Karnataka Politics: ವಿಧಾನಸಭೆ ಎಲೆಕ್ಷನ್​ನಲ್ಲಿ ನಿಖಿಲ್ ಸ್ಪರ್ಧೆ ಮಾಡೋದಿಲ್ಲ; H D ಕುಮಾರಸ್ವಾಮಿ​


 20 ರಿಂದ 30 ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಮಾಡಲು ನಿಖಿಲ್ ಹೋರಾಟ ಮಾಡ್ತಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧೆ ಮಾಡೋದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ

ಮಂಡ್ಯ (ಜು.26): ವಿಧಾನಸಭೆಗೆ ನಿಖಿಲ್ ಕುಮಾರಸ್ವಾಮಿ (Nikhil Kumarswamy) ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ (H.D Kumarswamy) ಹೇಳಿದ್ದಾರೆ.  ಮದ್ದೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ 2023ರ ವಿಧಾನಸಭೆ ಚುನಾವಣೆಯಲ್ಲಿ (Election) ಸ್ಪರ್ಧೆ ಮಾಡ್ತಾರೆ ಅಂತ ಯಾರು ಹೇಳಿದ್ರು? ಅವರು ಆ ಚುನಾವಣೆಯಲ್ಲಿ ನಿಲ್ತಿಲ್ಲ. 20 ರಿಂದ 30 ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಮಾಡಲು ನಿಖಿಲ್ ಹೋರಾಟ ಮಾಡ್ತಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ (Assembly Election) ನಿಖಿಲ್ ಸ್ಪರ್ಧೆ ಮಾಡೋದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ

ಮಂಡ್ಯದ ಟ್ರಯಲ್ ಬ್ಲಾಸ್ಟ್ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕೆ‌.ಆರ್.ಎಸ್. ಭಾಗದಲ್ಲಿ ಟ್ರಯಲ್ ಬ್ಲಾಸ್ಟ್ ಮಾಡಬೇಕಾ? ಬೇಡ್ವಾ ಎಂಬ ಬಗ್ಗೆ ನನಗೆ ಗೊತ್ತಿಲ್ಲ. ಟ್ರಯಲ್ ಬ್ಲಾಸ್ಟ್ ನಡೆಸೋದನ್ನ ಸರ್ಕಾರ ನಿಲ್ಲಿಸಿದೆ. ಅಲ್ಲಿ ಯಾವ ರೀತಿ ಪರಿಸ್ಥಿತಿ ಇದೆ ಎಂಬುದು ನನಗೆ ಗೊತ್ತಿಲ್ಲ. ಈ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ. ಆ ಭಾಗದಲ್ಲಿ ರೈತರು ಆತಂಕದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಪರಿಸ್ಥಿತಿ, ವಾಸ್ತವಾಂಶ ತಿಳಿದುಕೊಂಡು ಸರ್ಕಾರ ಟ್ರಯಲ್ ಬ್ಲಾಸ್ಟ್ ಬಗ್ಗೆ ತೀರ್ಮಾನ ಮಾಡಬೇಕು ಎಂದು ಹೇಳಿದ

ಜೆಡಿಎಸ್ ಪಕ್ಷ ಮುಗಿಸಬೇಕು ಹೊರಟಿದ್ದಾರೆ

ಬಳಿಕ ಕುಮಾರಸ್ವಾಮಿ, ರಾಮನಗರ ನಗರ ವ್ಯಾಪ್ತಿಯ ಕೆಂಪೇಗೌಡನ ದೊಡ್ಡಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಹಾಗೂ ಡಿಜಿಟಲ್ ಗ್ರಂಥಾಲಯ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು ಹಳೆ ಮೈಸೂರು ಭಾಗದಲ್ಲಿ ಪಕ್ಷದ ಸಂಘಟನೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಒತ್ತು ಕೊಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಪಕ್ಷವನ್ನು ಮುಗಿಸಬೇಕು ಎಂದು ಹೊರಟಿವೆ ಎಂ

ಬಿಜೆಪಿಗಿಂತ 15-20 ಹೆಚ್ಚಿನ ಸ್ಥಾನ ಪಡೆಯುತ್ತೇ

ಎರಡು ರಾಷ್ಟ್ರೀಯ ಪಕ್ಷಗಳಿಂದ ಜೆಡಿಎಸ್‌ ಪಕ್ಷವನ್ನು ನಿರ್ನಾಮ ಮಾಡಲು ಆಗಲ್ಲ. ಈ ಬಾರಿ ಕಾಂಗ್ರೆಸ್, ಬಿಜೆಪಿಗಿಂತ ನಮ್ಮ ಪಕ್ಷ 15-20 ಹೆಚ್ಚಿನ ಸ್ಥಾನ ಪಡೆಯುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿ

ಇದನ್ನೂ ಓದಿ: Siddharamotsava: ಸಿದ್ಧರಾಮೋತ್ಸವ ಪೂರ್ವಭಾವಿ ಸಭೆಗೆ ಕೈ ಶಾಸಕ ಗೈರು! ಪ್ರಸಾದ್‌ ಅಬ್ಬಯ್ಯ ವಿರುದ್ಧ ಜಮೀರ್ ಗುಡುಗು

ಬಿಜೆಪಿಗೆ ಪ್ರಚಾರವೇ ಜೀ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಚುನಾವಣಾ ಕಣದಿಂದ ಹಿಂದೆ ಸರಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು ಅದೆಲ್ಲಾ ಅವರ ಪಕ್ಷದ ತೀರ್ಮಾನಗಳು. ಅವರ ನಿರ್ಧಾರದಿಂದ ಸಂಚಲನ ಆಗೋದು ಬಿಡೋದು ಮುಂದಿನ ದಿನಗಳಲ್ಲಿ ಕಾದು ನೋಡಬೇಕು. ಅದೇನು ಮಹತ್ವದ ವಿಷಯವಲ್ಲ ಎಂ

ಅಷ್ಟೊಂದು ಪ್ರಚಾರ ಪಡೆಯವುದು ಅಗತ್ಯ ಏನಿ

ವಿಧಾನಸಭೆಯ ಚುನಾವಣೆ ಅಭ್ಯರ್ಥಿ ಆಗುವುದೇ ರಾಜ್ಯದಲ್ಲಿ ದೊಡ್ಡ ಮಟ್ಟದ ಬೆಳವಣಿಗೆ ಅಂದುಕೊಂಡಿದ್ದಾರೆ. ಈ ಬಗ್ಗೆ ಅಷ್ಟೊಂದು ಪ್ರಚಾರ ಪಡೆಯವುದು ಅಗತ್ಯ ಏನಿದೆ. ಬಿಜೆಪಿಯವರಿಗೆ ಪ್ರಚಾರದ ಮೂಲಕವೇ ಅಧಿಕಾರಕ್ಕೆ ಬರುವುದು ಅಭ್ಯಾಸ ಆಗಿಬಿಟ್ಟಿದೆ. ಅವರು ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಅಧಿಕಾರ ಹಿಡಿಯುವುದಿಲ್ಲ. ರಾಜಕೀಯದಲ್ಲಿ ದೊಡ್ಡ ಮಟ್ಟದ ಪ್ರಚಾರ ಪಡೆದು ಅಧಿಕಾರ ಹಿಡಿಯುವುದು ಅವರಿಗೆ ಅಭ್ಯಾಸವಾಗಿಬಿಟ್ಟಿದೆ. ಹೀಗೆ ಪ್ರಚಾರವೇ ಬಿಜೆಪಿ ಪಕ್ಷದ ಜೀವಾಳವಾಗಿದೆ ಎಂದು ಹೆಚ್‌.ಡಿ. ಕುಮಾರಸ್ವಾಮಿ ಅವರು ವ್ಯಂಗ್ಯವಾಡಿ

ಇದನ್ನೂ ಓದಿ: CRZ ವಿಸ್ತರಣೆಯಿಂದ ಕರಾವಳಿ ಪ್ರದೇಶದ ಅಭಿವೃದ್ಧಿ; ಸಿಎಂ ಬೊಮ್ಮಾಯಿ ಭರ

ಡಿಕೆಶಿ ಒಕ್ಕಲಿಗ ಟ್ರಂಪ್ ಕಾರ್ಡ್ ನಡೆಯ

ರಾಮನಗರದಲ್ಲಿ ಡಿ.ಕೆ ಶಿವಕುಮಾರ್ ಅವಕಾಶ ಕೇಳಿರುವುದು ತಪ್ಪಿಲ್ಲ. ಆದರೆ ಜನರ ಕಷ್ಟ ಸುಖಕ್ಕೆ ಕೆಲಸ ಮಾಡಿದ್ದೇನೆ ಮತ ಕೊಡಿ ಎಂದು ಕೇಳಬಹುದು. ಕೇವಲ ಅಧಿಕಾರಕ್ಕೆ ಮಾತ್ರ ಮತ ಕೇಳಿದರೆ ಆಗಲ್ಲ. ಅವರ ಹಿಂದಿನ ಚರಿತ್ರೆಗಳನ್ನು ಜನ ನೋಡುತ್ತಾರೆ. ಇಲ್ಲಿ ಸಿಎಂ ಆಗುವುದು ಮುಖ್ಯವಲ್ಲ, ಅವರ ನಡವಳಿಕೆ, ನಾಡಿನ ಸಮಸ್ಯೆ ಬಗ್ಗೆ ಅರಿವಿರಬೇಕು ಎಂದರು. ಲ್ಲವಸೆದರು.ದೆದರು.ವಾಳದರು.ವೆದರು.ರು..ಡಿನ ಸಮಸ್ಯೆ ಬಗ್ಗೆ ಅರಿವಿರಬೇಕು ಎಂದರು.

Post a Comment

Previous Post Next Post