HDK Warning: 'ಇನ್ನೆಷ್ಟು ಹೆಣ ಬೀಳಿಸಲು ರಾಜ್ಯಕ್ಕೆ ಬರ್ತಿದ್ದಾರೆ ಅಮಿತ್​ ಶಾ?'​


 ಮನೆಗೆ ಬೆಂಕಿ ಬಿದ್ದಾಗ ಅಡುಗೆ ಮಾಡಿಕೊಳ್ಳುತ್ತಾರೆ ಎಂಬ ಅಶ್ವತ್ಥ ನಾರಾಯಣ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತಾಡಿದ ಕುಮಾರಸ್ವಾಮಿ ಅವರು, ಅಶ್ವತ್ಥ ನಾರಾಯಣ ಪ್ರಜ್ಞೆ ಇಟ್ಟುಕೊಂಡು ಮಾತನಾಡಲಿ ಎಂದ್ರು. ಡಿಕೆ ಸಹೋದರರ ಜೊತೆ ಆಡಿದ ಆಗಲ್ಲ. ಕುಮಾರಸ್ವಾಮಿ ಅತ್ರ ಇದೆಲ್ಲಾ ನಡೆಯುವುದಿಲ್ಲ ಎಂದ್ರು.

ಬೆಂಗಳೂರು (ಆ.2): ಬಿಡದಿಯ ತೋಟದ ಮನೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (H.D Kumaraswamy) ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಸರ್ಕಾರದ (BJP Government) ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ಒಂದು ಕಡೆ ಕೋಮು‌ಸಂಘರ್ಷ ಹೆಚ್ಚಾಗಿದೆ. ಕೂಡಲೇ ವಿಧಾನಸಭಾ ಕಲಾಪ ಕರೆಯುವಂತೆ ಹೆಚ್ಡಿಕೆ ಆಗ್ರಹಿಸಿದ್ದಾರೆ. ನಾಡಿನಲ್ಲಿ ನಿರೀಕ್ಷೆ ಮಾಡದಷ್ಟು ದೊಡ್ಡ ಮಟ್ಟದಲ್ಲಿ ಮಳೆಯಾಗಿದೆ. ಬೆಂಗಳೂರು-ಮೈಸೂರು ರಸ್ತೆ ನಿರ್ಮಾಣದ ವೇಳೆ ಅಂಡರ್ ಪಾಸ್ ಗಳನ್ನ ಸರಿಯಾಗಿ ನಿರ್ಮಾಣ ಮಾಡಿಲ್ಲ. ಸರ್ಕಾರದ ಕಳಪೆ ಕಾಮಗಾರಿ (Poor Work of Govt) ಬಯಲಾಗಿದೆ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ

ಅಶ್ವತ್ಥ ನಾರಾಯಣಗೆ ಏನು ಮಾತಾಡ್ತಿದ್ದೀನೆ ಅನ್ನೋ ಪ್ರಜ್ಞೆ ಇ

ಮನೆಗೆ ಬೆಂಕಿ ಬಿದ್ದಾಗ ಅಡುಗೆ ಮಾಡಿಕೊಳ್ಳುತ್ತಾರೆ ಎಂಬ ಅಶ್ವತ್ಥ ನಾರಾಯಣ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತಾಡಿದ ಕುಮಾರಸ್ವಾಮಿ ಅವರು, ಅಶ್ವತ್ಥ ನಾರಾಯಣ ಪ್ರಜ್ಞೆ ಇಟ್ಟುಕೊಂಡು ಮಾತನಾಡಲಿ ಎಂದ್ರು. ಡಿಕೆ ಸಹೋದರರ ಜೊತೆ ಆಡಿದ ಆಗಲ್ಲ. ಕುಮಾರಸ್ವಾಮಿ ಅತ್ರ ಇದೆಲ್ಲಾ ನಡೆಯುವುದಿಲ್ಲ. ದುಡ್ಡಿನ ಮದದಿಂದ ಅಶ್ವತ್ಥ ನಾರಾಯಣ ಹೀಗೆ ಮಾತನಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಕಿಡಿಕಾರಿದ್ರು

ಇನ್ನೊಂದಷ್ಟು ಹೆಣ ಬೀಳಿಸಲು ರಾಜ್ಯಕ್ಕೆ ಬರ್ತಿದ್ದಾ

ಅಮಿತ್ ಷಾ ರಾಜ್ಯ ಪ್ರವಾಸ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕೇಂದ್ರ ಗೃಹ ಸಚಿವರು ಇನ್ನೊಂದಷ್ಟು ಹೆಣ ಬೀಳಿಸಲು ರಾಜ್ಯಕ್ಕೆ ಬರುತ್ತಿರಬೇಕು. ಗುಜರಾತ್ ನಲ್ಲಿನ ಹತ್ಯೆಗಳನ್ನು ಇಲ್ಲಿ ಮುಂದುವರಿಸಲು ಅಮಿತ್ ಶಾ ಇಲ್ಲಿಗೆ ಬರುತ್ತಿದ್ದಾರಾ? ಚುನಾವಣೆ ಸಮಯದಲ್ಲಿ ನರಬಲಿ ನಡೆಸಿ, ರಾಜಕೀಯ ಮಾಡುವುದೇ ಬಿಜೆಪಿಯ ಗುಣ ಎಂದು ಕಿಡಿಕಾರಿದ್ರು

ಇದನ್ನೂ ಓದಿ: AAP Complaint: ಸಚಿವ ಅಶ್ವತ್ಥ ನಾರಾಯಣ ವಿರುದ್ಧ ಬ್ರಹ್ಮಾಂಡ ಭ್ರಷ್ಟಾಚಾರದ ಆರೋಪ; ಲೋಕಾಯುಕ್ತಕ್ಕೆ

 ಅಧಿಕಾರದ ಮದದಲ್ಲಿ ತಿಂದು ತೇಗಿದ್ದಾರೆ

ಬಿಜಿಪಿ ಅಧಿಕಾರಕ್ಕೆ ಬರಲು ಹಿಂದುತ್ವದ ಹೆಸರಿನಲ್ಲಿ ಮನೆಯಲ್ಲಿದ್ದ ಯುವಕರನ್ನು ಕರೆತಂದರು, ಈಗ ನಾವು ಹೇಳಿದ ಹಾಗೆ ಕೇಳಬೇಕು ಎಂದು ಅಪ್ಪಣೆ ಮಾಡುತ್ತಿದ್ದಾರೆ. ಅಧಿಕಾರದ ಮದದಲ್ಲಿ ತಿಂದು ತೇಗಿದ್ದಾರೆ. ಈಗ ಯುವಕರನ್ನು ಬಲಿ ಪಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ರು

ಯುವಕರ ಭವಿಷ್ಯಕ್ಕೆ ಕೊಳ್ಳಿ ಇಡು

ಕಂಗೊಳಿಸುತ್ತಿದ್ದ ಕರಾವಳಿಯಲ್ಲಿ ಬಡ ಕುಟುಂಬಗಳ ಯುವಕರನ್ನು ರಾಜಕೀಯ ದುರ್ಲಾಭಕ್ಕೆ ಬಳಸಿಕೊಳ್ಳಲಾಗುತ್ತಿದೆ. ಎರಡೂ ರಾಷ್ಟ್ರೀಯ ಪಕ್ಷಗಳೂ ಕ್ರಿಯಾಶೀಲ ಯುವಕರ ಭವಿಷ್ಯಕ್ಕೆ ಕೊಳ್ಳಿ ಇಡುತ್ತಿವೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಕರಾವಳಿಯಲ್ಲಿ ನಡೆದ ಮೂವರು ಯುವಕರ ಹತ್ಯೆ, ನಂತರದ ಬೆಳವಣಿಗೆಗಳ ಕುರಿತು ಮಂಗಳವಾರ ಟ್ವೀಟ್‌ ಮಾಡಿರುವ ಅವರು, ಸರ್ಕಾರ ಮತ್ತು ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾ

ಕ್ಷಣಕ್ಕೊಂದು ಟ್ವಿಸ್ಟ್‌ ಕೊಡುತ್ತಾ, ಜನರಿಗೆ ಸತ್ಯ ತಿಳಿಸುತ್ತಿ

ಕರಾವಳಿಯಲ್ಲಿ ನಡೆದ ತ್ರಿವಳಿ ಕೊಲೆಗಳ ಗುಟ್ಟನ್ನು ಬೇಧಿಸಿ ನೈಜ ಹಂತಕರನ್ನು ಹಿಡಿಯುವ ಬದಲು ರಾಜ್ಯ ಬಿಜೆಪಿ ಸರಕಾರವು, ತಾನೇ ಮುಂದೆ ನಿಂತು ದಿನಕ್ಕೊಂದು ಕಥೆ ಕಟ್ಟುತ್ತಿದೆ. ಕ್ಷಣಕ್ಕೊಂದು ಟ್ವಿಸ್ಟ್‌ ಕೊಡುತ್ತಾ, ಜನರಿಗೆ ಸತ್ಯ ತಿಳಿಸುತ್ತಿಲ್ಲ ಎಂದು ಆರೋಪಿಸಿದ್ದಾ

ಇದನ್ನೂ ಓದಿ: Ashwath Narayan: ಸಚಿವ ಅಶ್ವತ್ಥ ನಾರಾಯಣ ವಿರುದ್ಧ FIR ದಾ

ಮಂಗಳೂರಿನಲ್ಲಿ ನಿನ್ನೆ ಹೇಳಿದಂತೆ, ಅಗಸ್ಟ್‌ 5ರೊಳಗೆ ನೈಜ ಕೊಲೆಗೆಡುಕರನ್ನು ಬಂಧಿಸದಿದ್ದರೆ ನಾನು ಶಾಂತಿಯುತ ಸತ್ಯಾಗ್ರಹ ಕೂರುವುದು ಶತಃಸಿದ್ಧ. ನನ್ನದು ಗಾಂಧೀ ಮಾರ್ಗ. ಅಧಿಕಾರಕ್ಕಾಗಿ ವಾಮಮಾರ್ಗ ಹಿಡಿಯುವ ಪಕ್ಷಕ್ಕೆ ನೆತ್ತರ ದಾರಿಯೇ ರಾಜಮಾರ್ಗ ಎನ್ನುವುದನ್ನು ಕರಾವಳಿ ಜನರು ಅರ್ಥ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾ

ರಾಜ್ಯ ಬಿಜೆಪಿ ಸರಕಾರದ ಪಕ್ಷಪಾತ ನೀತಿ ಕಣ್ಣಿಗೆ ರಾಚುವಂತಿದೆ. ಇದು ಅತ್ಯಂತ ಮಾರಕ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಡವಳಿಕೆಯನ್ನು ಯಾರೂ ಒಪ್ಪುವುದಿಲ್ಲ. ಈಗೇನೋ ಜ್ಞಾನೋದಯವಾಗಿ ಮಸೂದ್‌ ಮತ್ತು ಫಾಝಿಲ್‌ ಮನೆಗೂ ಭೇಟಿ ನೀಡುವುದಾಗಿ ಹೇಳಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ರೆ.ಖಲುರೆ.ಲ್ಲರೆ.ತ್ತಿವೆ. ದೂರು.ರಾ?.ರಲಿ.ದಾಗಿ ಹೇಳಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

Post a Comment

Previous Post Next Post