ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೀಯ ಚುನಾವಣೆಗೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೆಸರು ಮುಂಚೂಣಿಗೆ ಬಂದಿದೆ. ಈ ವಿಚಾರವನ್ನು ಕಾಂಗ್ರೆಸ್ ಉನ್ನತ ಮೂಲಗಳು ತಿಳಿಸಿವೆ.
ಇದೀಗ ದೇಶದ ಚಿತ್ತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆಯೋ ಚುನಾವಣೆಯತ್ತ (Congress President Election) ತಿರುಗಿದೆ. ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19ರಂದು ಮತ ಎಣಿಕೆಯಾಗಿ ಹೊಸ ಅಧ್ಯಕ್ಷರ ಘೋಷಣೆ ಆಗಲಿದೆ. ಈ ನಡುವೆ ಯಾರಾಗ್ತಾರೆ ಕಾಂಗ್ರೆಸ್ ಅಧ್ಯಕ್ಷರು (Congress President) ಅನ್ನೋ ಕುತೂಹಲ ಹೆಚ್ಚಾಗಿದೆ. ಸಾಲು ಸಾಲು ಸೋಲುಗಳಿಂದ ಕಂಗೆಟ್ಟಿರುವ ಕಾಂಗ್ರೆಸ್ನನ್ನು ಮೇಲೆತ್ತೋ ಕೈ ಬೇಕಾಗಿದೆ. ಹೀಗಾಗಿ ಯಾರು ಅಧ್ಯಕ್ಷರ ಪಟ್ಟಕ್ಕೇರಲು ಸೂಕ್ತ ವ್ಯಕ್ತಿ ಅನ್ನೋ ಲೆಕ್ಕಚಾರ ಕೂಡ ನಡೆಯುತ್ತಿದೆ.
ಮುಂಚೂಣಿಯಲ್ಲಿದೆ ಮಲ್ಲಿಕಾರ್ಜುನ ಖರ್ಗೆ ಹೆಸರು
ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು ಉಲ್ಬಣಗೊಂಡ ಬಳಿಕ, ಪಕ್ಷದ ರಾಷ್ಟ್ರೀಯ ಅಧ್ಯಕ್ಷೀಯ ಚುನಾವಣೆಗೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೆಸರು ಮುಂಚೂಣಿಗೆ ಬಂದಿದೆ. ಈ ವಿಚಾರವನ್ನು ಕಾಂಗ್ರೆಸ್ ಉನ್ನತ ಮೂಲಗಳು ತಿಳಿಸಿವೆ. ಈ ಬಾರಿಯ ಚುನಾವಣೆಯಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರು ಸ್ಪರ್ಧಿಸಲು ಸಜ್ಜಾಗಿದ್ದರು. ಆದರೆ ಮುಂದಿನ ಸಿಎಂ ಆಯ್ಕೆ ವಿಚಾರವಾಗಿ ಅಲ್ಲಿನ ಕಾಂಗ್ರೆಸ್ ಶಾಸಕರಲ್ಲಿ ಒಡಕು ಮೂಡಿದ್ದು, ಈ ಕಾರಣಕ್ಕೆ ಗೆಹಲೋತ್ ಸ್ಪರ್ಧಿಸುವುದು ಅನುಮಾನ ಎನ್ನಲಾಗ್ತಿ
ದೆ. ಮಲ್ಲಿಕಾರ್ಜುನ ಖರ್ಗೆ
ನಾಮಪತ್ರ ಸಲ್ಲಿಸಲು ಸಜ್ಜಾಗಿದ್ದಾರೆ ಸಂಸದ ಶಶಿ ತರೂರ್
ಕೇರಳದ ತಿರುವನಂತಪುರ ಸಂಸದ ಶಶಿ ತರೂರ್ ಅವರು ಸೆಪ್ಟೆಂಬರ್ 30ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಅವರಿಗೆ ಎದುರಾಳಿಯಾಗಿ ಹಿರಿಯ ನಾಯಕಿ ಸೆಲ್ಜಾ ಕುಮಾರಿ ಅಥವಾ ರಾಹುಲ್ ಗಾಂಧಿ ಅವರ ಆಪ್ತರೆನಿಸಿಕೊಂಡಿರುವ ಕೆ.ಸಿ. ವೇಣುಗೋಪಾಲ್ ಕಣಕ್ಕಿಳಿಯಲಿದ್ದಾರೆ ಎಂದು ಈ ಮೊದಲು ವರದಿಯಾಗಿತ್ತು. ಸೆಲ್ಜಾ ಕುಮಾರಿ ಮತ್ತು ವೇಣುಗೋಪಾಲ್ ಹೆಸರುಗಳು ಈಗಲೂ ಚಾಲ್ತಿಯಲ್ಲಿವೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಖಜಾಂಚಿ ಪವನ್ ಕುಮಾರ್ ಬನ್ಸಲ್ ಅವರು ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರದ ಮುಖ್ಯಸ್ಥ ಮಧುಸೂದನ್ ಮಿಸ್ತ್ರಿ ಅವರಿಂದ ನಾಮಪತ್ರದ ಅರ್ಜಿ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: Sudha Murthy: ರಾಜಮಾತೆ ಕಾಲಿಗೆ ನಮಸ್ಕರಿಸಿದ ಸುಧಾ ಮೂರ್ತಿ; ನೀವು ಮಾಡಿದ್ದು ಸರೀನಾ ಎಂದು ನೆಟ್ಟಿಗರ ಪ್ರಶ್ನೆ!
ಅಕ್ಟೋಬರ್ 17ರಂದು ಚುನಾವಣೆ
ಕಾಂಗ್ರೆಸ್ ಪಕ್ಷದ ಪ್ರಕಟಣೆ ಪ್ರಕಾರ ಸೆಪ್ಟೆಂಬರ್ 24 ರಿಂದ 30ರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಅಕ್ಟೋಬರ್ 1ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಹಿಂಪಡೆಯಲು ಅಕ್ಟೋಬರ್ 8 ಕೊನೇ ದಿನವಾಗಿದೆ. ಅದೇ ದಿನ (ಅ.8) ಸಂಜೆ 5ರ ವೇಳೆಗೆ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟವಾಗಲಿದೆ. ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಎರಡು ದಿನಗಳ ಬಳಿಕ ಅಕ್ಟೋಬರ್ 19ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.
ಶಶಿತರೂರ್ ಅವರ ಹೆಸರು ಸಹ ಕೇಳಿ ಬರ್ತಿದೆ
ದೆಹಲಿ: 20 ವರ್ಷಗಳ ನಂತರ ಕಾಂಗ್ರೆಸ್ ಮೊದಲ ಬಾರಿಗೆ ಗಾಂಧಿ ಕುಟುಂಬದ ಸದಸ್ಯರನ್ನು ಹೊರತಾದ ಅಧ್ಯಕ್ಷರನ್ನು ಹೊಂದುವ ಸಾಧ್ಯತೆ ದಟ್ಟವಾಗಿದೆ. ಗಾಂಧಿ ಕುಟುಂಬದ ನಿಷ್ಠಾವಂತ ಅಶೋಕ್ ಗೆಹ್ಲೋಟ್ ಮತ್ತು ಸಂಸದ ಶಶಿ ತರೂರ್ (Shashi Tharoor) ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಸಾಧ್ಯತೆಯಿದೆ. ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಯಾರು ಬೇಕಾದರೂ ಸ್ವತಂತ್ರರು ಎಂದು ಸೋನಿಯಾ ಗಾಂಧಿ (Sonia Gandhi) ಶಶಿ ತರೂರ್ ಅವರಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಸೋನಿಯ ಗಾಂಧಿ ಕುಟುಂಬದ ಹೊರತಾದ ಕಾಂಗ್ರೆಸ್ ನಾಯಕರು ಅಧ್ಯಕ್ಷ ಸ್ಥಾನಕ್ಕೆ ಏರುವ ಸಾಧ್ಯತೆಗಳು ಇದೀಗ ಹೆಚ್ಚಳವಾಗುತ್ತಿದೆ.
ಇದನ್ನೂ ಓದಿ: Vidhana Soudha: ರಾಷ್ಟ್ರಪತಿಗಳಿಗೆ ನಾಗರೀಕ ಸತ್ಕಾರ; ನಾನು ಜನತಾ ಸೇವೆಗೆ ಇರೋ ಸೇವಕಿ ಎಂದ್ರು ದ್ರೌಪದಿ ಮುರ್ಮು
ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಸ್ಪರ್ಧಿಸಲು ಬಯಸುವ ಎಲ್ಲರೂ ಸ್ವತಂತ್ರರು. ಇದು ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಹುಲ್ ಗಾಂಧಿಯವರ ಸ್ಥಿರವಾದ ನಿಲುವು. ಇದು ಮುಕ್ತ, ಪ್ರಜಾಪ್ರಭುತ್ವ ಮತ್ತು ಪಾರದರ್ಶಕ ಪ್ರಕ್ರಿಯೆ. ಯಾರೇ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲೂ ಯಾರ ಒಪ್ಪಿಗೆಯೂ ಬೇಕಿಲ್ಲ ಎಂದು ತಿಳಿಸಿದ್ದಾರೆ.
Post a Comment