ಸಿಹಿ ಸುದ್ದಿ: ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಇಳಿಕೆ


 ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರದಲ್ಲಿ ಇಳಿಕೆಯಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ. ಕಮರ್ಷಿಯಲ್ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರದಲ್ಲಿ‌ ಸೋಮವಾರ ರೂ. 36 ಇಳಿಕೆ ಮಾಡಲಾಗಿದ್ದು, ಈ ಹಿನ್ನಲೆಯಲ್ಲಿ ವಾಣಿಜ್ಯ ಬಳಕೆಯ 19 ಕೆ.ಜಿ. ಸಿಲಿಂಡರ್‌ ದರ ದೆಹಲಿಯಲ್ಲಿ 1,976 ರೂ.ಗೆ ಇಳಿಕೆಯಾಗಿದೆ. ಪ್ರಸ್ತುತ 2012.50 ರೂ. ದರವಿದೆ.

ಇನ್ನು ರಾಜ್ಯಗಳಲ್ಲಿ ಸ್ಥಳೀಯ ಮಾರಾಟ ತೆರಿಗೆಗೆ ಅನುಗುಣವಾಗಿ ಬೆಲೆಯಲ್ಲಿ ಇಳಿಕೆಯಾಗಲಿದೆ. ಈ‌ ನಡುವೆ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ಮೂಲಗಳು ಸ್ಪಷ್ಟ ಪಡಿಸಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Post a Comment

Previous Post Next Post