ಬಿ. ಎಸ್.ಯಡಿಯೂರಪ್ಪ ತನಿಖೆಗೆ ಅನುಮತಿ ನೀಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಯಡಿಯೂರಪ್ಪ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹಾಗೂ ಹಿಮಾ ಕೊಹ್ಲಿ ಅವರನ್ನು ಒಳಗೊಂಡ ನ್ಯಾಯಪೀಠವು, ದೂರುದಾರರಾದ ಟಿ.ಜೆ. ಅಬ್ರಾಹಂ ಅವರಿಗೆ ನೋಟಿಸ್ ಜಾರಿ ಮಾಡಿದೆ
ನವದೆಹಲಿ (ಸೆ.23): ಭ್ರಷ್ಟಾಚಾರ (Corruption) ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಿ.ಎಸ್.ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು (Lokayukta Police) ದಾಖಲಿಸಿರುವ ಎಫ್ಐಆರ್‌ನ ತನಿಖೆಗೆ ಸುಪ್ರೀಂ ಕೋರ್ಟ್ (Supreme Court) ತಡೆಯಾಜ್ಞೆ ನೀಡಿದೆ. 12 ಕೋಟಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ (Investigation) ಅಸ್ತು ಎಂದಿರುವ ಕರ್ನಾಟಕ ಹೈಕೋರ್ಟ್ನ ತೀರ್ಪು ಪ್ರಶ್ನಿಸಿ ಮಾಜಿ ಸಿಎಂ ಬಿಎಸ್ವೈ ಸುಪ್ರೀಂಕೋರ್ಟ್ ಮೆಟ್ಟಿಲು ಏರಿದ್ದು, ಇಂದು ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಪ್ರಕರಣದ ತನಿಖೆಗೆ ತಡೆ ನೀಡಿದ್ದು, ಪ್ರತಿವಾದಿಗಳಿಗೆ ನೋಟಿಸ್ (Notice) ಜಾರಿ ಮಾಡಿದೆ
ತನಿಖೆಗೆ ಅಸ್ತು ಎಂದಿದ್ದ ಸುಪ್ರೀಂ ಕೋ
WWW.publicvahini.com
ಮೊನ್ನೆಯಷ್ಟೇ ಕೋರ್ಟ್ನಲ್ಲಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಅವರ ಕೆಲವು ಕುಟುಂಬಸ್ಥರ ವಿರುದ್ಧ ಪ್ರಕರಣದ ವಿಚಾರಣೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಚಾರಣೆ ನಡೆಸುವಂತೆ ಲೋಕಾಯುಕ್ತರಿಗೆ ಸೂಚನೆ ನೀಡಿತ್ತು. ಕೆಳ ನ್ಯಾಯಾಲಯದ ಆದೇಶದಂತೆ ಲೋಕಾಯುಕ್ತದಲ್ಲಿ ಎಫ್ಎಆರ್ ಕೂಡಾ ದಾಖಲಾಗಿತ್ತು
ತೀರ್ಪು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿದ್ದ ಬಿಎಸ್ವೈ
ಈ ಹಿನ್ನೆಲೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು. ಇಂದು ಬಿಎಸ್ವೈ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಿರುವ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಹೈಕೋರ್ಟ್ ತೀರ್ಪಿಗೆ ತಡೆ ನೀಡಿ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾ
ಹಳೆಯ ಭ್ರಷ್ಟಾಚಾರ ಕೇಸ್ಗೆ ಮರು
ಇದರಿಂದ ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಸಂಜಯ್ ಶ್ರೀ, ಚಂದ್ರಕಾಂತ ರಾಮಲಿಂಗಂ, ಶಶಿಧರ ಮರಡಿ, ಎಸ್.ಟಿ.ಸೋಮಶೇಖರ್, ಡಾ.ಜಿ.ಸಿ.ಪ್ರಕಾಶ್, ವಿರುಪಾಕ್ಷಪ್ಪ, ಕೆ.ರವಿ ಅವರ ವಿರುದ್ಧ ಎಫ್ಐಆರ್ ದಾಖಲಾಗಲಿದ್ದು, ಇವರಿಗೆಲ್ಲಾ ಸಂಕಷ್ಟ ಎದುರಾಗಲಿದೆ. ಈ ಮೂಲಕ ಹಳೆಯ ಭ್ರಷ್ಟಾಚಾರ ಕೇಸ್ ಗೆ ಈಗ ಮರು ಜೀವ ಬಂದಿದೆ. ಇದು ಯಡಿಯೂರಪ್ಪ ಮತ್ತು ಇತರರ ಕೊರಳಿಗೆ ಯಾವ ರೀತಿ ಸುತ್ತಿಕೊಳ್ಳುತ್ತದೆ ಎಂದು ಕಾದು ನೋಡಬೇಕಿದೆ
ದೂರಿನಲ್ಲಿರುವುದೇನು
ಎಂಎಸ್ ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿ ಪ್ರೈವೇಟ್ ಲಿಮಿಟೆಡ್ ಪರವಾಗಿ ಬಿಡಿಎಯಿಂದ ವರ್ಕ್ ಆರ್ಡರ್ ನೀಡಲಾಗಿದೆ ಎಂದು ದೂರುದಾರರು ಆರೋಪಿಸಿದ್ದರು. ಯಡಿಯೂರಪ್ಪ ಪರವಾಗಿ ಐಎಎಸ್ ಅಧಿಕಾರಿ ಜಿ ಸಿ ಪ್ರಕಾಶ್ 12 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಪ್ರಕಾಶ್ ವಸೂಲಿ ಮಾಡಿ ಮಗನ ಮೂಲಕ ಯಡಿಯೂರಪ್ಪಗೆ ಪಾವತಿಸಿದ್ದಾರೆ ಎನ್ನಲಾಗಿದೆ. ಯಡಿಯೂರಪ್ಪ, ವಿಜಯೇಂದ್ರ, ಶಶಿದರ್ ಮರಡಿ ಮತ್ತು ಸಂಜಯ್ ಶ್ರೀಗಳು ಶೆಲ್ ಕಂಪನಿಗಳನ್ನು ಬಳಸಿಕೊಂಡು ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಅರ್ಜಿದಾರರು ದೂರಿನಲ್ಲಿ ಆರೋಪಿಸಿದ್ದ
ಪ್ರಕರಣದ ಹಿನ್ನೆ
ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಗುತ್ತಿಗೆ ನೀಡುವಾಗ ಭ್ರಷ್ಟಾಚಾರ ಆಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಆದರೆ, ರಾಜ್ಯಪಾಲರು ಪೂರ್ವಾನುಮತಿ ನೀಡದ ಕಾರಣ ದೂರು ವಜಾಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಟಿ.ಜೆ. ಅಬ್ರಹಾಂ ಹೈಕೋರ್ಟ್ ಮೆಟ್ಟಿಲೇರಿದ್ದ
ಏನಿದು ಪ್ರಕ
ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ ವೈ ವಿಜಯೇಂದ್ರ, ಮೊಮ್ಮಗ ಶಶಿದರ್ ಮರಡಿ, ಅಳಿಯ ಸಂಜಯ್ ಶ್ರೀ, ಚಂದ್ರಕಾಂತ್ ರಾಮಲಿಂಗಂ, ಹಾಲಿ ಬಿಡಿಎ ಅಧ್ಯಕ್ಷ ಹಾಗೂ ಶಾಸಕ ಎಸ್ ಟಿ ಸೋಮಶೇಖರ್, ಐಎಎಸ್ ಅಧಿಕಾರಿ ಜಿ ಸಿ ಪ್ರಕಾಶ್, ಕೆ ರವಿ ಮತ್ತು ವಿರೂಪಾಕ್ಷಪ್ಪ ವಿರುದ್ಧ ಕೋರ್ಟ್ಗೆ ದೂರು ನೀಡಲಾಗಿತ್ತು. ಈ ಸಂಬಂಧದ ಅರ್ಜಿಯನ್ನು ಜುಲೈ 8, 2021 ರಂದು ವಿಚಾರಣೆ ನಡೆಸಿದ್ದ ಸೆಷನ್ಸ್ ನ್ಯಾಯಾಲಯವು ದೂರು ವಜಾಗೊಳಿಸಿತ್ತು. ಕೆಳ ನ್ಯಾಯಾಲಯದ ತೀರ್ಪಿನ ವಿರುದ್ಧ ಅರ್ಜಿದಾರರು ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ರಣರು.ಲೆರು.?.ಜೀವಡಿದೆ..omರ್ಟ್.. ಹೈಕೋರ್ಟ್‌ಗೆ ಮೊರೆ ಹೋಗಿದ್ದರು.
Post a Comment