Chandrashekhar Guruji ಹತ್ಯೆ ಬಗ್ಗೆ ಆರೋಪಿ ಕೊಟ್ಟಿದ್ದನಾ ಸುಳಿವು? ಸಂಭವಾಮಿ ಯುಗೇ ಯುಗೇ ಎಂದಿದ್ದೇಕೆ ಹಂತಕ?


 4 ಗಂಟೆಯೊಳಗೆ ಆರೋಪಿಗಳಿಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಈ ಪೈಕಿ ಮಹಾಂತೇಶ ಶಿರೂರ ಎಂಬಾತ ತನ್ನ ಫೇಸ್‌ಬುಕ್‌ ಪೋಸ್ಟ್‌ನಲ್ಲಿ (Facebook Post) ಗುರೂಜಿ ಹತ್ಯೆ ಬಗ್ಗೆ ಸುಳಿವು ಕೊಟ್ಟಿದ್ದನಾ ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿದೆ

 ಹುಬ್ಬಳ್ಳಿ: ಖ್ಯಾತ ವಾಸ್ತು ತಜ್ಞ (Vastu Expert), ಮಾನವ ಗುರು ಅಂತಾನೇ ಖ್ಯಾತಿ ಪಡೆದಿದ್ದ ಚಂದ್ರಶೇಖರ್ ಗುರೂಜಿ (Chandrashekhar Guruji) ಹತ್ಯೆ ಪ್ರಕರಣ (Murder Case) ಭಾರೀ ಸುದ್ದಿ ಮಾಡುತ್ತಿದೆ. ಹುಬ್ಬಳ್ಳಿಯ (Hubballi) ಉಣಕಲ್ ನಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ (Hotel) ಹಾಡಹಗಲೇ ಭಕ್ತರ ಸೋಗಿನಲ್ಲಿ ಬಂದ ಇಬ್ಬರು ಚಾಕುವಿನಿಂದ ಇರಿದು ಚಂದ್ರಶೇಖರ್ ಗುರೂಜಿಯನ್ನು ಹತ್ಯೆ ಮಾಡಿದ್ದರು. ಚಂದ್ರಶೇಖರ್‌ ಗುರೂಜಿ ಇಂದು ಹೋಟೆಲಿನಲ್ಲಿ ತಂಗಿದ್ದರು. ಹೋಟೆಲಿನಲ್ಲಿ ತಂಗಿದ್ದ ಇವರಿಗೆ ಕರೆ ಮಾಡಿದ ಇಬ್ಬರು ರಿಸೆಪ್ಶನಿಸ್ಟ್‌ ಜಾಗಕ್ಕೆ ಬರಲು ಹೇಳಿದ್ದಾರೆ. ಅವರು ಬರುತ್ತಿದ್ದಂತೆ ಸುಮಾರು 60 ಬಾರಿ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದರು. ಇದಾಗಿ ಕೇವಲ 4 ಗಂಟೆಯೊಳಗೆ ಆರೋಪಿಗಳಿಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಇದೀಗ ಈ ಪೈಕಿ ಮಹಾಂತೇಶ ಶಿರೂರ ಎಂಬಾತ ತನ್ನ ಫೇಸ್‌ಬುಕ್‌ ಪೋಸ್ಟ್‌ನಲ್ಲಿ (Facebook Post) ಗುರೂಜಿ ಹತ್ಯೆ ಬಗ್ಗೆ ಸುಳಿವು ಕೊಟ್ಟಿದ್ದನಾ ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿದೆ

“ಸಂಭವಾಮಿ ಯುಗೇ ಯುಗೇ” ಅಂತ ಆರೋಪಿ 

ಕೆಲ ದಿನಗಳ ಹಿಂದೆ ಆರೋಪಿ ಮಹಾಂತೇಶ ಶಿರೂರ ಎಂಬಾತ ತನ್ನ ಫೇಸ್‌ಬುಕ್‌ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದ. 'ಅಧರ್ಮ ತಾಂಡವಾಡುತ್ತಿರುವಾಗ ದುಷ್ಟರನ್ನ ನಾಶ ಮಾಡಲು ಮತ್ತು ಧರ್ಮವನ್ನು ಪುನಃ ಸ್ಥಾಪಿಸಲು ನೀನು ಬರುವುದಾಗಿ ವಚನ ನೀಡಿರುವೆ ಪ್ರಭು.. ಇನ್ನೂ ವಿಳಂಬ ಏಕೆ ಭಗವಂತ..? ಆದಷ್ಟು ಬೇಗಾ ಅವತರಿಸು ಪ್ರಭು..! ಸಂಭವಾಮಿ ಯುಗೇ.. ಯುಗೇ...' ಅಂತ ಬರೆದುಕೊಂಡಿದ್ದ

ಆರೋಪಿಯ ಫೇಸ್‌ಬುಕ್ ಪೋಸ್ಟ್

ಫೇಸ್‌ಬುಕ್‌ ಪೋಸ್ಟ್‌ನಲ್ಲಿ ಸುಳಿವು ಕೊಟ್ಟಿದ್ದನಾ ಆರೋ

ಆರೋಪಿ ಮಹಾಂತೇಶ ಶಿರೂರ ಕಳೆದ 5 ದಿನಗಳ ಹಿಂದೆ ತನ್ನ ಫೇಸ್‌ಬುಕ್‌ನಲ್ಲಿ ಈ ರೀತಿಯ ಪೋಸ್ಟ್ ಮಾಡಿದ್ದ. ಚಂದ್ರಶೇಖರ ಗುರೂಜಿ ಅವರ ಹತ್ಯೆ ನಡೆಯುತ್ತಿದ್ದಂತೆ ಆರೋಪಿ ಮಾಡಿದ್ದ ಫೇಸ್‌ಬುಕ್ ಪೋಸ್ಟ್ ವೈರಲ್ ಆಗಿದೆ. ಈ ಬಗ್ಗೆ ಇದೀಗ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಚಂದ್ರಶೇಖರ ಗುರೂಜಿ ಅವರ ಹತ್ಯೆ ಪಕ್ಕಾ ಪೂರ್ವ ನಿಯೋಜಿತ ಕೃತ್ಯ ಎಂಬ ಅನುಮಾನ ಜನರಲ್ಲಿ ಹುಟ್ಟಿ

ಇದನ್ನೂ ಓದಿ: Breaking News: ಚಂದ್ರಶೇಖರ್ ಗುರೂಜಿ ಹತ್ಯೆ ಕೇಸ್‌ನಲ್ಲಿ ಇಬ್ಬರು ಅರೆಸ್ಟ್! ನಾಲ್ಕೇ ಗಂಟೆಗಳಲ್ಲಿ ಕೋಳ ತೊಡಿಸಿದ ಪೊಲೀಸ

4 ಗಂಟೆಯಲ್ಲೇ ಇಬ್ಬರು ಆರೋಪಿಗಳ ಬಂ

ಚಂದ್ರಶೇಖರ್ ಗುರೂಜಿ ಹತ್ಯೆ ನಡೆದ ಕೇವಲ ನಾಲ್ಕೇ ಗಂಟೆಯಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಹಾಂತೇಶ್ ಶಿರೂರ ಹಾಗೂ ಮಂಜುನಾಥ್ ಶಿಅಂತ ಗುರುತಿಸಲಾಗಿದೆ. ಈ ಇಬ್ಬರು ಆರೋಪಿಗಳು ಗುರೂಜಿ ಆಪ್ತ ವಲಯದಲ್ಲೇ ಗುರುತಿಸಿಕೊಂಡವರು ಎಂಬುದು ಪ್ರಾಥಮಿಕ ತನಿಖೆ ವೇಳೆ ಗೊತ್ತಾಗಿ

ಆರೋಪಿಗಳ ಪತ್ತೆಗೆ ವಿಶೇಷ

ವಿದ್ಯಾನಗರ ಪೊಲೀಸರು ರಾಮದುರ್ಗದ ಬಸವೇಶ್ವರ ಸರ್ಕಲ್‌ನಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಹಂತಕರನ್ನು ಹಿಡಿಯಲು ಎಸಿಪಿ ವಿನೋದ್ ಮುಕ್ತೇದಾರ್ ನೇತೃತ್ವದಲ್ಲಿ ಐದು ತಂಡಗಳನ್ನು ರಚನೆ ಮಾಡಲಾಗಿತ್ತು. ಹುಬ್ಬಳ್ಳಿಯ ಎಂಟೂ ದಿಕ್ಕಿನಲ್ಲಿ ನಾಕಾಬಂಧಿ ಹಾಕಲಾಗಿತ್ತು. ಅಕ್ಕ-ಪಕ್ಕದ ಜಿಲ್ಲೆಗಳ ಪೊಲೀಸರಿಗೂ ಮಾಹಿತಿ ರವಾನೆ ಮಾಡಲಾಗಿತ್ತು ಎಂದು ಹುಬ್ಬಳ್ಳಿಯ ಪೊಲೀಸ್ ಕಮಿಷನರ್ ಲಾಬೂರಾಮ್ ಮಾಹಿತಿ ನೀಡಿದ್ದಾ

ಇದನ್ನೂ ಓದಿ: Chandrashekhar Guruji Profile: ಸರಳ ವಾಸ್ತು ಚಂದ್ರಶೇಖರ್ ಗುರೂಜಿ ವಾಸ್ತುಶಾಸ್ತ್ರ ಕಲಿತದ್ದು ಎಲ್ಲಿ? ಹೀಗಿತ್ತು ಅವರ ಜೀ

ಸಿನಿಮೀಯ ರೀತಿಯಲ್ಲಿ ಆರೋಪಿಗಳಿಗೆ

ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಆರೋಪಿಗಳಾದ ಮಹಾಂತೇಶ್ ಶಿರೂರ ಮತ್ತು ಮಂಜುನಾಥ ದುಮ್ಮವಾಡನನ್ನು ಬಂಧಿಸಿದ್ದಾರೆ. ಆರೋಪಿಗಳು ಕಾರಿನಲ್ಲಿ ಪರಾರಿಯಾಗುತ್ತಿದ್ದಾರೆ ಎಂಬ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು.  ರಸ್ತೆ ಮಧ್ಯೆ ಜೆಸಿಬಿಯಿಂದ ಆರೋಪಿಗಳಿದ್ದ ಕಾರನ್ನು ಅಡ್ಡಗಟ್ಟಿದ ಪೊಲೀಸರು ಆರೋಪಿಗಳು ಪ್ರತಿದಾಳಿ ನಡೆಸಬಹುದು ಎಂಬ ಮುನ್ನೆಚ್ಚರಿಕೆಯಿಂದ ಗನ್ ಪಾಯಿಂಟ್ ನಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.  ಕೋಳವನರೆ. ತಂಡದೆ.ಧನರುದೆ.ಪಿ?.ಬರಹ. ನಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.

Post a Comment

Previous Post Next Post