Araga Jnanendra: ಪರಪ್ಪನ ಅಗ್ರಹಾರಕ್ಕೆ ಗೃಹ ಸಚಿವರ ದಿಢೀರ್ ಭೇಟಿ; ಅಕ್ರಮ ಚಟುವಟಿಕೆ ಸಹಿಸೋದಿಲ್ಲ ಕಾರಾಗೃಹಗಳಲ್ಲಿ ನಡೆಯುವ ಯಾವುದೇ ಅಕ್ರಮ ಚಟುವಟಿಕೆಗಳನ್ನು ಸಹಿಸುವುದಿಲ್ಲ. ತಪ್ಪು ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.


 ಬೆಂಗಳೂರು (ಜು. 12): ಮಹತ್ವದ ಬೆಳವಣಿಗೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಅವರು ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿದ್ದಾರೆ. ಇತ್ತೀಚೆಗೆ ಶಿವಮೊಗ್ಗದಲ್ಲಿ ಹತ್ಯೆಯಾದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಆರೋಪಿಗಳು ಜೈಲಿನಿನಲ್ಲಿ ಮೊಬೈಲ್ ಫೋನ್ (Mobile Phone)  ಬಳಕೆ ಮಾಡಿದ್ದ ಪ್ರಕರಣವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಗಂಭೀರವಾಗಿ ಪರಿಗಣಿಸಿದ್ದು, ಇದೇ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ (Central Jail) ದಿಢೀರ್ ಭೇಟಿ ನೀಡಿ, ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆಯನ್ನು ಕೊಟ್ಟಿದ್ದಾರೆ. ಯಾವುದೇ ಮುನ್ಸೂಚನೆ ನೀಡದೆ ಕೇಂದ್ರ ಕಾರಾಗೃಹಕ್ಕೆ ಆರಗ ಜ್ಞಾನೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ, ‘ಕಾರಾಗೃಹಗಳಲ್ಲಿ ನಡೆಯುವ ಯಾವುದೇ ಅಕ್ರಮ ಚಟುವಟಿಕೆಗಳನ್ನು(Illegal activity)  ಸಹಿಸುವುದಿಲ್ಲ. ತಪ್ಪು ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.

ಜೊತೆಗೆ ಜೈಲಿನಲ್ಲಿ ಕೈದಿಗಳು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ವೈದ್ಯಕೀಯ ಸೌಲಭ್ಯದ ಕುರಿತು ಮಾಹಿತಿ ಪಡೆದರು. ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಸೂಚಿಸಿದರು. ಇನ್ನು ರಕ್ಷಣಾ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದು ಸೂಕ್ತ ನಿರ್ದೇಶನ ನೀಡಿದ್ದಾ

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ.

ಬಳಿಕ ಮಾತನಾಡಿರುವ ಆರಗ ಜ್ನಾನೇಂದ್ರ ಅವರು, ‘ಕಾರಾಗೃಹದ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಜತೆ ಸಮಾಲೋಚನೆ ನಡೆಸಿದ್ದೇನೆ. ಹರ್ಷ ಹತ್ಯೆಯ ಆರೋಪಿಗಳು ಜೈಲಿನಲ್ಲಿ ಮೊಬೈಲ್ ಫೋನ್  ಬಳಕೆ ಮಾಡಿದ್ದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಬಗ್ಗೆ ತನಿಖೆ ಮುಂದುವರೆದಿದ್ದು, ಒಬ್ಬನನ್ನು ಬಂಧಿಸಿ ಮುಂದಿನ ತನಿಖೆ ನಡೆಸಿದ್ದೇವೆ’ ಎಂದ

ಇದನ್ನೂ ಓದಿ: BJP Tweet: ಕೆಪಿಸಿಸಿ ಅಧ್ಯಕ್ಷರು ಬರೀ ರಬ್ಬರ್ ಸ್ಟ್ಯಾಂಪ್ ಅಷ್ಟೇ; ಡಿಕೆಶಿ ನಿಮ್ಮ ತಾಯಿ ನೀಡಿದ ಎಚ್ಚರಿಕೆ ಮರೆಯಬೇ

‘ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ ಅಕ್ರಮ ಚಟುವಟಿಕೆಗಳ ಕುರಿತು ಮುರುಗನ್ ಸಮಿತಿ ನೀಡಿರುವ ಶಿಫಾರಸುಗಳನ್ನು ಅನುಷ್ಠಾನಗೊಳಿಸಲಾಗಿದೆ. ಇದೇ ಹಿನ್ನೆಲೆಯಲ್ಲಿ ಹಲವಾರು ಅಧಿಕಾರಿಗಳನ್ನು ಇಲ್ಲಿಂದ ವರ್ಗಾವಣೆ ಮಾಡಲಾಗಿದೆ. ಜೊತೆಗೆ ತಪ್ಪು ಕಂಡುಬಂದಿರುವ ಕೆಲವು ಅಧಿಕಾರಿಗಳನ್ನು ಅಮಾನತ್ತಿನಲ್ಲಿಡಲು ಶಿಫಾರಸು ಮಾಡಿದ್ದೇನೆ’ ಎಂದು ಗೃಹ ಸಚಿವರು ತಿಳಿಸಿದ್ದಾ

ಅತ್ಯಾಧುನಿಕ ಮೊಬೈಲ್ ನೆಟ್ವರ್ಕ್ ಜಾಮರ್ ಅಳವಡಿಕೆ

‘ರಾಜ್ಯಾದ್ಯಂತ ಕೇಂದ್ರ ಕಾರಾಗೃಹಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಮೊಬೈಲ್ ನೆಟ್ವರ್ಕ್ ಜಾಮರ್ಗಳನ್ನು ಅಳವಡಿಸಲು ನಿರ್ಧರಿಸಿದ್ದೇವೆ.  5 G ಸಾಮರ್ಥ್ಯದವರೆಗಿನ ಮೊಬೈಲ್ ನೆಟ್ವರ್ಕ್ ನಿಷ್ಕ್ರಿಯ ಗೊಳಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಆರಗ ಜ್ನಾನೇಂದ್ರ ಭರವಸೆ ನೀಡಿದ್ದಾ

‘ಜೈಲಿನ ಒಳಗೆ ಅಕ್ರಮವಾಗಿ, ಮಾದಕ ವಸ್ತುಗಳ ಪೂರೈಕೆ, ಕಾನೂನು ಬಾಹಿರವಾಗಿ ಕೈದಿಗಳಿಗೆ ವಿಶೇಷ ಸವಲತ್ತುಗಳನ್ನು ನೀಡುವುದು ಹಾಗೂ, ಮೊಬೈಲ್ ಬಳಕೆಯಂಥ ಅಕ್ರಮ ಚಟುವಟಿಕೆಗಳಿಗೆ ಅಂಕುಶ ಹಾಕಲು ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದೇನೆ’ ಎಂದು ಜ್ಞಾನೇಂದ್ರ ತಿಳಿಸಿದ್ದಾ

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಕೈದಿಗಳ ಭೇಟಿಗೆ ಬರುವ ಕುಟುಂಬ ಸದಸ್ಯರ ಹಾಗೂ ಇತರರಿಂದ ಅಕ್ರಮವಾಗಿ ಹಣ ವಸೂಲಿ ಕುರಿತೂ ಆರಗ ಜ್ಞಾನೇಂದ್ರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅಂತಹ ಪ್ರಕರಣ ನಡೆದಲ್ಲಿ ಕಠಿಣಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಭೇಟಿ ಸಂದರ್ಭದಲ್ಲಿ ಜೈಲಿನ ಅಧಿಕಾರಿಗಳು ಗೃಹ ಸಚಿವರಿಗೆ ಹಲವು ಮಾಹಿತಿಗಳನ್ನು ನೀಡಿದ್ದಾ

ಇದನ್ನೂ ಓದಿ: Karnataka Politics: ಬಿಜೆಪಿ ಆಡಳಿತದಲ್ಲಿ ಪರಿಶಿಷ್ಟರು ಅನಾಥ ಶಿಶುಗಳು; ಧೃವನಾರಾಯಣ ಕಿ

ಫುಟ್ಬಾಲ್ನಲ್ಲಿ ಮಾದಕ ವಸ್ತು

ಇತ್ತೀಚೆಗೆ ಫುಟ್ಬಾಲ್ನಲ್ಲಿ ಮಾದಕ ವಸ್ತುಗಳನ್ನು ತುಂಬಿಸಿ ಜೈಲಿನೊಳಕ್ಕೆ ಎಸೆದ ಘಟನೆ ಬಗ್ಗೆ ಗಂಭೀರ ತನಿಖೆ ನಡೆಸಲಾಗುತ್ತಿದೆ ಎಂದು ಭೇಟಿ ಸಂದರ್ಭದಲ್ಲಿ ಅಧಿಕಾರಿಗಳು ಗೃಹ ಸಚಿವ ಆರಗ ಜ್ನಾನೇಂದ್ರ ಅವರಿಗೆ ಮಾಹಿತಿ ನೀಡಿದರು. ಜೈಲಿಗೆ ಕರೆತರಲಾದ ವ್ಯಕ್ತಿಯೊಬ್ಬ ಕಾಲಿಗೆ ಬ್ಯಾಂಡೇಜ್ ಜೊತೆ ಕಟ್ಟಿಕೊಂಡಿದ್ದ ಮೊಬೈಲ್ ವಶಪಡಿಸಿಕೊಂಡಿದ್ದೇವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನೂ ಬಂಧಿಸಲಾಗಿದೆ ಎಂದು ಜೈಲಿನ ಅಧಿಕಾರಿಗಳು ಗೃಹ ಸಚಿವರಿಗೆ ಮಾಹಿತಿ ನೀಡಿದರು. ಇಂತಹ ವಿವಿಧ ಪ್ರಕರಣಗಳು ನಡೆಯದಂತೆ ಸೂಕ್ತ ಗಮನ ಹರಿಸಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ

ರಾಜ್ಯ ಕಾರಾಗೃಹಗಳ ಮುಖ್ಯಸ್ಥ ಅಲೋಕ್ ಮೋಹನ್, ಕೇಂದ್ರ ಕಾರಾಗೃಹ ಮುಖ್ಯಸ್ಥ ರಮೇಶ್ ಹಾಗೂ ಇತರ ಹಿರಿಯ ಅಧಿಕಾರಿಗಳು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ಸಂದರ್ಭ ಉಪಸ್ಥಿತರಿದ್ದರು. ದರು.ಗಳುಡಿರೆ.ರೆ.ರೆ...ರೆ.ಡಿರು..ರೆ.ದ್ರ ಭೇಟಿ ಸಂದರ್ಭ ಉಪಸ್ಥಿತರಿದ್ದರು.

Post a Comment

Previous Post Next Post