ಫೇಸ್ಬುಕ್ ಪೋಸ್ಟ್ ಮೂಲಕ ಸ್ಪಷ್ಟನೆ ಎಚ್ಚರಿಕೆ ನೀಡಿದ್ದಾರೆ. ಶ್ರೀರಾಮಸೇನೆ, ಬಜರಂಗದಳ, ಆರ್ ಎಸ್ ಎಸ್ ಮೇಲೆ ಬುಲ್ಡೋಜರ್ ನುಗ್ಗಿಸಬೇಕು ಎಂದು ನಾನು ಕರೆಕೊಟ್ಟಿದ್ದೇನೆ ಎಂಬ ಅರ್ಥದಲ್ಲಿ ಪ್ರಕಟವಾಗಿದ್ದ ಪತ್ರಿಕಾ ವರದಿಯನ್ನು ಅಲ್ಲಗಳೆದಿದ್ದಾರೆ.
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ (Social Media) ತಮ್ಮ ವಿರುದ್ಧ ಅಪಪ್ರಚಾರ (slander), ತಮ್ಮ ಹೆಸರು ಬಳಸಿಕೊಂಡು ಪ್ರಚೋದನಕಾರಿ ಪೋಸ್ಟ್ಗಳನ್ನು ಮಾಡಿದವರಿಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಸಂಘಟನೆ ಮೇಲೆ ಬುಲ್ಡೋಜರ್ ನುಗ್ಗಿಸಬೇಕು ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಹರಿದಾಡುತ್ತಿರುವ ಪೋಸ್ಟ್ ಸಂಬಂಧ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಫೇಸ್ಬುಕ್ ಪೋಸ್ಟ್ ಮೂಲಕ ಸ್ಪಷ್ಟನೆ ಎಚ್ಚರಿಕೆ ನೀಡಿದ್ದಾರೆ. ಶ್ರೀರಾಮಸೇನೆ, ಬಜರಂಗದಳ, ಆರ್ ಎಸ್ ಎಸ್ ಮೇಲೆ ಬುಲ್ಡೋಜರ್ ನುಗ್ಗಿಸಬೇಕು ಎಂದು ನಾನು ಕರೆಕೊಟ್ಟಿದ್ದೇನೆ ಎಂಬ ಅರ್ಥದಲ್ಲಿ ಪ್ರಕಟವಾಗಿದ್ದ ಪತ್ರಿಕಾ ವರದಿಯನ್ನು ಅಲ್ಲಗಳೆದಿದ್ದಾರೆ. ಆ ವರದಿಯನ್ನು ಬಹಳಷ್ಟು ಬಿಜೆಪಿ ಬೆಂಬಲಿಗರು ಹಂಚಿಕೊಂಡು ನನ್ನ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು
ನನ್ನ ಹೇಳಿಕೆಗಳನ್ನು ತಿರುಚಲಾಗಿ
ನಾನು ಹೇಳಿದ್ದೆ ಬೇರೆ, ಇದು ಸಂಪೂರ್ಣ ಸುಳ್ಳು ಸುದ್ದಿ. ವಿರೋಧ ಪಕ್ಷದವರು, ಅಲ್ಪಸಂಖ್ಯಾತರು, ಸೈದ್ದಾಂತಿಕ ವಿರೋಧಿಗಳ ಮನೆ ಮೇಲೆ ಬುಲ್ಡೋಜರ್ ಹರಿಸುತ್ತೇವೆ ಎಂಬ ಹಿಂಸಾತ್ಮಕ ಹೇಳಿಕೆಗಳೇ ತಪ್ಪು. ಇಂತಹ ಹೇಳಿಕೆಗಳಿಂದ ಪ್ರಚೋದನೆಗೀಡಾಗಿ ಇನ್ನೊಂದು ಗುಂಪಿನವರು ಶ್ರೀರಾಮಸೇನೆ, ಬಜರಂಗದಳದವರ ಮನೆ ಮೇಲೆ ಬುಲ್ಡೋಜರ್ ಹರಿಸುತ್ತೇವೆ ಎಂದು ಹೇಳುತ್ತಾರೆ. ಇದಕ್ಕೆ ಯಾರೂ ಅವಕಾಶ ನೀಡಬಾರದು ಎಂದಷ್ಟೇ ನಾನು ಹೇಳಿದ್ದು, ಇದನ್ನು ತಿರುಚಿ ಪ್ರಕಟವಾದ ವರದಿಯನ್ನು ಇನ್ನಷ್ಟು ತಿರುಚುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು
ಕೆಲವು ಸಮಾಜವಿರೋಧಿ ಶಕ್ತಿಗಳು ನನ್ನ ವಿರುದ್ದ ಅಪಪ್ರಚಾರ ನಡೆಸುತ್ತಿವೆ. ಈ ಪ್ರಚೋದನಕಾರಿ ಮತ್ತು ಕಾನೂನು ಬಾಹಿರ ನಡೆ-ನುಡಿಗಳನ್ನು ನಿಲ್ಲಿಸದೆ ಹೋದರೆ, ಅಂತಹವರ ವಿರುದ್ದ ಕಾನೂನು ಕ್ರಮಕ್ಕಾಗಿ ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದವರಿಗೆ ಸಿದ್ದರಾಮಯ್ಯ ಎಚ್ಚರಿಕೆ ನೀಡಿ
ಶ್ರೀರಾಮಸೇನೆ, ಬಜರಂಗದಳ, ಆರ್ ಎಸ್ ಎಸ್ ಮೇಲೆ ಬುಲ್ಡೋಜರ್ ನುಗ್ಗಿಸಬೇಕು ಎಂದು ನಾನು ಕರೆಕೊಟ್ಟಿದ್ದೇನೆ ಎಂಬ ಅರ್ಥದಲ್ಲಿ ಪ್ರಕಟವಾಗಿದ್ದ ಪತ್ರಿಕಾ ವರದಿಯನ್ನು ಬಹಳಷ್ಟು ಬಿಜೆಪಿ ಬೆಂಬಲಿಗರು ಹಂಚಿಕೊಂಡು ನನ್ನ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ.ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿದೆ. ವಿರೋಧ ಪಕ್ಷದವರು, ಅಲ್ಪಸಂಖ್ಯಾತರು, ಸೈದ್ದಾಂತಿಕ ವಿರೋಧಿಗಳ ಮನೆಮೇಲೆ ಬುಲ್ ಡೋಜರ್ ಹರಿಸುತ್ತೇವೆ ಎಂಬ ಹಿಂಸಾತ್ಮಕ ಹೇಳಿಕೆಗಳೇ ತಪ್ಪು, ಇಂತಹ ಹೇಳಿಕೆಗಳಿಂದ ಪ್ರಚೋದನೆಗೀಡಾಗಿ ಇನ್ನೊಂದು ಗುಂಪಿನವರು ಶ್ರೀರಾಮಸೇನೆ, ಬಜರಂಗದಳದವರ ಮನೆ ಮೇಲೆ ಬುಲ್ಡೋಜರ್ ಹರಿಸುತ್ತೇವೆ ಎಂದು ಹೇಳುತ್ತಾರೆ. ಇದಕ್ಕೆ ಯಾರೂ ಅವಕಾಶ ನೀಡಬಾರದು ಎಂದಷ್ಟೇ ನಾನು ಹೇಳಿದ್ದು. ಇದನ್ನು ತಿರುಚಿ ಪ್ರಕಟವಾದ ವರದಿಯನ್ನು ಇನ್ನಷ್ಟು ತಿರುಚಿ ಕೆಲವು ಸಮಾಜ ವಿರೋಧಿ ಶಕ್ತಿಗಳು ನನ್ನ ವಿರುದ್ದ ಅಪಪ್ರಚಾರ ನಡೆಸುತ್ತಿವೆ. ಈ ಪ್ರಚೋದನಕಾರಿ ಮತ್ತು ಕಾನೂನು ಬಾಹಿರ ನಡೆ-ನುಡಿಗಳನ್ನು ನಿಲ್ಲಿಸದೆ ಹೋದರೆ ಅಂತಹವರ ವಿರುದ್ದ ಕಾನೂನುಕ್ರಮಕ್ಕಾಗಿ ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದೇನೆ ಎಂದು ಸಿದ್ದರಾಮಯ್ಯ ಬರೆದಿದ್ದಾರೆ
ಇದನ್ನೂ ಓದಿ: Praveen Murder: ಮೋದಿ-ಯೋಗಿ ಮಾದರಿಯಲ್ಲಿ ಗಟ್ಸ್ ಇಲ್ಲ! ಸರ್ಕಾರದ ವಿರುದ್ಧ ಗುಡುಗಿದ ಪ್ರಮೋದ್ ಮುತಾಲಿಕ್
ಸಿದ್ದರಾಮಯ್ಯ ಜನ್ಮದಿನ ಆಚರಣೆಗೆ ಭರ್ಜರಿ ಸಿದ್ಧ
ದಾವಣಗೆರೆಯಲ್ಲಿ ನಡೆಯಲಿರುವ ಮಾಜಿ ಸಿಎಂ ಸಿದ್ಧರಾಮಯ್ಯ ಜನ್ಮದಿನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರು ಬಂದರೆ ಗೌರವ. ಆದರಿಂದ ಬೇರೆಯವರಿಗೆ ಮೆಟ್ಟು ತಗೊಂಡು ಹೊಡೆದಂಗೆ ಆಗುತ್ತದೆ. ಉತ್ತಮ ಯೋಜನೆ ನೀಡಿದ ಅವರಿಗೆ ಮುಸ್ಲಿಂ ಸಮುದಾಯ ಎಷ್ಟು ನಿಯತ್ತಾಗಿದೆ ಎಂಬುದು ಗೊತ್ತಾಗುತ್ತದೆ. ಹುಟ್ಟು ಹಬ್ಬ ಸಿದ್ಧರಾಮಯ್ಯ ಅವರದಲ್ಲ, ನಮ್ಮ ಹುಟ್ಟುಹಬ್ಬ. ಅದನ್ನ ಎಲ್ಲರೂ ಹಬ್ಬದ ರೀತಿ ಸಿದ್ಧರಾಮಯ್ಯ ಜನ್ಮ ದಿನವನ್ನ ನಾಡಹಬ್ಬ, ರಮ್‌ಜಾನ್ ಬಕ್ರೀದ್, ಯುಗಾದಿ, ದೀಪಾವಳಿಯಂತೆ ಆಚರಣೆ ಮಾಡಬೇಕು ಎಂದು ಚಿತ್ರದುರ್ಗದಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದ್ದಾರೆ. ತೆ.ದರು..ದೆ.ಕೆ ನೀಡಿದ್ದಾರೆ.

Post a Comment