DK Shivakumar: ಅಕ್ಟೋಬರ್‌ನಲ್ಲಿ KPCC ಅಧ್ಯಕ್ಷ ಸ್ಥಾನಕ್ಕೆ ನಡೆಯಲಿದೆ ಚುನಾವಣೆ -ಡಿಕೆ ಶಿವಕುಮಾರ್


 ಡಿಕೆ ಶಿವಕುಮಾರ್ಮಾ

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ಬಗ್ಗೆ ಡಿ.ಕೆ ಶಿವಕುಮಾರ್ ಮಾತಾಡಿದ್ದಾರೆ. ನಾನು ಅಧ್ಯಕ್ಷನಾಗಿ 2 ವರ್ಷಗಳು ಪೂರ್ಣವಾಗುತ್ತಿದೆ. ಮತ್ತೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದು ಕೊನೆಯ ದಿನದಂದು ನಿರ್ಧಾರವಾಗುತ್ತದೆ ಎಂದು ಹೇಳಿದ್ದಾ

 ರಾಯಚೂರು (ಸೆ.12): ಕಾಂಗ್ರೆಸ್ ಮುಂಬರುವ ವಿಧಾನಸಭೆ ಚುನಾವಣೆಗೆ (Assembly Election) ಭಾರೀ ತಯಾರಿ ನಡೆಸಿದೆ. ಈ ವೇಳೆ ಕೆಪಿಸಿಸಿ ಅಧ್ಯಕ್ಷರ ಚುನಾವಣೆ (KPCC President Election) ಕೂಡ ಹತ್ತಿರ ಬಂದಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (D.K. Shivakumar) ಅವರೇ ಹೇಳಿದ್ದಾರೆ. ಇದೇ ಅಕ್ಟೋಬರ್ 16 ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರ (New President) ಆಯ್ಕೆಗೆ ಚುನಾವಣೆ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಭಾರತ ಜೋಡೋ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸುವುದಕ್ಕೆ ಇಂದು (ಸೆಪ್ಟೆಂಬರ್ 12) ರಾಯಚೂರಿಗೆ ಆಗಮಿಸಿದ್ದ ಡಿ.ಕೆ ಶಿವಕುಮಾರ್, ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ಡಿ.ಕೆ ಶಿವಕುಮಾರ್ ಅಧಿಕಾರ ಅವಧಿ ಪೂ

 ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸೋ ಬಗ್ಗೆ ಡಿ.ಕೆ ಶಿವಕುಮಾರ್ ಮಾತಾಡಿದ್ದಾರೆ. ನಾನು ಅಧ್ಯಕ್ಷನಾಗಿ 2 ವರ್ಷಗಳು ಪೂರ್ಣವಾಗುತ್ತಿದೆ. ಮತ್ತೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದು ಕೊನೆಯ ದಿನದಂದು ನಿರ್ಧಾರವಾಗುತ್ತದೆ. ಎಐಸಿಸಿ ಈಗಾಗಲೇ ಪ್ರಕಟಿಸಿದಂತೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬೆಂಗಳೂರಿನ ಡಾ.ಬಿ.ಆರ್. ಅಂಬೇಡ್ಕರ್ ‌ಭವನದಲ್ಲಿ ಮತದಾನ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ

3 ವರ್ಷದಿಂದ ಯಾವ ಹಗರಣ ಬಯಲು ಮಾಡಿ

ಕಾಂಗ್ರೆಸ್ ಹಗರಣಗಳನ್ನು ಬಯಲಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ರು. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ಕಳೆದ 3 ವರ್ಷಗಳಿಂದಲೂ ಬಿಜೆಪಿಯವರು ಹಗರಣ ಬಯಲಿಗೆ ಎಳೆಯುವುದಾಗಿ ಹೇಳುತ್ತಿದ್ದಾರೆ. ಹಗರಣ ಬಯಲು ಮಾಡುವುದು ಸರ್ಕಾರದ‌ ಕರ್ತವ್ಯ, ಇಂದಿನಿಂದಲೇ ಆ ಕೆಲಸ ಮಾಡಲಿ ಎಂದರು


. ಲ್ಲ.ರ್ಣ ರೆ.ಡಲಿ ಎಂದರು ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್​

ನಾನು, ಸಿದ್ದರಾಮಯ್ಯ ಅಂದ್ರೆ ಬಿಜೆಪಿಗೆ ಇಷ್ಟ

ಬಿಜೆಪಿಯವರಿಗೆ ನನ್ನ ಮೇಲೆ ಹಾಗೂ ಸಿದ್ದರಾಮಯ್ಯ ಅವರ ಮೇಲೆ ಪ್ರೀತಿ ಜಾಸ್ತಿ ಅದಕ್ಕೆ ನಮ್ಮ ಬಗ್ಗೆ ಹಗರಣದ ಆರೋಪ ಮಾಡುತ್ತಾರೆ ಎಂದು ಹೇಳಿದರು. ಬಿಜೆಪಿಯವರ ಬೆದರಿಕೆಗೆ ನಾವು ಹೆದರುವುದಿಲ್ಲ. ದಿಟ್ಟತನದಿಂದ ಉತ್ತರಿಸುತ್ತೇವೆ. ಆದರೆ ಸಾಮಾಜಿಕ ಮಾಧ್ಯಮಗಳ ಬಿಜೆಪಿಯವರಿಗೆ ಪ್ರತಿದಿನ ಒಂದು ಪ್ರಶ್ನೆ ಕೇಳುತ್ತಿದ್ದೇವೆ. ಆ ಪ್ರಶ್ನೆಗಳಿಗೆ ಬಿಜೆಪಿ ಉತ್ತರಿಸುತ್ತಿಲ್ಲ ಏಕೆ ಎಂಬುದನ್ನು ಮಾಧ್ಯದವರೇ ಅವರನ್ನು ಕೇಳಬೇಕು ಎಂದು ಡಿಕೆ ಶಿವಕುಮಾರ್​ ಹೇಳಿದ್ದಾರೆ.

ಇದನ್ನೂ ಓದಿ: Basavaraj Dadesuguru: ಅಧಿವೇಶನ ವೇಳೆಯೇ ಕಾಂಗ್ರೆಸ್‌ನಿಂದ ವಿಡಿಯೋ ಬಾಂಬ್; ಯಾವಾಗ್ಲೋ ಮಾತಾಡಿದ್ದು ಅಂತ ದಡೇಸುಗೂರು ತಿರುಗೇಟು

ಅ.22, 23ರಂದು ಭಾರತ ಜೋಡೋ ಪಾದಯಾತ್ರೆ

ಅಕ್ಟೋಬರ್ 22 ಮತ್ತು 23 ರಂದು ಭಾರತ ಜೋಡೋ ಪಾದಯಾತ್ರೆ ರಾಯಚೂರು ಜಿಲ್ಲೆಗೆ ಬರಲಿದೆ. ಕೃಷ್ಣ ನದಿಯಿಂದ ತುಂಗಭದ್ರಾ ನದಿವರೆಗೂ ಪಾದಯಾತ್ರೆ ನಡೆಸುವರು. ರಾಹುಲ್ ಗಾಂಧಿಯವರು ತಮ್ಮ‌ ಕಬ್ಬಿಣದ ಕಾಲುಗಳ ಮೂಲಕ ಸಮಾಜದ ಎಲ್ಲ‌ ಜನರನ್ನು ಜೋಡಿಸುವ ಕೆಲಸವನ್ನು ಸೂಜಿಯ ರೀತಿಯಲ್ಲಿ ಹೊಲಿಯುವ ಮೂಲಕ ಮಾಡುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್​ ಹೇಳಿದ್ರು.

ಪಾದಯಾತ್ರೆಯಲ್ಲಿ ಶಕ್ತಿ ಪ್ರದರ್ಶನ

ಕೊಪ್ಪಳ, ಕಲಬುರಗಿ, ಬೀದರ್, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಯ ಕಾಂಗ್ರೆಸ್ ನಾಯಕರು ಹಾಗೂ ಬೆಂಬಲಿಗರು ರಾಯಚೂರಿನ ಪಾದಯಾತ್ರೆಯಲ್ಲಿ ಭಾಗಹಿಸುವರು. ಹಾಲಿ ಶಾಸಕರು ಮತ್ತು ಟಿಕೆಟ್ ಆಕಾಂಕ್ಷಿಗಳು ಈ ಪಾದಯಾತ್ರೆಯಲ್ಲಿ ಶಕ್ತಿ ಪ್ರದರ್ಶನ ಮಾಡಲಿದ್ದಾರೆ ಎಂದು ತಿಳಿಸಿದರು. ಬಿಜೆಯವರು ಈ ಮೊದಲು ಜನೋತ್ಸವ ಮಾಡುವುದಾಗಿ ಹೇಳುತ್ತಿದ್ದರು. ಈಗ ಜನಸ್ಪಂದನೆ ಮಾಡಲು ಮುಂದಾಗಿದ್ದಾರೆ. ಇದುವರೆಗೂ ಜನಸ್ಪಂದನೆ ಮಾಡುವುದಕ್ಕೆ ಏಕೆ‌ ಆಗಿಲ್ಲವೆ ಎಂದು ಡಿ.ಕೆ ಶಿವಕುಮಾರ್​ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: BJP vs Congress: ನಿಮ್ಮನ್ನು ಖೆಡ್ಡಾಕ್ಕೆ ಬೀಳಿಸಲು ತುದಿಗಾಲಲ್ಲಿ ನಿಂತಿದ್ದಾರೆ ಡಿಕೆಶಿ, ಖರ್ಗೆ, ಪರಮೇಶ್ವರ್‌: ಬಿಜೆಪಿ ಟ್ವೀಟ್

ಸಿದ್ದರಾಮಯ್ಯ ಭಾವಚಿತ್ರ ಮಾಯ

ಕಾಂಗ್ರೆಸ್​ ನಾಯಕರ ಸುದ್ದಿಗೋಷ್ಠಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಫೋಟೋ ಇರಲಿಲ್ಲ. ಈ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ ಶಿವಕುಮಾರ್, ನಾನು ನನ್ನ ಫೋಟೋವನ್ನು ಸಹ ಹಾಕ್ಬೇಡಿ ಅಂದಿದ್ದೆ ಎಂದ್ರು. ಫೋಟೋನೇ ರಾಜಕೀಯ ಅಲ್ಲ, ಫೋಟೋ ಹಾಕದಿದ್ದರೇ ಏನಾಯ್ತು, ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರು ಅವರ ಕೆಲಸ ಅವರು ಮಾಡುತ್ತಿದ್ದಾರೆ. ಅವರು ಬಂದಾಗ ಅವರ ಫೋಟೋ ಹಾಕ್ತಾರೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

Post a Comment

Previous Post Next Post