ಕಳೆದ ಕೆಲ ದಿನಗಳ ಹಿಂದೆ ಬೆಳಗಾವಿ ನಗರದ ಎಎಸ್ಐ ಗಾಲ್ಪ್ ಮೈದಾನದ (Golf Ground) ಆವರಣದ ಬಳಿ ಚಿರತೆ ಹದಿನೈದು ನಿಮಿಷ ಕಾಣಿಸಿಕೊಂಡಿದ್ದರೂ ಅರಣ್ಯ ಇಲಾಖೆಯ ಬೇಜವಾಬ್ದಾರಿಯಿಂದ ಅದನ್ನು ಸೆರೆ ಹಿಡಿಯುವಲ್ಲಿ ವಿಫಲರಾದರು.
ಬೆಳಗಾವಿ: ನಗರದಲ್ಲಿ ಚಿರತೆ (Leopard) ಪ್ರತ್ಯಕ್ಷ ಆದಾಗಿನಿಂದಲೂ ಕುಂಟು ನೆಪ ಹೇಳಿಕೊಂಡು ಜಾಣ ಕುರುಡುತನ ಮೆರೆದ ಅರಣ್ಯ ಇಲಾಖೆಯ (Forest Department) ದಿವ್ಯ ನಿರ್ಲಕ್ಷ್ಯದಿಂದ ಸಾರ್ವಜನಿಕರು ಭಯದ ವಾತಾವರಣದಲ್ಲಿ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆ.5 ರಂದು ಇಲ್ಲಿನ ಜಾಧವ ನಗರದಲ್ಲಿ (Jadhav Nagara) ಕಟ್ಟಡ ಕೆಲಸ ಮಾಡುತ್ತಿದ್ದ ಕಾರ್ಮಿಕನ (Worker) ಮೇಲೆ ದಾಳಿ ನಡೆಸಿ ಗಾಲ್ಫ್ ಮೈದಾನದಲ್ಲಿ ಮರೆಯಾಗಿದ್ದ ಚಿರತೆ ಆಗಾಗ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ ಮೂಡಿಸುತ್ತಿದೆ. ಕಳೆದ ಕೆಲ ದಿನಗಳ ಹಿಂದೆ ಬೆಳಗಾವಿ ನಗರದ ಎಎಸ್ಐ ಗಾಲ್ಪ್ ಮೈದಾನದ (Golf Ground) ಆವರಣದ ಬಳಿ ಚಿರತೆ ಹದಿನೈದು ನಿಮಿಷ ಕಾಣಿಸಿಕೊಂಡಿದ್ದರೂ ಅರಣ್ಯ ಇಲಾಖೆಯ ಬೇಜವಾಬ್ದಾರಿಯಿಂದ ಅದನ್ನು ಸೆರೆ ಹಿಡಿಯುವಲ್ಲಿ ವಿಫಲರಾದರು. ಇದಾದ ಬಳಿಕ ನಗರ ಪೊಲೀಸ್ ಇಲಾಖೆ (Police) ಹಾಗೂ ಅರಣ್ಯ ಇಲಾಖೆ ಜನರಲ್ಲಿ ಭಯ ಹೋಗಲಾಡಿಸುವ ಉದ್ದೇಶದಿಂದ ಆಪರೇಷನ್ ಚೀತಾ ಎಂಬ ಹೆಸರಿನಲ್ಲಿ ಕೂಂಬಿಂಗ್ ನಡೆಸಿದರೂ ಚಿರತೆ ಪತ್ತೆಯಾಗಿರಲಿಲ್ಲ
ಗಾಲ್ಫ್ ಮೈದಾನದಲ್ಲಿ ಚಿರತೆಯ ಹೆಜ್ಜೆ ಗುರುತು ಪತ್ತೆಯಾಗಿದೆ ಎಂದು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಅರಣ್ಯ ಸಿಬ್ಬಂದಿಗಳೇ ತಿಳಿಸಿದರೂ ಅಷ್ಟೊಂದು ಗಂಭೀರವಾಗಿ ಪರಿಗಣಿಸದ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಚಿರತೆ ಮರಳಿ ಕಾಡಿಗೆ ಹೋಗಿರಬಹುದು. ಗಾಲ್ಫ್ ಮೈದಾನದಲ್ಲಿ ಇರುವುದು ಅನುಮಾನ. ಆದರೂ ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ ಎಂದಿದ್ದ
ನಾಗರಿಕರಿಂದ ಹಿಡಿಶಾ
ನಗರ ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆ ಕೂಂಬಿಂಗ್ ನಡೆಸಿ ಎರಡೂ ದಿನ ಕಳೆಯುವಷ್ಟರಲ್ಲಿ ಮತ್ತೆ ಗಾಲ್ಫ್ ಮೈದಾನದ ಖಾಸಗಿ ಶಾಲೆಯ ವಿಶಾಲವಾದ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಸ್ಥಳದಲ್ಲಿ ಕೇವಲ ಬೆರಳೆಣಿಕೆಯಷ್ಟು ಅರಣ್ಯ ಸಿಬ್ಬಂದಿ ಬಿಟ್ಟರೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರೇ ಇದ್ದಾರೆ. ಅರಣ್ಯ ಇಲಾಖೆಯ ಇಷ್ಟೊಂದು ಬೇಜವಾಬ್ದಾರಿತನಕ್ಕೆ ನಾಗರಿಕರು ಹಿಡಿಶಾಪ ಹಾಕುತ್ತಿದ್ದಾರೆ
. ಪರು..ದ್ದಾರೆ.ಆಪರೇಷನ್ ಚೀತಾ
ಇದನ್ನೂ ಓದಿ: Karnataka Weather: ರಾಜ್ಯದ ಜನರೇ ಗಮನಿಸಿ, ಯೆಲ್ಲೋ ಅಲರ್ಟ್ ಘೋಷಣೆ; ಇಂದು, ನಾಳೆ ಭಾರೀ ಮಳೆ ಸಾಧ್ಯತೆ
ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲೂರಿನಿಂದ ಎರಡು ಆನೆಗಳನ್ನು ತರೆಸಿ ಚಿರತೆ ಕಾರ್ಯಾಚರಣೆ ನಡೆಸಲಾಗುವುದು. ಎರಡ್ಮೂರು ದಿನದಲ್ಲಿ ಚಿರತೆ ಸೆರೆ ಹಿಡಿಯಲಾಗುವುದು ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ವಿಶ್ವಾಸ ವ್ಯಕ್ತಪಡಿಸಿದರು. ಅರಣ್ಯ ಇಲಾಖೆಯ ಸಭಾಂಗಣದಲ್ಲಿ ಪೊಲೀಸ್ ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಎರಡ್ಮೂರು ದಿನಗಳಲ್ಲಿ ಚಿರತೆ ಸೆರೆ, ಸಚಿವರ ಭರವಸೆ
ಕಳೆದ 20 ದಿನಗಳಿಂದ ಬೆಳಗಾವಿ ಜಿಲ್ಲೆಯ ನಾಲ್ಕು ಕಡೆ ಚಿರೆತೆಗಳ ಹಾವಳಿ ಕಂಡು ಬಂದಿತ್ತು. ಚಿಕ್ಕೋಡಿಯಲ್ಲಿ ಭಾಗದಲ್ಲಿ ಕಂಡು ಬಂದಿದ್ದ ಚಿರತೆ ಅಥಣಿ ಮೂಲಕ ಮಹಾರಾಷ್ಟ್ರಕ್ಕೆ ಹೋಗಿರುವ ಮಾಹಿತಿ ಇದೆ. ಮೂಡಲಗಿ ಹಾಗೂ ಸವದತ್ತಿಯಲ್ಲಿ 10 ದಿನಗಳಿಂದ ಕಂಡು
ಬಂದಿಲ್ಲ.ಆಪರೇಷನ್ ಕೂಂಬಿಂಗ್
ಬೆಳಗಾವಿ ಗಾಲ್ಫ್ನಲ್ಲಿ ಕಣ್ಮರೆಯಾಗಿದ್ದ ಚಿರತೆ ಸೋಮವಾರ ಬೆಳಗ್ಗೆ ಸ್ಥಳೀಯರಿಗೆ ಪ್ರತ್ಯಕ್ಷವಾಗಿ ಕಾಣಿಸಿಕೊಂಡಿತ್ತು. ಈ ಮಾಹಿತಿಯ ಮೇರೆಗೆ ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆ ಮಾಡಿದ್ದಾರೆ. ನುರಿತ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಅರವಳಿಕೆಯ ತಜ್ಞರನ್ನು ಸಹ ಕಾರ್ಯಾಚರಣೆಗೆ ನಿಯೋಜನೆ ಮಾಡಲಾಗಿದ್ದು, ಮದ್ದು ನೀಡಿ ಎರಡ್ಮೂರು ದಿನದಲ್ಲಿ ಹಿಡಿಯಲಾಗುವುದು ಎಂದು ಭರವಸೆ ನೀಡಿದರು.
ಬೆಳಗಾವಿ ಗಾಲ್ಫ್ ಮೈದಾನದಲ್ಲಿರುವ ಚಿರತೆಯನ್ನು ಸೆರೆ ಹಿಡಿಯಲು ಶಿವಮೊಗ್ಗ ಜಿಲ್ಲೆಯ ಸಕ್ರೈ ಬೈಲ್ನಿಂದ ಎರಡು ಆನೆಗಳನ್ನು ಕರೆಸಲಾಗುತ್ತಿದೆ. 120 ಅರಣ್ಯ ಇಲಾಖೆ ಹಾಗೂ 80 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.
ಇದನ್ನೂ ಓದಿ: Shivamogga: ಶಿವಮೊಗ್ಗ ಮತ್ತೆ ಕೊತಕೊತ! ಶಾಲೆಯ ಗೇಮ್ಸ್ನಲ್ಲಿ ಗಲಾಟೆ, 144 ಸೆಕ್ಷನ್ ವಿ
ಆಪರೇಷನ್ ಚೀತಾ
ಚಿರತೆ ಸೆರೆ ಹಿಡಿಯುವ ವಿಶ್ವಾಸ
ಗಾಲ್ಫ್ ಮೈದಾನದಲ್ಲಿರುವ ಚಿರತೆ ಹಿಡಿಯಲು ಅರಣ್ಯ ಇಲಾಖೆಯ ನಿರ್ಲಕ್ಷ್ಯ ಮಾಡಿದ್ದಾರೆ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಿಲ್ಲಾಡಳಿತ, ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಮನ್ವಯತೆಯಿಂದ ಕೆಲಸ ಮಾಡುತ್ತಾರೆ. ಶೀಘ್ರದಲ್ಲೇ ಚಿರತೆ ಸೆರೆ ಹಿಡಿಯುವ ವಿಶ್ವಾಸ ಇದೆ ಎಂದರು.




Post a Comment