ಬಿಬಿಎಂಪಿ ಚುನಾವಣೆಗೆ ಕೊನೆಗೂ ಕಾಲ ಕೂಡಿಬರುತ್ತಿದೆ. ಇಂದು ಮಹತ್ವದ ಸಭೆ ನಡೆಸಲಾಯ್ತು. 2 ಗಂಟೆಗೂ ಹೆಚ್ಚು ಕಾಲ ಸಭೆ ನಡೆಯಿತು. ಆಗಸ್ಟ್ 25 ರಂದು ಮತದಾರರ ಪಟ್ಟಿಯ ಕರಡು ಪ್ರಕಟ ಮಾಡಲು ಸೂಚನೆ ನೀಡಲಾಯಿತು.
ಅಂತೂ ಇಂತೂ ಬಿಬಿಎಂಪಿ ಚುನಾವಣೆಗೆ ಕಾಲ ಕೂಡಿಬರುತ್ತಿದೆ. ಬಿಬಿಎಂಪಿ ಚುನಾವಣೆ (BBMP Election) ಹಿನ್ನೆಲೆ ಮೀಸಲಾತಿ ಪ್ರಕಟಿಸಲು ಸುಪ್ರೀಂಕೋರ್ಟ್ (Supreme Court) ಗಡುವು ನೀಡಿತ್ತು. ನಂತರ ರಾಜ್ಯ ಸರ್ಕಾರ ಬಿಬಿಎಂಪಿಯ 243 ವಾರ್ಡ್ ಗಳಿಗೆ (Ward) ಮೀಸಲಾತಿ (Reservation) ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಈಗ ಬಿಬಿಎಂಪಿ ಚುನಾವಣೆಗೆ ಕಾಲ ಕೂಡಿ ಬಂದಿದೆ. ಈ ಸಂಬಂಧ ಇಂದು ರಾಜ್ಯ ಚುನಾವಣಾ ಆಯೋಗ (Election commission) ಕಚೇರಿಯಲ್ಲಿ ಮಹತ್ವದ ಸಭೆ (Meeting)ಜರುಗಿತು. ಸಭೆಯಲ್ಲಿ ಚುನಾವಣೆ ಬಗ್ಗೆ ಚರ್ಚೆ ನಡೆಸಲಾಯ್ತು. ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಆಗುತ್ತೋ ಇಲ್ಲವೊ ಎಂಬ ಗೊಂದಲ ಮಧ್ಯೆ ರಾಜ್ಯ ಚುನಾವಣಾ ಆಯೋಗ ಇಂದು ಅಧಿಕೃತವಾಗಿ ಇಂದು ಮಹತ್ವದ ಸಭೆ ನಡೆಸಿತು
ಬಿಬಿಎಂಪಿ ಚುನಾವಣೆಗೆ ಕೊನೆಗೂ ಕಾಲ ಕೂಡಿಬರುತ್ತಿದೆ. ಇಂದು ಮಹತ್ವದ ಸಭೆ ನಡೆಸಲಾಯ್ತು. 2 ಗಂಟೆಗೂ ಹೆಚ್ಚು ಕಾಲ ಸಭೆ ನಡೆಯಿತು. ಸಭೆಯಲ್ಲಿ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಬಸವರಾಜ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತರಾದ ರಂಗಪ್ಪ, ರಾಮ್ ಪ್ರಸಾದ್ ಸೇರಿದಂತೆ ಮತ್ತಿತರು ಭಾಗಿಯಾಗಿದ್ದ
ಆಗಸ್ಟ್ 25 ರಂದು ಮತದಾರರ ಪಟ್ಟಿಯ ಕರಡು ಪ್ರಕ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ರಂಗ ಸಜ್ಜಾಗಿದ್ದು, ಆಗಸ್ಟ್ 25 ರಂದು ಮತದಾರರ ಪಟ್ಟಿಯ ಕರಡು ಪ್ರಕಟ ಮಾಡಲು ಸೂಚನೆ ನೀಡಲಾಯಿತು. ಮತದಾರರ ಪಟ್ಟಿಯ ಕರಡು ಪ್ರಕಟಗೊಂಡ ಕೂಡಲೇ ಪಾಲಿಕೆಯ ಜಾಲತಾಣದಲ್ಲಿ ಮಾಹಿತಿ ಹಾಕಬೇಕು. ಇದರ ಜೊತೆಗೆ ನೋಂದಾಯಿತ ರಾಜಕೀಯ ಪಕ್ಷಗಳ ಕಚೇರಿಗೆ ಹಾಗೂ ನಿವಾಸಿ ಕ್ಷೇಮಾಭಿವೃದ್ಧಿ ಸಂಘಗಳಿಗೆ ಮತದಾರರ ಪಟ್ಟಿಯ ಕರಡು ಪ್ರತಿಯನ್ನು ನೀಡುವಂತೆ ಪಾಲಿಕೆಯ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚಿಸಿದ
ಇದನ್ನೂ ಓದಿ: ನಿಷೇಧದ ನಡುವೆಯೂ ಡ್ಯಾಂ ಬಳಿ ನಿಂತು ಪೋಸ್! ಶಾಸಕ ರಾಜುಗೌಡ ಪುತ್ರನಿಗಿದೆಯಾ ಬೇರೆ ರೂಲ್ಸ್
ಮೊದಲು ಮತಗಟ್ಟೆಗಳ ಪರಿ
ವಾರ್ಡ್ ಮರು ವಿಂಗಡನೆಯಾಗಿರುವ ಹಿನ್ನೆಲೆಯಲ್ಲಿ ಮೊದಲು ಮತಗಟ್ಟೆಗಳ ಪರಿಶೀಲನೆ ಆಗಬೇಕಿದೆ. ವಾರ್ಡ್ ಗಳಿಗೆ ಉಸ್ತುವಾರಿ ಅಧಿಕಾರಿಗಳನ್ನು ಗುರುತಿಸಿ ನೇಮಕ ಮಾಡಲು ಪಟ್ಟಿ ಸಿದ್ಧಗೊಳಿಸಬೇಕಿದೆ ಎಂದು ರಾಜ್ಯ ಚುನಾವಣಾ ಆಯೋಗ ಪಾಲಿಕೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಶೀಲನೆ?ರು.ಟರು..ರ್ದೇಶನ ನೀಡಿದರು.ಬಿಬಿಎಂಪಿ ಎಲೆಕ್ಷನ್ ಸಂಬಂಧ ಸಭೆ
ಮಿತವ್ಯಯ ಸಾಧಿಸುವ ಬಗ್ಗೆ ಚರ್ಚೆ
ಪ್ರತಿ ಬಾರಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮತದಾನದ ಪ್ರಮಾಣ ಅತ್ಯಂತ ಕಡಿಮೆ ಇರುತ್ತದೆ. ಮತದಾನದ ಪ್ರಮಾಣ ಹೆಚ್ಚಿಸಲು ವ್ಯಾಪಕ ಪ್ರಚಾರ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಅವಶ್ಯಕತೆ ಇದೆ. ಆದರೆ ಈ ನಿಟ್ಟಿನಲ್ಲಿ ವೆಚ್ಚ ಮಾಡುವಲ್ಲಿ ಮಿತವ್ಯಯ ಸಾಧಿಸುವ ಬಗ್ಗೆ ಚರ್ಚೆಯಾಯಿತು.
ಅಕ್ಟೋಬರ್ ಮೊದಲ ವಾರದಲ್ಲಿ ನೋಟಿಫಿಕೇಷನ್?
ವೋಟರ್ ಐಡಿ, ವಾರ್ಡ್ ಬೌಂಡರಿ, ಚುನಾವಣೆಗೆ ಅಗತ್ಯವಾದ ಸಿಬ್ಬಂದಿ ನೇಮಕಕ್ಕೆ ತಯಾರಿಯಾಗಬೇಕು. ಇವಿಎಂ ಸೇರಿ ಚುನಾವಣೆಗೆ ಬೇಕಾದ ಎಲ್ಲಾ ಸಿದ್ಧತೆಗೆ ಚುನಾವಣಾ ಆಯೋಗ ಸೂಚನೆ ನೀಡಿತು. ಎಲ್ಲ ಅಂದುಕೊಂಡಂತೆ ಆದರೆ ಅಕ್ಟೋಬರ್ ಮೊದಲ ವಾರದಲ್ಲಿ ನೋಟಿಫಿಕೇಷನ್ ಹೊರಡಿಸಿ, 21 ದಿನಗಳಲ್ಲಿ ಚುನಾವಣಾ ಪ್ರಕ್ರಿಯೆ ಸಂಪೂರ್ಣಗೊಳ್ಳಲಿದೆ.
ಇದನ್ನೂ ಓದಿ: ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದಿದ್ದು ಕಾಂಗ್ರೆಸ್ ಕಾರ್ಯಕರ್ತ!
ಸುಪ್ರಿಂಕೋರ್ಟ್ ಸೂಚನೆ ಮೇಲೆ ಎಲೆಕ್ಷನ್
ಆದರೆ ಮೀಸಲಾತಿ ಪ್ರಶ್ನಿಸಿ ಹಲವರು ಕೋರ್ಟ್ ಮೊರೆ ಹೋಗಿದ್ದಾರೆ. ಈ ಸಂಬಂಧ ಹೈಕೋರ್ಟ್, ಸುಪ್ರಿಂಕೋರ್ಟ್ ಏನು ಸೂಚನೆ ಕೊಡುತ್ತೋ ಅನ್ನೋದರ ಮೇಲೆ ಬಿಬಿಎಂಪಿ ಚುನಾವಣಾ ಯಾವಾಗ ಜರುಗುತ್ತೆ ಅನ್ನೋದು ನಿರ್ಧಾರವಾಗಲಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತರು, ಎಲ್ಲಾ ಎಂಟೂ ವಲಯಗಳ ಜಂಟಿ ಆಯುಕ್ತರು, ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯ ಪ್ರತಿನಿಧಿ, ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಹೊನ್ನಾಂಬ ಅವರೂ ಈ ಸಭೆಯಲ್ಲಿ ಹಾಜರಿದ್ದರು.
ಬಿಬಿಎಂಪಿ ಚುನಾವಣೆ ಹಿನ್ನೆಲೆ ಮೀಸಲಾತಿ ಪ್ರಕಟಿಸಲು ಸುಪ್ರೀಂಕೋರ್ಟ್ ಗಡುವು ನೀಡಿತ್ತು. ರಾಜ್ಯ ಸರ್ಕಾರ ಬಿಬಿಎಂಪಿಯ 243 ವಾರ್ಡ್ ಗಳಿಗೆ ಮೀಸಲಾತಿ ಕೂಡ ಪ್ರಕಟಿಸಿದೆ.


Post a Comment