ಹುಬ್ಬಳ್ಳಿ -ಧಾರವಾಡ: ದಸರಾ ಉದ್ಘಾಟನೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ರಾಷ್ಟ್ರಪತಿ ದ್ರೌಪದಿ ಮರ್ಮು ಅವರು ಮೈಸೂರಿನಲ್ಲಿ ನಾಡಹಬ್ಬ ದಸರಾ ಉದ್ಘಾಟಿಸಿ ಧಾರವಾಡಕ್ಕೆ ತೆರಳಿದ ಅವರು ಧಾರವಾಡದ ಐಐಐಟಿಯ ಹೊಸ ಕ್ಯಾಂಪಸ್ ಉದ್ಘಾಟಿಸಿದ್ದಾರೆ.ದೇಶದ ಭವಿಷ್ಯಕ್ಕೆ ಐಐಐಟಿ ಧಾರವಾಡ ವಿಶೇಷ ಕೊಡುಗೆ ನೀಡಲಿದೆ. ಇದನ್ನು ಹೆಮ್ಮೆಯಿಂದ ಹೇಳುತ್ತೇನೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.ಈಗ ಐಐಐಟಿ ಧಾರವಾಡಕ್ಕೆ ಶಾಶ್ವತ ಕ್ಯಾಂಪಸ್ ಆಗಿದೆ. ಜ್ಞಾನ ವಿಕಾಸ ಅಂತಾ ಹೆಸರಿಡಲಾಗಿದೆ, ಜ್ಞಾನದಲ್ಲಿ ವಿಕಾಸ ಅಡಗಿದೆ. ಭಾರತವನ್ನು ವಿಶ್ವಗುರು ಮಾಡಬೇಕು, ಜ್ಞಾನದ ವಿಕಾಸ ಆಗಬೇಕಿದೆ ಎಂದ್ರು.ಇನ್ನು ಐಐಐಟಿ ಧಾರವಾಡ ಉದ್ಘಾಟನೆ ಸಮಾರಂಭದಲ್ಲಿ ಸುಧಾಮೂರ್ತಿ ಸಹ ಭಾಗಿಯಾಗಿದ್ರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸುಧಾ ಮೂರ್ತಿ ಸೀರೆ ಗಿಫ್ಟ್ ನೀಡಿdಇನ್ಪೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ ಅವರು ರಾಷ್ಟ್ರಪತಿ ದ್ರೌಪದಿ ಅವರಿಗೆ ಇಳಕಲ್ ಸೀರೆಯನ್ನು ಉಡುಗೊರೆಯಾಗಿ ನೀಡಿದರು.ರಾಜ್ಯದಲ್ಲಿ ಮೊದಲ ಇಂಜಿನಿಯರಿಂಗ್ ಪದವಿ ಪಡೆದವರು ಸುಧಾಮೂರ್ತಿ. 50 ವರ್ಷಗಳ ಹಿಂದೆಯೇ ಅಂಥ ಸಾಧನೆ ಮಾಡಿದವರು. ಅವರ ಬಗ್ಗೆ ಹೆಮ್ಮೆಪಡಬೇಕು. ಭಾಷಣದ ಮಧ್ಯೆ ಸುಧಾಮೂರ್ತಿ ಸಾಧನೆ ಬಗ್ಗೆ ಸಿಎಂ ಪ್ರಸ್ತಾಪ ಮಾಡಿದ್ರು.ಅಲ್ಲಿ ಅವರು ಹುಬ್ಬಳ್ಳಿ ಪಾಲಿಕೆಯಲ್ಲಿ ಹುಬ್ಬಳ್ಳಿ ಧಾರವಾಡ ನಗರ ಪಾಲಿಕೆ ಆಯೋಜಿಸಿದ್ದ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Post a Comment