ಗೋಕುಲ್ ರೋಡ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಇಸ್ಟೇಟ್ ಜೂಜಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಇನ್ಸಪೆಕ್ಟರ್ ಸೇರಿ ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ದಾಳಿ ವೇಳೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದರು. ಓರ್ವ ಇನ್ಸಪೆಕ್ಟರ್ ಪರಾರಿಯಾಗಿದ್ದ. ಇದೀಗ ಇಲಾಖಾ ತನಿಖೆಗೆ ಆದೇಶಿಸಲಾಗಿದೆ.
ಹುಬ್ಬಳ್ಳಿ: ಪೊಲೀಸ್ (Police) ಸಿಬ್ಬಂದಿಯಿಂದಲೇ ಇಸ್ಪೀಟ್ ಜೂಜಾಟ (Gambling) ಪ್ರಕರಣಕ್ಕೆ ಸಂಬಂಧಿಸಿ ಜೂಜಾಟ ನಿರತರಾಗಿದ್ದ ಪೊಲೀಸ್ ಇನ್ಸ್ಪೆಕ್ಟರ್ (Police Inspector) ಸೇರಿ ಐವರನ್ನು ಅಮಾನತು ಮಾಡಿ ಹುಬ್ಬಳ್ಳಿ-ಧಾರವಾಡ (Hubballi-Dharwad) ಪೊಲೀಸ್ ಆಯುಕ್ತ ಲಾಭೂರಾಮ್ ಆದೇಶಿಸಿದ್ದಾರೆ. ಪೊಲೀಸ್ ಇಲಾಖೆಯಲ್ಲಿದ್ದೇವೆ ಅನ್ನೋದನ್ನೇ ಮರೆತು ಹುಬ್ಬಳ್ಳಿಯ ಅಕ್ಷಯ ಕಾಲನಿಯ ಮನೆಯೊಂದರಲ್ಲಿ ಆರೋಪಿಗಳು ಇಸ್ಪೀಟ್ ಜೂಜಾಟವಾಡಿದ್ದರು. ಘಟನೆಗೆ ಸಂಬಂಧಿಸಿ ಓರ್ವ ಇನ್ಸ್ಪೆಕ್ಟರ್ ಸೇರಿ ಐವರು ಪೊಲೀಸ್ ಸಿಬ್ಬಂದಿ ಅಮಾನತು ಮಾಡಲಾಗಿದೆ.
ಸಸ್ಪೆಂಡ್ ಆದ ಪೊಲೀಸರು ಯಾರು?
ಹುಬ್ಬಳ್ಳಿ-ಧಾರವಾಡ ಸಿಎಆರ್ ರಿಸರ್ವ್ ಪೊಲೀಸ್ ಇನ್‌ಸ್ಪೆಕ್ಟರ್ (ಆರ್ ಪಿಐ) ಸಂತೋಷ ಬೋಜಪ್ಪಗೋಳ, ಸಿಎಆರ್ ಹೆಡ್ ಕಾನ್ ಸ್ಟೆಬಲ್‌ಗಳಾದ ಮುತ್ತಪ್ಪ ಕಾಟನಾಯಕ, ನವೀನ ತೋಪಲಕಟ್ಟಿ, ಪೂರ್ವ ಸಂಚಾರ ಠಾಣೆಯ ಕಾನ್‌ಸ್ಟೆಬಲ್ ಬಸವಣ್ಯಪ್ಪ ಬಾವಿಹಾಳ ಹಾಗೂ ಸಿಎಆರ್‌ನ ನಿವೃತ್ತ ಹೆಡ ಕಾನ್‌ಸ್ಟೆಬಲ್ ಶ್ರೀಕಾಂತ ಗೋಂದಕರ ಅಮಾನತುಗೊಂಡ ಸಿಬ್ಬಂದಿಗಳಾಗಿದ್ದಾ
ಪೊಲೀಸರಿಂದ ಆರೋಪಿಗಳ ವಿಚಾರಣೆ
ಪೊಲೀಸರಿಂದಲೇ ಎಕ್ಕಾ, ರಾಜ ರಾಣಿ!
ಅಕ್ಷಯ ಕಾಲನಿಯ ಎರಡನೇ ಹಂತದ 337 ಸಂಖ್ಯೆಯ ಬಾಡಿಗೆ ಮನೆಯಲ್ಲಿ ಪೊಲೀಸ್ ಅಧಿಕಾರಿ- ಸಿಬ್ಬಂದಿಯೇ ಎಕ್ಕ- ರಾಜ- ರಾಣಿ, ಅಂದರ್ ಬಾಹರ್ ಆಟವಾಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸ್ ಆಯುಕ್ತರ ಸೂಚನೆಯಂತೆ ಗೋಕುಲ ರೋಡ್ ಠಾಣೆ ಇನ್‌ಸ್ಪೆಕ್ಟರ್ ಜೆ.ಎಂ. ಕಾಲಿಮಿರ್ಚಿ ನೇತೃತ್ವದ ತಂಡ ದಾಳಿ ನಡೆಸಲಾಗಿತ್ತು.
ಇದನ್ನೂ ಓದಿ: NIA Raid: 6 ರಾಜ್ಯಗಳ 13 ಸ್ಥಳಗಳಲ್ಲಿ ಎನ್ಐಎ ದಾಳಿ; ತುಮಕೂರಲ್ಲಿ ವಿದ್ಯಾರ್ಥಿ, ಭಟ್ಕಳದಲ್ಲಿ ಶಂಕಿತರು ಅರೆಸ್ಟ್
ನಾಲ್ವರು ವಶಕ್ಕೆ, ಓರ್ವ ಪರಾರಿ
ಈ ವೇಳೆ ಸಾವಿರಾರಿ ರೂಪಾಯಿ ಹಣ ಮಧ್ಯದಲ್ಲಿಟ್ಟುಕೊಂಡು ಇಸ್ಪೇಟ್ ಆಡುತ್ತಿದ್ದುದು ಗಮನಕ್ಕೆ ಬಂದಿತ್ತು. ದಾಳಿ ವೇಳೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದರು. ಓರ್ವ ಇನ್ಸಪೆಕ್ಟರ್ ಪರಾರಿಯಾಗಿದ್ದ. ಪ್ರಕರಣ ದಾಖಲಿಸಿ ಕೊಂಡಿದ್ದ ಗೋಕುಲ ರೋಡ್ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಅಮಾನತು ಮಾಡಿ ಕಾನೂನು ಉಲ್ಲಂಘಿಸುವವರು ಯಾರೇ ಆಗಿದ್ದರೂ ಬಿಡುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಪೊಲೀಸ್ ಆಯುಕ್ತ ಲಾಭೂರಾಮ್ ರವಾ
ನಿಸಿದ್ದಾರೆ.ಕಾನೂನು ಉಲ್ಲಂಘಿಸುವವರು ಯಾರೇ ಆಗಿದ್ದರೂ ಬಿಡುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಪೊಲೀಸ್ ಆಯುಕ್ತ ಲಾಭೂರಾಮ್ ರವಾನಿಸಿದ್ದಾರೆ.
ಪೊಲೀಸರಿಂದ ಆರೋಪಿಗಳ ವಿಚಾರಣೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಅಗ್ನಿ ಅವಘಡ
ಹುಬ್ಬಳ್ಳಿಯಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಎಪಿಎಂಸಿಯಲ್ಲಿನ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸಂಭವಿಸಬಹುದಾದ ಬಾರಿ ದುರಂತವನ್ನು ತಪ್ಪಿಸಿದೆ. ಎಪಿಎಂಸಿಯ ಜಗದಂಬಾ ಟ್ರೇಡರ್ಸ್ ಕಿರಾಣಿ ಅಂಗಡಿಯಲ್ಲಿ ದುರ್ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ನವನಗರ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಆತಂಕದಲ್ಲಿದ್ದಾರೆ ಸ್ಥಳೀಯ ಜನ
ಕೆಲ ದಿನಗಳ ಹಿಂದೆಯಷ್ಟೇ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ನಡೆದಿದ್ದ ಅಗ್ನಿ ಅವಘಡ ಪ್ರಕರಣದಲ್ಲಿ ನಾಲ್ವರು ಸಾವನ್ನಪ್ಪಿ, ಇನ್ನೂ ನಾಲ್ವರು ಗಂಭೀರವಾಗಿ ಗಾಯಗೊಂಡಿರೋ ಘಟನೆ ನಡೆದಿತ್ತು. ಈಗಲೂ ಗಾಯಾಳುಗಳಿಗೆ ಕಿಮ್ಸ್ ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಈ ಘಟನೆ ಹಸಿರಿರುವಾಗಲೇ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಪ್ರಯತ್ನದಿಂದ ಹೆಚ್ಚಿನ ಅನಾಹುತ ತಪ್ಪಿದೆ.
ಹುಬ್ಬಳ್ಳಿ ಪೊಲೀಸರಿಂದ ಮಾನಸಿಕ ಅಸ್ವಸ್ಥೆಯ ರಕ್ಷಣೆ
ಮಾನಸಿಕ ಅಸ್ವಸ್ಥತೆಯೊಬ್ಬಳನ್ನು ಹುಬ್ಬಳ್ಳಿ ಗ್ರಾಮೀಣ ಠಾಣೆ ಪೋಲಿಸರು ರಕ್ಷಣೆ ಮಾಡಿದ್ದಾರೆ. ಧಾರವಾಡದ ನವಲೂರಿನ ನೀಲ್ಲವ್ವ ದ್ಯಾಮಣ್ಣ ವಾಡೆಕರ್ (40) ಎಂಬಾಕೆಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಈಕೆ ನಿನ್ನೆ ಮನೆಯಿಂದ ಹೊರ ಹೋಗಿ ಮನೆಗೆ ವಾಪಸ್ಸಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದ್ದರು. ಇಂದು ಈ ಮಹಿಳೆ ಹಳೇ ಹುಬ್ಬಳ್ಳಿ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಸಿಕ್ಕಿದ್ದು ಅವರನ್ನು ರಕ್ಷಣೆ ಮಾಡಿ ಮನೆಗೆ ಕಳಿಸುವ ಕಾರ್ಯವನ್ನು ಪೋಲಿಸರು ಮಾಡಿದ್ದಾರೆ.
ಇದನ್ನೂ ಓದಿ: Breaking News: ಐಸಿಸ್ ಜೊತೆ ನಂಟು ಹೊಂದಿರೋ ಶಂಕೆ, ಭಟ್ಕಳದಲ್ಲಿ ಇಬ್ಬರನ್ನು ವಶಕ್ಕೆ ಪಡೆದ NIA
ಇನ್ನು ಇದೇ ಮಹಿಳೆ ಶವವಾಗಿ ಪತ್ತೆಯಾಗಿದ್ದಾಳೆಂಬ ಸುಳ್ಳು ವದಂತಿಗಳೂ ಹರಡಿ ಕುಟುಂಬದ ಸದಸ್ಯರನ್ನು ಆತಂಕಕ್ಕೀಡು ಮಾಡಿತ್ತು. ಸದ್ಯ ಮಹಿಳೆ ಜೀವಂತವಿದ್ದು ಗ್ರಾಮೀಣ ಠಾಣೆ ಪೋಲಿಸರು ರಕ್ಷಣೆ ಮಾಡಿ ಕುಟುಂಬದ ಸದಸ್ಯರೊಂದಿಗೆ ಕಳುಹಿಸಿಕೊಟ್ಟಿದ್ದಾರೆ.



Post a Comment