಿಗೂ ಪ್ರಮಾಣವಚನ ಬೋಧಿಸಿದ್ರು. ಈ ವೇಳೆ ಕಾರ್ಯಕರ್ತರು ಜೈಕಾರ ಹಾಕಿದ್ರು. ಶಿಂಧೆ ಬೆಂಬಲಿಗರು ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು.
Post a Comment