ಸೆಪ್ಟೆಂಬರ್ ಕೊನೆ ವಾರ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿ ಭಾರತ್ ಜೋಡೋ ಯಾತ್ರೆ (Bharat Jodo Yatra) ರಾಜ್ಯವನ್ನು ಪ್ರವೇಶಿಸಲಿದೆ. ಈ ಸಂಬಂಧ ರಾಜ್ಯ ಕಾಂಗ್ರೆಸ್ (Congress) ಪಾದಯಾತ್ರೆಗೆ (Padayatra) ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇಂದು ಕಾಂಗ್ರೆಸ್ ನಾಯಕರು (Congress Leaders) ಭಾರತ್ ಜೋಡೋ ಯಾತ್ರೆ ಸಂಬಂಧ ಮಾಹಿತಿ ನೀಡಿದರು. ರಾಜ್ಯದಲ್ಲಿ ಒಟ್ಟು 511 ಕಿಲೋಮೀಟರ್ 21 ದಿನ ಪಾದಯಾತ್ರೆ ನಡೆಯಲಿದೆ. ರಾಜ್ಯದಲ್ಲಿ ಮೂರು ಹಂತಗಳಲ್ಲಿ ಭಾರತ್ ಜೋಡೋ ಯಾತ್ರೆ ಸಂಚರಿಸಲಿದೆ. ಮೂರು ಹಂತಗಳಲ್ಲಿ ಅಂದ್ರೆ ಒಟ್ಟು 7 ಲೋಕಸಭಾ ಕ್ಷೇತ್ರಗಳು, 20 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತ್ ಜೋಡೋ ಯಾತ್ರೆ ಸಂಚಾರ ನಡೆಸಲಿದೆ.
ರಾಜ್ಯದಲ್ಲಿ ಸಂಚರಿಸುವ ಭಾರತ್ ಜೋಡೋ ಯಾತ್ರೆಯ ರೂಟ್ ಮ್ಯಾಪ್ ಹೀಗಿದೆ.
.ಮೊದಲ ಹಂತದ ರೂಟ್ ಮ್ಯಾಪ್
ತಮಿಳುನಾಡು ರಾಜ್ಯದಿಂದ ಗುಂಡ್ಲುಪೇಟೆ ಮೂಲಕ ಕರ್ನಾಟಕ ರಾಜ್ಯಕ್ಕೆ ಪ್ರವೇಶ ಮಾಡಲಿದೆ. ಗುಂಡ್ಲುಪೇಟೆ, ನಂಜನಗೂಡು, ಮೈಸೂರು, ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಗೆ ಸಂಚಾರ ಮಾಡಲಿದೆ. ನಂತರ ಮೇಲುಕೋಟೆಯಿಂದ ರಂಗನಾಥಪುರದ ಮೂಲಕ ಚಿತ್ರದುರ್ಗ ಜಿಲ್ಲೆಯ ಪ್ರವೇಶ ಮಾಡಲಾಗುತ್ತ
ದೆ ಸಾಂದರ್ಭಿಕ ಚಿತ್ರ
ರಂಗನಾಥಪುರದಿಂದ ತುಮಕೂರಿನ ತುರುವೇಕೆರೆ ನಂತರ ಇಲ್ಲಿಂದ ಚಿಕ್ಕನಾಯಕನಹಳ್ಳಿ ಹುಳಿಯಾರ್ ಮೂಲಕ ಚಿತ್ರದುರ್ಗ ಹಿರಿಯೂರುಗೆ ಪಾದಯಾತ್ರೆ ತೆರಳಲಿದೆ. ಹಿರಿಯೂರಿನಿಂದ ಚಳ್ಳಕೇರೆಗೆ, ಚಳ್ಳಕೆರೆಯಿಂದ ರಾಯಪುರಕ್ಕೆ ಯಾತ್ರೆ ತೆರಳಲಿದ್ದು, ಅಲ್ಲಿಂದ ಆಂಧ್ರ ಪ್ರವೇಶವನ್ನು ಪಾದಯಾತ್ರೆ ಪ್ರವೇಶಿಸಲಿದೆ.
ಇದನ್ನೂ ಓದಿ: Karwar: ಎರಡು ಮಕ್ಕಳ ತಾಯಿ ಜೊತೆ ತಮಿಳುನಾಡಿನಿಂದ ಬಂದು ಕಾರವಾರದಲ್ಲಿ ವಾಸ; BE ಆಗಿದ್ರೂ ಗಾರೆ ಕೆಲಸ
2.ಎರಡನೇ ಹಂತದ ರೂಟ್ ಮ್ಯಾಪ್
ಹೀರೆಹಾಳ್ ನಿಂದ ಓಬಾಳಪುರ ಮೂಲಕ ರಾಜ್ಯಕ್ಕೆ ಪ್ರವೇಶ ಮಾಡಲಾಗುತ್ತದೆ. ಹಲಕುಂಡಿ, ಬಳ್ಳಾರಿಯಲ್ಲಿ ಭಾರತ್ ಜೋಡೋ ಯಾತ್ರೆ ಸಂಚಾರ ಆರಂಭಗೊಂಡು ಅಲ್ಲಿಂದ ಅಲುರ್ ಮೂಲಕ ಆಂಧ್ರ ಪ್ರವೇಶ ಮಾಡಲಿದೆ.
3.ಮೂರನೇ ಹಂತದ ರೂಟ್ ಮ್ಯಾಪ್
ಮಾಧವರಂ ಮೂಲಕ ರಾಯಚೂರಿನ ಗಿಲ್ಲೆಸೂಗೂರು ಮೂಲಕ ಪಾದಯಾತ್ರೆ ತಂಡ ಪ್ರವೇಶ ಮಾಡಲಿದೆ. ಗಿಲ್ಲೆಸೂಗೂರು ನಿಂದ ಯರೇಗಾರಕ್ಕೆ ಪಾದಯಾತ್ರೆ ಸಂಚರಿಸಲಿದೆ. ಯರೇಗಾರ ಮೂಲಕ ರಾಯಚೂರು, ರಾಯಚೂರಿನಿಂದ ದೇವಸೂಗೂರುಗೆ ಭಾರತ್ ಜೋಡೋ ಯಾತ್ರೆ ತೆರಳಲಿದೆ. ದೇವಸೂಗೂರಿನಿಂದ ವಿಕಾರಬಾದ್ ಮೂಲಕ ತೆಲಂಗಾಣಕ್ಕೆ ಪ್ರವೇಶ ಮಾಡಲಿದೆ.
ಸೆ.7ರಂದು ರಾಹುಲ್ ಗಾಂಧಿ ಚಾಲನೆ
ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರಿಂದ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಸೆಪ್ಟೆಂಬರ್ 7 ರಂದು ರಾಹುಲ್ ಗಾಂಧಿಯವರು ಭಾರತ್ ಜೋಡೋ ಪ್ರಾರಂಭ ಮಾಡ್ತಾರೆ. ಕನ್ಯಾಕುಮಾರಿಯ ತುತ್ತತುದಿಯಿಂದ ಪ್ರಾರಂಭವಾಗಿ ಕೇರಳ 19 ದಿನ, ತಮಿಳುನಾಡಿನಲ್ಲಿ 4 ದಿನಗಳ ಕಾಲ ಪಾದಯಾತ್ರೆ ನಡೆಯಲಿದೆ. 12 ರಾಜ್ಯಗಳು, ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪಾದಯಾತ್ರೆ ಹೋಗಲಿದೆ ಎಂದು ಮಾಹಿತಿ ನೀಡಿದರು.
Bharat jodo yatra route map in Karnataka mrq
ರೂಟ್ ಮ್ಯಾಪ್
ಕರ್ನಾಟಕದಲ್ಲಿ 21 ದಿನಗಳ ಕಾಲ ಯಾತ್ರೆ ನಡೆಯಲಿದೆ. ಕರ್ನಾಟಕದಲ್ಲಿ ಚಾಮರಾಜನಗರದಿಂದ ಶುರುವಾಗಿ ಗುಂಡ್ಲುಪೇಟೆ, ಮಂಡ್ಯ, ಮೈಸೂರು, ಬಳ್ಳಾರಿ, ಚಿತ್ರದುರ್ಗ, ರಾಯಚೂರು ಭಾಗದಲ್ಲಿ ಪಾದಯಾತ್ರೆ ಹೋಗಿ ಅಲ್ಲಿಂದ ತೆಲಂಗಾಣಕ್ಕೆ ಹೋಗಲಿದೆ ಎಂದು ಹೇಳಿದರು.
ಪ್ರತಿದಿನ 25 ಕಿಲೋ ಮೀಟರ್ ಪಾದಯಾತ್ರೆ
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ (KPCC President DK Shivakumar) ಮಾತನಾಡಿ, ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಐಕ್ಯತಾ ಯಾತ್ರೆ 21 ದಿನಗಳಲ್ಲಿ ಗುಂಡ್ಲುಪೇಟೆಯಿಂದ ರಾಯಚೂರುವರೆಗೆ ಒಂದು ರೂಟ್ ಮ್ಯಾಪ್ ಫಿಕ್ಸ್ ಆಗಿದೆ. ಪ್ರತಿದಿನ 25 ಕಿಲೋಮೀಟರ್ ಹೆಜ್ಜೆ ಹಾಕುವ ಜವಾಬ್ದಾರಿಯನ್ನು ರಾಹುಲ್ ಗಾಂಧಿ ತೆಗೆದುಕೊಂಡಿದ್ದಾರೆ.
ಇದನ್ನೂ ಓದಿ: Ramanagara: ಮಳೆ ಅವಾಂತರಕ್ಕೆ ಬೆಂಗಳೂರು-ಮೈಸೂರು ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ ಕಾರಣ: HDK ಆರೋಪ
ಪಕ್ಷಾತೀತವಾಗಿ ಯಾರು ಬೇಕಾದರೂ ಈ ಯಾತ್ರೆಯಲ್ಲಿ ಹೆಜ್ಜೆ ಹಾಕಬಹುದು. ಬೆಳಗ್ಗೆ 7 ರಿಂದ 11ರತನಕ ಸ್ಥಳೀಯರ ಜೊತೆ ಚರ್ಚೆ ಮಾಡ್ತೀವಿ. ಆ ನಂತರ ಪಾದಯಾತ್ರೆ ನಡೆಸ್ತೀವಿ ಎಂದು ಹೇಳಿದರು.


Post a Comment