ಹೆಚ್ ಡಿ ಕುಮಾರಸ್ವಾಮಿ
ʼಬಡವರನ್ನು ಸುಲಿದು ಬಿಸ್ನೆಸ್ ಕ್ಲಾಸಿನ ಜನರ ಜೇಬು ತುಂಬುʼಎನ್ನುವುದು ಬಿಜೆಪಿ ತತ್ತ್ವ. ಅದನ್ನೇ ಕರ್ನಾಟಕದಲ್ಲೂ ಎಗ್ಗಿಲ್ಲದೆ ಮಾಡುತ್ತಿದೆ ಎಂದು ಬರೆದು ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ
ರಾಜ್ಯದಲ್ಲಿ ವಿದ್ಯುತ್ ಬೆಲೆ ಏರಿಕೆ (Electricity Price Hike) ಮಾಡಿ ರಾಜ್ಯ ಸರ್ಕಾರ (Karnataka Government) ಆದೇಶ ಹೊರಡಿಸಿದೆ. ಈ ಕುರಿತು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (Former CM HD Kumaraswamy) ಆಕ್ರೋಶ ಹೊರ ಹಾಕಿದ್ದಾರೆ. ಇದರ ಜೊತೆಗೆ ಬೆಲೆ ಏರಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಇಂಧನ ಹೊಂದಾಣಿಕೆಯ ಶುಲ್ಕವನ್ನು ಅಕ್ಟೋಬರ್ 1ರಿಂದ ಅನ್ವಯವಾಗುವಂತೆ ಮುಂದಿನ 6 ತಿಂಗಳ ಅವಧಿಗೆ ಪರಿಷ್ಕರಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC) ಆದೇಶ ಹೊರಡಿಸಿದೆ. ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ ಬಿಜೆಪಿ ಸರಕಾರ ವಿದ್ಯುತ್ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು. ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ
ವಿಧಾನಮಂಡಲ ಅಧಿವೇಶನ ಮುಂದೂಡಿಕೆಯಾದ ಕೂಡಲೇ ವಿದ್ಯುತ್ ದರ ಏರಿಕೆ ಆಗಿದೆ! ಏನೀ ಹುನ್ನಾರ? ನವರಾತ್ರಿಗೆ ಹಬ್ಬದ ಶುಭಾಶಯ ಹೇಳಬೇಕಿದ್ದ ಸರಕಾರ, ಕರೆಂಟ್ ಶಾಕ್ ಕೊಟ್ಟು ಜನರು ಕಂಗೆಡುವಂತೆ ಮಾಡಿದೆ. ಪ್ರತಿ ಯೂನಿಟ್ʼಗೆ 24ರಿಂದ 43 ಪೈಸೆ ಹೆಚ್ಚಿಸಿರುವುದು ಅವೈಜ್ಞಾನಿಕ, ಅನಪೇಕ್ಷಿತ & ಖಂಡನೀಯ ಎಂದು ಆಕ್ರೋಶ ಹೊರ ಹಾಕಿದ್ದಾ
ಎಸ್ಕಾಂಗಳ ಭುಜದ ಮೇಲೆ ಗುಂಡಿಟ್ಟು, ಜನರಿಗೆ ಹೊಡೆಯುವ ಕೆಲ
ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿವೆ. ವಿದ್ಯುತ್ ಉತ್ಪಾದನೆ ಉತ್ತಮವಾಗಿದೆ. ಆದರೂ ಖರೀದಿ ವೆಚ್ಚದಲ್ಲಿ 1,244 ಕೋಟಿ ರೂ. ಹೆಚ್ಚಳ ಆಗಿದೆ ಎನ್ನುವ ಲೆಕ್ಕವನ್ನು ನಂಬುವ ರೀತಿಯಲ್ಲಿ ಇಲ್ಲ. ಇಂಧನ ವಲಯದ ಕೆಲ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ಎಸ್ಕಾಂಗಳ ಭುಜದ ಮೇಲೆ ಗುಂಡಿಟ್ಟು, ಜನರಿಗೆ ಹೊಡೆಯುವ ಕೆಲಸ ಆಗುತ್ತಿದೆ
. ಸರೆ...ಗುತ್ತಿದೆಸಾಂದರ್ಭಿಕ ಚಿತ್ರ
ರಾಜ್ಯ ಬಿಜೆಪಿ ಸರಕಾರ ಜನರ ಪರ ಇಲ್ಲ ಎನ್ನುವುದು ಸತ್ಯ. ಜಾಗತಿಕ ಪೇಟೆಯಲ್ಲಿ ಕಚ್ಛಾತೈಲದ ಬೆಲೆ ನಿರಂತರ ಇಳಿದರೂ ದೇಶದಲ್ಲಿ ತೈಲ ಬೆಲೆ ಇಳಿಸದ ಕೇಂದ್ರದ ಬಿಜೆಪಿ ಸರಕಾರದ ಹಾದಿಯಲ್ಲೇ ರಾಜ್ಯ ಬಿಜೆಪಿ ಸರಕಾರವೂ ಸಾಗಿದೆ. ವಿದ್ಯುತ್ ದರದ ನಿರಂತರ ಏರಿಕೆ ಬಗ್ಗೆ ಗಂಭೀರ ಅನುಮಾನಗಳಿವೆ.
ಇದನ್ನೂ ಓದಿ: Kalaburagi News: ಕಲಬುರಗಿಯಲ್ಲಿ ಹೈ ಅಲರ್ಟ್; ಪೊಲೀಸರ ಮೇಲೆ ದಾಳಿ ನಡೆಸಿದ ಗಾಂಜಾ ದಂಧೆಕೋರರರು, CPI ಗಂಭೀರ
ಬಿಜೆಪಿ ಸರಕಾರ ಅದಕ್ಷತೆಯ ಆಡಂಬೋಲ
ವಿದ್ಯುತ್ ಸೋರಿಕೆ, ಕಳವು ತಡೆಲಾಗದ, ನವೀನ ತಂತ್ರಜ್ಞಾನ ಅಳವಡಿಸಿಕೊಳ್ಳದ ಬಿಜೆಪಿ ಸರಕಾರ ಅದಕ್ಷತೆಯ ಆಡಂಬೋಲ. ʼಬಡವರನ್ನು ಸುಲಿದು ಬಿಸ್ನೆಸ್ ಕ್ಲಾಸಿನ ಜನರ ಜೇಬು ತುಂಬುʼಎನ್ನುವುದು ಬಿಜೆಪಿ ತತ್ತ್ವ. ಅದನ್ನೇ ಕರ್ನಾಟಕದಲ್ಲೂ ಎಗ್ಗಿಲ್ಲದೆ ಮಾಡುತ್ತಿದೆ ಎಂದು ಬರೆದು ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.
ವಿದ್ಯುತ್ ದರ ಏರಿಕೆ, ಗ್ರಾಹಕರಿಗೆ ಮತ್ತಷ್ಟು ಹೊರೆ
ಈ ಆದೇಶದಂತೆ ವಿದ್ಯುತ್ ದರ ಏರಿಕೆಯಾಗಲಿದ್ದು, ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಲಿದೆ. ಪ್ರತಿ ಯೂನಿಟ್‌ಗೆ ಬೆಸ್ಕಾಂ ವ್ಯಾಪ್ತಿಯಲ್ಲಿ 43 ಪೈಸೆ, ಮೆಸ್ಕಾಂ 24 ಪೈಸೆ, ಸೆಸ್ಕ್ –34 ಪೈಸೆ, ಹೆಸ್ಕಾಂ 35 ಪೈಸೆ ಮತ್ತು ಜೆಸ್ಕಾಂ ವ್ಯಾಪ್ತಿಯಲ್ಲಿ 35 ಪೈಸೆಯಷ್ಟು ಹೆಚ್ಚಳ ಮಾಡಲಾಗಿದೆ.
WWW.publicvahini.com
ಇದನ್ನೂ ಓದಿ: Bengaluru: ರಾಜ್ಯದಲ್ಲಿ ಜಾರಿಗೆ ಬರಲಿದೆ ಗುಜರಿ ನೀತಿ; ಸ್ಕ್ರ್ಯಾಪಿಂಗ್ ಪಾಲಿಸಿ ಬಗ್ಗೆ
ಗೊತ್ತಿರಬೇಕಾದ ವಿಷಯಸಾಂದರ್ಭಿಕ ಚಿತ್ರ
ಏರಿಕೆಯಾಗಲಿದೆ ನಂದಿನಿ ಹಾಲಿನ
ಇಂಧನ ದರ ಏರಿಕೆ, ಖಾದ್ಯ ತೈಲ ದರ ಏರಿಕೆಯಿಂದಾಗಿ ಒತ್ತಡದಲ್ಲಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಕಾದಿದ್ದು, ಶೀಘ್ರದಲ್ಲೇ ನಂದಿನಿ ಹಾಲಿನ ದರ ಕೂಡ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಸ್ವತಃ ಕರ್ನಾಟಕ ಹಾಲು ಒಕ್ಕೂಟ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ (Balachandra Jarkiholi) ಅವರು ಹೇಳಿದ್ದು, ನಂದಿನಿ ಹಾಲಿನ ದರ ಹೆಚ್ಚಳಕ್ಕೆ 14 ಜಿಲ್ಲೆಗಳ ಹಾಲಿನ ಒಕ್ಕೂಟದವರು ಒತ್ತಡ ಮಾಡ್ತಿದ್ದಾರೆ. ಹಾಲಿನ ದರ ಹೆಚ್ಚಳ ಮಾಡಬೇಕು ಅದನ್ನೇ ರೈತರಿಗೆ ನೀಡುತ್ತೇವೆ ಎಂದು ಹೇಳಿದ್ದಾರೆ. ದರ
Post a Comment