Karnataka Lokayukta: ಸಾರ್ವಜನಿಕರೇ, ನಿಮ್ಮ ಸಮಸ್ಯೆಗಳನ್ನು ಲೋಕಾಯುಕ್ತರಿಗೆ ಹೇಳ್ಕೊಳ್ಳಿ ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕ ಅಹವಾಲು ಸ್ವೀಕಾರ


  ಸಾಂದರ್ಭಿಕ ಚಿತ್ರ

 ವಿಜಯಪುರ ಜಿಲ್ಲೆಯ (Vijayapura) ತಾಲೂಕು ಕೇಂದ್ರಗಳಲ್ಲಿ ಕರ್ನಾಟಕ ಲೋಕಾಯುಕ್ತ (Karnataka Lokayukta) ಕಾಯ್ದೆ ಅಡಿಯಲ್ಲಿ ಸಾರ್ವಜನಿಕರಿಂದ ಭರ್ತಿ ಮಾಡಿದ ಅರ್ಜಿಗಳನ್ನು ಸ್ವೀಕರಿಸುವ ಕಾರ್ಯಕ್ರಮಗಳು ಮುಂದುವರೆದಿವೆ. ಸೆಪ್ಟೆಂಬರ್ 27ರ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿಜಯಪುರ ಜಿಲ್ಲೆಯ ಚಡಚಣ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಲೋಕಾಯುಕ್ತದ ಪೊಲೀಸ್ ನಿರೀಕ್ಷಕರಾದ ಆನಂದ ಟಕ್ಕನ್ನವರ ಅವರು ಸಾರ್ವಜನಿಕರಿಂದ ಅಂದು ಅಹವಾಲು ಸ್ವೀಕರಿಸಲಿದ್ದಾರೆ.  ಹಾಗಾದರೆ ಲೋಕಾಯುಕ್ತಕ್ಕೆ (How to complaint to Lokayukta) ಹೇಗೆ ಅರ್ಜಿ ಸಲ್ಲಿಸುವುದು? ನಿಮ್ಮ ಸಮಸ್ಯೆಗಳನ್ನು ಹೇಗೆ ಪರಿಹರಿಸಿಕೊಳ್ಳಬಹುದು? ಎಲ್ಲ ವಿವರ ಇಲ್ಲಿದೆ ನೋಡಿ

ಅದೇ ರೀತಿ ಸೆಪ್ಟೆಂಬರ್ 28ರ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿಜಯಪುರ ಜಿಲ್ಲೆಯ ಬಬಲೇಶ್ವರದ ತಾಲೂಕು ಪಂಚಾಯತದ ಕಾರ್ಯನಿರ್ವಾಹಕ ಅಧಿಕಾರಿಗಳ ಕಾರ್ಯಾಲಯದಲ್ಲಿ ಕರ್ನಾಟಕ ಲೋಕಾಯುಕ್ತದ ಪೊಲೀಸ್ ಉಪಾಧೀಕ್ಷಕರಾದ ಅರುಣ ನಾಯಕ ಅವರು ಸಾರ್ವಜನಿಕರಿಂದ ಅಹವಾಲು ಸಲ್ಲಿಸಬಹುದಾಗಿದೆ

ಬಸವನಬಾಗೇವಾಡಿಯಲ್ಲಿ ಎಂ

ಅದೇ ರೀತಿ ಸೆಪ್ಟೆಂಬರ್ 29ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಬಸವನಬಾಗೇವಾಡಿಯ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಲೋಕಾಯುಕ್ತದ ಪೊಲೀಸ್ ನಿರೀಕ್ಷಕರಾದ ಆನಂದ ಡೋಣಿ ಅವರು ಸಾರ್ವಜನಿಕರು ಅಹವಾಲು ಸಲ್ಲಿಸಬಹುದಾಗಿದೆ

 ಏನೆಲ್ಲ ಸಮಸ್ಯೆಗಳನ್ನು ಹೇಳಿಕೊಳ್ಳಬಹುದು

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳನ್ನು ಮಾಡಿಕೊಡಲು ಲಂಚ ಕೇಳುತ್ತಿದ್ದರೆ ನೀವು ನಿಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಬಹುದಾಗಿದೆ. ಜೊತೆಗೆ ಅಧಿಕಾರಿಗಳು ವಿನಾಕಾರಣ ವಿಳಂಬ ಮಾಡುತ್ತಿದ್ದರೆ ಅಥವಾ ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ

ಇದನ್ನೂ ಓದಿ: Positive Story: ವಿಧವೆಯರೇ ನಡೆಸೋ ಹೊಟೇಲ್! ಇಲ್ಲಿದೆ 

ಹೆಚ್ಚಿನ ಮಾಹಿತಿಗೆ ಯಾರನ್ನು ಸಂಪರ್ಕಿಸಬೇ

ಹೆಚ್ಚಿನ ವಿವರಗಳಿಗಾಗಿ ಈ ಕಚೇರಿಯ ದೂರವಾಣಿ ಸಂಖ್ಯೆಗಳಾದ (08352) 255333/257786 ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ್ತದ ಪೊಲೀಸ್ ಅಧೀಕ್ಷಕರ ಕಚೇರಿಯ ಪ್ರಕಟಣೆ ತಿಳಿಸಿದೆ

 WWW.publicvahini.com .ಕು?ನೋಡಿ.?.ದು?

Post a Comment

Previous Post Next Post