Basavaraj Bommai: ಕಾಶಿ ಯಾತ್ರೆಗೆ ಹೋಗುವವರಿಗೆ ಗುಡ್ ನ್ಯೂಸ್; ಸಹಾಯಧನ ವಿತರಿಸಿದ ಸಿಎಂ ಬೊಮ್ಮಾಯಿ


 ಮಜರಾಯಿ ಇಲಾಖೆಯ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಆನ್‌ಲೈನ್‌ ಮೂಲಕ ಹಣ ವರ್ಗಾವಣೆ ಮಾಡಿ ಯೋಜನೆಗೆ ಚಾಲನೆ ನೀಡಿದರು.ಬೆಂಗಳೂರು (ಜು. 14): ರಾಜ್ಯದಿಂದ ಕಾಶಿ ಯಾತ್ರೆಗೆ (Kashi Yatre) ತೆರಳುವವರಿಗೆ ರಾಜ್ಯ ಸರ್ಕಾರ ತಲಾ 5 ಸಾವಿರ ರೂಪಾಯಿ ಸಹಾಯಧನ ಯೋಜನೆಯನ್ನು ಘೋಷಣೆ ಮಾಡಿದ್ದ ಯೋಜನೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ವಿಧಾನಸೌಧದಲ್ಲಿ ಮಜರಾಯಿ ಇಲಾಖೆಯ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಆನ್‌ಲೈನ್‌ (Online) ಮೂಲಕ ಹಣ ವರ್ಗಾವಣೆ ಮಾಡಿ ಯೋಜನೆಗೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಆನ್‌ಲೈನ್‌ ಮೂಲಕ ಅರ್ಜಿಸಲ್ಲಿಸುವ ವೆಬ್‌ ಪೋರ್ಟಲ್‌ನ್ನು (Web Portal) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಲೋಕಾರ್ಪಣೆಗೊಳಿಸಿದರು

ಮೊದಲು ಅಂತಿಮ ಯಾತ್ರೆಗೆ ಹೋಗುತ್ತಿದ್ದ ಜ

ಹೊಸ ಯೋಜನೆಗೆ ಚಾಲನೆ ಕೊಟ್ಟ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಇದೊಂದು ಹೊಸ ಕಾರ್ಯಕ್ರಮ. ಕಾಶಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸಂಪೂರ್ಣವಾಗಿ ನವೀಕರಣ ಮಾಡಿದ್ದಾರೆ. ಕಾಶಿಯಲ್ಲಿ ಈ ಮೊದಲು ಯಾವುದೇ ವ್ಯವಸ್ಥೆಗಳಿಲ್ಲದಿದ್ದಾಗ ಜನರು ಅಂತಿಮಯಾತ್ರೆಗೆ ಅಂತ ಹೋಗುತ್ತಿದ್ದರು. ಈಗ ಬಹಳಷ್ಟು ಬದಲಾವಣೆ ಆಗಿದೆ. ನೇರವಾಗಿ ವಾರಣಾಸಿಗೆ ವಿಮಾನ, ರೈಲು, ಬಸ್ ವ್ಯವಸ್ಥೆಯಾಗಿದೆ. ಇದರಿಂದ ಕಾಶಿ ಯಾತ್ರಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಕಾಶಿ ಯಾತ್ರೆಗೆ ಹೋಗಿ ಬಂದ ಹತ್ತು ಜನರಿಗೆ ಚೆಕ್ ವಿತರಣೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ನೇರವಾಗಿ ಡಿ.ಬಿ.ಟಿ ಮೂಲಕ ಆನ್ ಲೈನ್’ನಲ್ಲಿ ಸಹಾಯಧನ ವರ್ಗಾವಣೆ ಆಗಲಿದೆ’ ಎಂದ

ಆದರೆ ಕಾಶಿ ಈಗ ಹೇಗಿದೆ ಗೊತ್ತಾ

ಕಾಶಿಯ ಗಂಗಾ ತಟವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ. ಸುಮಾರು 23 ಘಾಟ್ ಗಳನ್ನು ನವೀಕರಣ ಮಾಡಿ, ನೇರವಾಗಿ ರಸ್ತೆಯ ಮೂಲಕ ವಿಶ್ವನಾಥನ ದೇವಸ್ಥಾನಕ್ಕೆ ಹೋಗುವ ರೀತಿಯಲ್ಲಿ ಅಭಿವೃದ್ಧಿ ಪಡಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿ

ಇದನ್ನೂ ಓದಿ: PSI Recruitment Scam: ಅಮೃತ್ ಪೌಲ್ರನ್ನು ಮಂಪರು ಪರೀಕ್ಷೆಗೆ ಒಳಪಡಿಸಿ, ಅವ್ರ ಡೈರಿಯಲ್ಲಿ ಏನಿದೆ ಹೇಳಿ- ಸಿದ್ದರಾ

ಸುರಕ್ಷಿತ ಕಾಶಿ ಯಾತ್ರೆಗೆ ಒತ್ತು

ಕರ್ನಾಟಕದಿಂದ ಕಾಶಿಗೆ ತೆರಳುವ ಯಾತ್ರಾರ್ಥಿಗಳಿಗೆ ಕೇವಲ ಸಹಾಯಧನ 5 ಸಾವಿರ ರೂಪಾಯಿ ಕೊಡುವುದಷ್ಟೇ ಅಲ್ಲ. ಸುರಕ್ಷಿತವಾಗಿ ರೈಲಿನಲ್ಲಿ ಕರೆದುಕೊಂಡು ಹೋಗುವುದು. ಯಾತ್ರೆಯ ದಾರಿಯಲ್ಲಿ ಮತ್ತು ಅಲ್ಲಿರುವ ಕರ್ನಾಟಕ ಛತ್ರದಲ್ಲಿ ಎಲ್ಲ ಒಳ್ಳೆಯ ವ್ಯವಸ್ಥೆ ಇದೆ. ಯಾವುದೇ ಅವ್ಯವಹಾರ ನಡೆಯದಂತೆ ಯಾತ್ರೆಗೆ ತೆರಳಿ ಮರಳಿ ಬರುವಾಗ ರಸೀದಿ ತರುವ ವ್ಯವಸ್ಥೆ ಮಾಡಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿ

ಕಾಶಿ ಯಾತ್ರೆ ಸಹಾಯಧನ ಪಡೆಯುವುದು ಹೇ

ಇದೇ ವೇಳೆ ಮಾತನಾಡಿದ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ‘ಏಪ್ರಿಲ್‌ 1, 2022 ರಿಂದ ಜುಲೈ 20, 2022ರ ವರೆಗೆ ಕಾಶಿ ಯಾತ್ರೆಯನ್ನು ಕೈಗೊಂಡಿರುವ ಜನರು ಆಫ್‌ಲೈನ್‌ ಅರ್ಜಿಗಳನ್ನು ಮುಜರಾಯಿ ಆಯುಕ್ತರ ಕಚೇರಿಗೆ ಸಲ್ಲಿಸುವ ಮೂಲಕ ಸಹಾಯಧನ ಪಡೆದುಕೊಳ್ಳಬಹುದಾಗಿದೆ. ಇದುವರೆಗೂ 500 ಕ್ಕೂ ಹೆಚ್ಚು ಆಫ್‌ಲೈನ್‌ ಅರ್ಜಿಗಳು ಸಲ್ಲಿಕೆಯಾಗಿವೆ. ಇನ್ನು ಮುಂದೆ ಕಾಶಿ ಯಾತ್ರೆಯನ್ನು ಕೈಗೊಂಡು ಸರ್ಕಾರದ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ಯಾತ್ರಾರ್ಥಿಗಳು ಸರ್ಕಾರದ ಮಾರ್ಗಸೂಚಿಯ ಅನ್ವಯ ಸಂಬಂಧಿಸಿದ ದಾಖಲಾತಿಗಳನ್ನು ಸಲ್ಲಿಸಬೇಕು’ ಎಂದ

ಇದನ್ನೂ ಓದಿ: Basavaraj Bommai: ರಾಜ್ಯದಲ್ಲಿ ವರುಣನ ಆರ್ಭಟಕ್ಕೆ 32 ಮಂದಿ ಬಲಿ; ಪರಿಹಾರಕ್ಕೆ 500 ಕೋಟಿ, ಜುಲೈನಲ್ಲಿ ಭಾರೀ ಮಳೆ- ಸಿ

ಇಲಾಖೆಯ ವೆಬ್‌ಸೈಟ್‌ https://itms.kar.nic.in/ ಮತ್ತು ಸೇವಾ ಸಿಂಧು ಮೂಲಕ ವೆಬ್‌ ಪೊರ್ಟ್‌ಲ್‌ನಲ್ಲಿ (https://sevasindhu.karnataka.gov.in/) ಅಪ್‌ಲೋಡ್‌ ಮಾಡಬೇಕು. ಈ ರೀತಿಯಾಗಿ ಅಪ್‌ಲೋಡ್‌ ಮಾಡಲಾದ ದಾಖಲೆಗಳನ್ನು ಪರಿಶೀಲಿಸಿ ಅರ್ಜಿದಾರರ ಆಧಾರ್‌ ಲಿಂಕ್‌ ಹೊಂದಿರತಕ್ಕಂತಹ ಬ್ಯಾಂಕ್‌ ಖಾತೆಗೆ ರೂ. 5,000 ಗಳ ಸಹಾಯಧನವನ್ನು ನೇರವಾಗಿ ಡಿ.ಬಿ.ಟಿ ಮೂಲಕ ಜಮಾ ಮಾಡಲಾಗುವುದು ಎಂದು ಶಶಿಕಲಾ ಜೊಲ್ಲೆ ಮಾಹಿತಿ ನೀಡಿದರು. ಎಂರು.ಗೆ?ದರು.ಮಯ್ಯದರು.?ರು.ನರು. ಶಶಿಕಲಾ ಜೊಲ್ಲೆ ಮಾಹಿತಿ ನೀಡಿದರು.

Post a Comment

Previous Post Next Post