TextBook Row: ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ; ವಿರೋಧಿಸುವವರನ್ನು ಕರೆದು ಮಾತಾಡಿಸಿ; ಬರಗೂರು ರಾಮಚಂದ್ರಪ್ಪ ಪಠ್ಯಪುಸ್ತಕ ವಿರೋಧಿಸುವವರನ್ನು ಕರೆದು ತೀರ್ಮಾನ ಮಾಡುವುದು ಸರ್ಕಾರದ ಜವಾಬ್ದಾರಿ.‌ ಏಕಪಕ್ಷೀಯ ನಿರ್ಧಾರ ಸರಿಯಲ್ಲ. ಮರುಪರಿಷ್ಕರಣೆ ವಿರೋಧಿಸುತ್ತಿರುವವರನ್ನು ಮಾತುಕತೆಗೆ ಆಹ್ವಾನಿಸಿ ಎಂದು‌ ಮನವಿ ಮಾಡಿಕೊಂಡಿದ್ದಾರೆ‌.


: ಬೆಂಗಳೂರು (ಜೂ 4) : ಪಠ್ಯಪರಿಷ್ಕರಣೆ ಸಮಿತಿ ವಿರ್ಸಜನೆ ಹಿನ್ನೆಲೆ ಸಿಎಂ ಪತ್ರಿಕಾ ಪ್ರಕಟಣೆಗೆ (CM Press Release) ಸಾಹಿತಿ ಬರಗೂರು ರಾಮಚಂದ್ರಪ್ಪ (Baraguru Ramachandrappa) ಪ್ರತಿಕ್ರಿಯೆ ನೀಡಿದ್ದಾರೆ‌. ತಮ್ಮ ಪತ್ರದಲ್ಲಿ ಪ್ರಮುಖವಾಗಿ ಪಠ್ಯಪುಸ್ತಕ‌ ಪರಿಷ್ಕರಣೆ ಅಪೂರ್ಣವಾಗಿದೆ. ದಲಿತ, ಮಹಿಳಾ ಮತ್ತು ಸಂವಿಧಾನಾತ್ಮಕ ವಿರೋಧಿಯಾಗಿದೆ. ಬಸವಣ್ಣ, ಕುವೆಂಪು (Kuvempu) ಅವರ ಆದರ್ಶಕ್ಕೂ ವಿರುದ್ಧವಾಗಿದೆ. ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಗೌಣವಾಗಿದೆ. ಪಠ್ಯಪುಸ್ತಕ (Text Book) ವಿರೋಧಿಸುವವರನ್ನು ಕರೆದು ತೀರ್ಮಾನ ಮಾಡುವುದು ಸರ್ಕಾರದ ಜವಾಬ್ದಾರಿ.‌ ಏಕಪಕ್ಷೀಯ ನಿರ್ಧಾರ ಸರಿಯಲ್ಲ. ಮರುಪರಿಷ್ಕರಣೆ ವಿರೋಧಿಸುತ್ತಿರುವವರನ್ನು ಮಾತುಕತೆಗೆ ಆಹ್ವಾನಿಸಿ ಎಂದು‌ ಮನವಿ ಮಾಡಿಕೊಂಡಿದ್ದಾರೆ‌.



ಬರಗೂರು ರಾಮಚಂದ್ರಪ್ಪ ಅವರ ಪತ್ರದ ಸಂಪೂರ್ಣ ಭಾಗ ಇಲ್ಲಿ

 ಮುಖ್ಯಮಂತ್ರಿಯವರು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯ ಕೆಲವು ಅಂಶಗಳಿಗೆ ಸ್ಪಷ್ಟನೆ ನೀಡುವುದು ಅನಿವಾರ್ಯವಾಗಿದೆ



1. ಶ್ರೀ ಪಂಡಿತಾರಾಧ್ಯ ಸ್ವಾಮೀಜಿಯವರು ಮತ್ತು ನಾಡಿನ ಇತರೆ ಸ್ವಾಮೀಜಿಯವರು ಬಸವಣ್ಣನವರ ವಿಷಯದಲ್ಲಿ ಎತ್ತಿದ ಪ್ರಶ್ನೆಗೆ 'ಪ್ರೊ.ಬರಗೂರು ರಾಮಚಂದ್ರಪ್ಪ ಇವರ ಸಮಿತಿಯಿಂದ ರಚಿತವಾದ ಪಠ್ಯಪುಸ್ತಕ ಹಾಗೂ ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಸಾಮಾನ್ಯ ಅಂಶಗಳಿವೆ' ಎಂದಿದ್ದಾ



ವಾಸ್ತವ ಹೀಗಿದೆ



6ನೇ ತರಗತಿಯ ಸಮಾಜ ವಿಜ್ಞಾನ ಭಾಗ-2ರಲ್ಲಿ ನಾವು ಅಳವಡಿಸಿದ್ದ ವಿವರಗಳಲ್ಲಿ ಅಲ್ಪ ಸ್ವಲ್ಪ ಬದಲಾವಣೆ ಮಾಡಿ ಮರುಪರಿಷ್ಕರಣೆಯಲ್ಲಿ ಉಳಿಸಿಕೊಂಡಿದ್ದರೂ 9ನೇ ತರಗತಿಯ ಸಮಾಜ ವಿಜ್ಞಾನ- ಭಾಗ-1 ರಲ್ಲಿದ್ದ ಬಸವಣ್ಣನವರ ವಿವರಗಳಲ್ಲಿ ಕೆಲವು ಮುಖ್ಯ ಸಂಗತಿಗಳನ್ನು ಬಿಡಲಾಗಿದೆ. ಮರುಪರಿಷ್ಕರಣೆಯ ಪಠ್ಯದಲ್ಲಿ ಬಸವಣ್ಣನವರು ವೈದಿಕ ಮೂಲ ಮೌಡ್ಯಾಚರಣೆಗಳನ್ನು ವಿರೋಧಿಸಿದ್ದು, ಯಜೇಪವೀತವನ್ನು ಕಿತ್ತೆಸೆದದ್ದು, ಉನ್ನತಾಧಿಕಾರದಲ್ಲಿದ್ದರೂ ಚಳವಳಿ ಕಟ್ಟಿದ್ದು, 'ದೇಹವೇ ದೇಗುಲ' ಎಂಬ ಹೊಚ್ಚ ಹೊಸ ಪರಿಕಲ್ಪನೆ ನೀ



ಜನಸಾಮಾನ್ಯರಿಗೆ ತಲುಪುವ ಸರಳ ಕನ್ನಡದಲ್ಲಿ ವಚನಕಾರರು ಬರೆದದ್ದು-ಮುಂತಾದ ವಿಷಯಗಳನ್ನು ಮರುಪರಿಷ್ಕರಣೆಯಲ್ಲಿ ಬಿಡಲಾಗಿದೆ. ನಾವು ಪರಿಷ್ಕರಣೆ ಮಾಡಿದಾಗ ಕನ್ನಡ ಪ್ರಥಮ ಭಾಷೆ ಪಠ್ಯಪುಸ್ತಕಕ್ಕೆ 'ಬಸವಣ್ಣನವರ ಜೀವನ ದರ್ಶನ' ಕುರಿತ ಹೊಸ ಪಾಠವನ್ನು ಸೇರಿಸಿದ್ದೆವು ಎಂಬ ವಿಷಯವನ್ನು ಇಲ್ಲಿ ತಿಳಿಸಬಯಸುತ್ತೇನೆ.ಡಿದೆ :ರೆ..ದೆ.ತಿಳಿಸಬಯಸುತ್ತೇನೆ.

Post a Comment

Previous Post Next Post