2nd PUC Supplementary Exam: ನಾಳೆಯಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ


 ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾ ಕೇಂದ್ರಕ್ಕೆ ಸಾಗಿಸುವ ವಾಹನದೊಂದಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಪ್ರತಿ ಕೇಂದ್ರಗಳಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗುತ್ತದೆ.

 ನಾಳೆಯಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು (Second PU Supplementary Exams) ನಡೆಯಲಿವೆ. ಆ. 25ರವರೆಗೆ ಪೂರಕ ಪರೀಕ್ಷೆಗಳು ನಡೆಯಲಿದ್ದು, ವಿದ್ಯಾರ್ಥಿಗಳು (Students) ಹಾಲ್ ಟಿಕೆಟ್ ತೋರಿಸಿ ಸಾರಿಗೆ ಬಸ್ಗಳಲ್ಲಿ (Free Bus) ಉಚಿತವಾಗಿ ಪ್ರಯಾಣಿಸಬಹುದಾಗಿದೆ.  ಪರೀಕ್ಷಾ ಕೇಂದ್ರದ (Exam Centre) ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧ ಹಾಕಲಾಗಿದೆ. ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ವಿತರಿಸಲು ಪ್ರತಿ ತಾಲೂಕಿನಲ್ಲಿ ತ್ರಿಸದಸ್ಯ ಸಮಿತಿ (Committee) ರಚನೆ ಮಾಡಲಾಗಿದೆ. ಸಮಿತಿಯಲ್ಲಿ ತಹಶೀಲ್ದಾರ್, ಬಿಇಒ ಮತ್ತು ಪ್ರಾಂಶುಪಾಲರು ಸದಸ್ಯರಾಗಿ ಇರಲಿದ್ದಾರೆ. ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ಯುವ ವಾಹನಕ್ಕೆ ಕಡ್ಡಾಯವಾಗಿ ಜಿಪಿಎಸ್ (GPS) ಅಳವಡಿಕೆ ಮಾಡಲಾಗಿದೆ.ಪರೀಕ್ಷಾ ಕೇಂದ್ರಗಳಿಗೆ ವಿದ್ಯುತ್ ವ್ಯತ್ಯಯ ಆಗದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ

ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾ ಕೇಂದ್ರಕ್ಕೆ ಸಾಗಿಸುವ ವಾಹನದೊಂದಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಪ್ರತಿ ಕೇಂದ್ರಗಳಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗುತ್ತದೆ.  ಮೊಬೈಲ್ ಮತ್ತಿತರ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರದೊಳಗೆ ವಿದ್ಯಾರ್ಥಿಗಳು ಕೊಂಡೊಯ್ಯಲು ಅವಕಾಶವಿಲ್ಲ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ

ದಿನಾಂಕ 12-08-2022 - ಕನ್ನಡ, ಅ

ದಿನಾಂಕ 13-08-2022 - ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ

ದಿನಾಂಕ 16-08-2022 -

ದಿನಾಂಕ 17-08-2022 - ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿ

ದಿನಾಂಕ 18-08-2022 - ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾ

ದಿನಾಂಕ 19-08-2022 - ರಾಜ್ಯ ಶಾಸ್ತ್ರ, ಗಣಿತ ಶಾ

ದಿನಾಂಕ 20-08-2022 - ತರ್ಕಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯ

ದಿನಾಂಕ 22-08-2022 -ಇಂಗ್ಲಿ

ದಿನಾಂಕ 23-08-2022 - ಅರ್ಥಶಾಸ್ತ್ರ, ಜೀವಶಾ

ದಿನಾಂಕ 24-08-2022- ಇತಿಹಾಸ, ಸಂಖ್ಯಾಶಾಸ್ತ್ರ

ದಿನಾಂಕ 25-08-2022 - ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ ಸ್ತ್ರಷ್ಯನಸ್ತ್ರನತ ಹಿಂದಿರೇಬಿಕ್.., ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

ಸಾಂದರ್ಭಿಕ ಚಿತ್ರ

ಇದನ್ನೂ ಓದಿ: Career Choices: PUCಯಲ್ಲಿ ಶೇ.50ಕ್ಕಿಂತ ಕಡಿಮೆ ಅಂಕಗಳು ಬಂದರೆ ಈ 8 ಕೋರ್ಸ್​​ಗಳು ನಿಜಕ್ಕೂ ಬೆಸ್ಟ್

4,22,966 ವಿದ್ಯಾರ್ಥಿಗಳು ಉತ್ತೀರ್ಣ

ಈ ವರ್ಷ ಒಟ್ಟು 6,83,563 ಮಂದಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದು ಅವರಲ್ಲಿ 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸೈನ್ಸ್‌ ವಿಭಾಗದಲ್ಲಿ ಹೆಚ್ಚು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದರು. ಶೇಕಡಾ 68.72ರಷ್ಟು ಬಾಲಕಿಯರು ಮತ್ತು ಶೇಕಡಾ 55.22ರಷ್ಟು ಬಾಲಕರು ತೇರ್ಗಡೆ ಹೊಂದಿದ್ದರು.

ಇದನ್ನೂ ಓದಿ: Idgah Maidana: ಚಾಮರಾಜಪೇಟೆ ಈದ್ಗಾ ಮೈದಾನದ ವಿವಾದ; ಮುಸ್ಲಿಮರ ಜೊತೆ ಪೊಲೀಸರ ಶಾಂತಿ ಸಭೆ

ಗ್ರಾಮಾಂತರ ಭಾಗದಲ್ಲಿ ಶೇಕಡಾ 62.18 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದರು. ನಗರ ಪ್ರದೇಶದಲ್ಲಿ ಶೇಕಡಾ 61.78 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಈ ವರ್ಷದ ದ್ವಿತೀಯ ಪಿಯಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ,ವಿಜಯಪುರ 3ನೇ ಸ್ಥಾನ, ಬೆಂಗಳೂರು ದಕ್ಷಿಣ ನಾಲ್ಕನೇ ಸ್ಥಾನ, ಉತ್ತರ ಕನ್ನಡ 5ನೇ ಸ್ಥಾನ ಹಾಗೂ ಚಿತ್ರದುರ್ಗ ಜಿಲ್ಲೆ ಕೊನೆಯ ಸ್ಥಾನದಲ್ಲಿತ್ತು.

ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ 2,28,167 ಮಂದಿ, ವಾಣಿಜ್ಯ ವಿಭಾಗದಲ್ಲಿ 2,45,519 ಮಂದಿ ಮತ್ತು ವಿಜ್ಞಾನ ವಿಭಾಗದಲ್ಲಿ 2,10,569 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಶೇ.72.53 ವಿಜ್ಞಾನ ವಿದ್ಯಾರ್ಥಿಗಳು, ಶೇ.64.97 ವಾಣಿಜ್ಯ, ಶೇ.48.71 ಕಲಾ ವಿದ್ಯಾರ್ಥಿಗಳು ತೇ


ರ್ಗಡೆಯಾಗಿದ್ದರು.ಸಾಂದರ್ಭಿಕ ಚಿತ್ರ

ಉತ್ತೀರ್ಣರಾದ ವಿದ್ಯಾರ್ಥಿಗಳ ವಿವರ ಹೀಗಿದೆ

ಪುನರಾವರ್ತಿತ ಅಭ್ಯರ್ಥಿಗಳು - 61,08,328 ಮಕ್ಕಳಲ್ಲಿ‌ 14,403 ಮಕ್ಕಳು ಪಾಸ್ - 23.29%

ಖಾಸಗಿ ಅಭ್ಯರ್ಥಿಗಳು - 21,931 ಮಕ್ಕಳಲ್ಲಿ 5,866 ಮಕ್ಕಳು ಪಾಸ್ - 26.75%

ವಿಭಾಗವಾರು ಫಲಿತಾಂಶ

ಕಲಾ ವಿಭಾಗ: 2,27,929 ಮಕ್ಕಳಲ್ಲಿ 1,11,032 ಮಕ್ಕಳು ಪಾಸ್ ಶೇ.48.17

ವಾಣಿಜ್ಯ: 2,45,350 ಮಕ್ಕಳಲ್ಲಿ 1,59,409 ಮಕ್ಕಳು ಪಾಸ್ ಶೇ.64.97

ವಿಜ್ಞಾನ : 2,10,284 ಮಕ್ಕಳಲ್ಲಿ 1,52,525 ಮಕ್ಕಳು ಪಾಸ್ ಶೇ.72.53

ಇದನ್ನೂ ಓದಿ: National Flag: ಧ್ವಜ ಖರೀದಿಸದಿದ್ದರೆ ರೇಷನ್ ಕೊಡಲ್ವಾ? ಬಿಜೆಪಿ ಎಂಪಿಯ ಹೇಳಿಕೆಯಿಂದ ವಿವಾದ

ಒಟ್ಟು ಬಾಲಕಿಯರು ಶೇ.68.72 ಮತ್ತು ಬಾಲಕರು ಶೇ.55.22 ಉತ್ತೀರ್ಣರಾಗಿದ್ದಾರೆ. 3,37,006 ಬಾಲಕಿಯರ ಪೈಕಿ 2,31,586 ಪಾಸ್ ಆಗಿದ್ದಾರೆ. 3,46,557 ಬಾಲಕರಲ್ಲಿ 1,91,380 ಮಕ್ಕಳು ಪಾಸ್ ಆಗಿದ್ದಾರೆ.

Post a Comment

Previous Post Next Post