Mysuru Dasara 2022: ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾಕ್ಕೆ ಅವಕಾಶವಿಲ್ಲ; ಅರಮನೆ ನಗರಿ ಸುತ್ತ ಟೈಟ್ ಸೆಕ್ಯೂರಿಟಿ


  ಮಹಿಸಾಸುರ ಪ್ರತಿಮೆ

ಮಹಿಷ ಪ್ರತಿಮೆಯ ಸುತ್ತಲಿನ ಜಾಗದಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದು, ಪೊಲೀಸರನ್ನು ನಿಯೋಜಿಸಲಾಗಿದೆ. ಮಹಿಷ ಪ್ರತಿಮೆಗೆ ಮಾಲಾರ್ಪಣೆ ಸೇರಿದಂತೆ ಪುಷ್ಪಾರ್ಚನೆಗೆ ತೆರಳಬಹುದೆಂಬ ಕಾರಣಕ್ಕೆ ಪ್ರತಿಮೆಯನ್ನು ಬಟ್ಟೆಯಿಂದ ಮುಚ್ಚಲಾಗಿದೆ

ಮೈಸೂರು (ಸೆ.24): ಚಾಮುಂಡಿ ಬೆಟ್ಟದ ಮಹಿಷ ಪ್ರತಿಮೆ ಬಳಿ ಮಹಿಷ ದಸರಾ (Mahisha Dasara) ಆಚರಿಸಲಾಗುವುದು ಎಂದು ಮಾಜಿ ಮೇಯರ್‌ ಪುರುಷೋತ್ತಮ್‌ ಹೇಳಿದ್ದರು. ಅದರಂತೆ ಮಹಿಷ ದಸರಾ ಆಚರಣೆಗೂ ಸಮಿತಿ ವತಿಯಿಂದ ಸಿದ್ಧತೆ ನಡೆಸಲಾಗಿತ್ತು ಆದ್ರೆ, ಪೊಲೀಸರು ಅದಕ್ಕೆ ಅನುಮತಿಯನ್ನು ನಿರಾಕರಿಸಿದ್ದಾರೆ. ಚಾಮುಂಡಿಬೆಟ್ಟದಲ್ಲಿ (Chamundi Hills) ಮಹಿಷ ದಸರಾ ಆಚರಣೆ ಮಾಡದಂತೆ ಬಿಗಿ ಬಂದೋಬಸ್ತ್  ಏರ್ಪಡಿಸಲಾಗಿದೆ. ಮಹಿಷಾಸುರ ಪ್ರತಿಮೆಗೆ (Mahishasura Statue) ಬಟ್ಟೆ ಹಾಕಿ ಮುಚ್ಚಲಾಗಿದೆ.

ಯಾರು ತಡೆಯಲು ಬಂದರೂ ನಿರ್ಧಾರ ಬದಲಾಗ

ಮಹಿಷಾ ದಸರಾ ಆಚರಣೆಯನ್ನು ಯಾರು ತಡೆಯಲು ಬಂದರೂ ನಮ್ಮ ನಿರ್ಧಾರ ಬದಲಾಗುವುದಿಲ್ಲ. ಈ ಆಚರಣೆ ಯಾರಿಗೂ ಅಪಮಾನ ಮಾಡುವ ಉದ್ದೇಶ ಹೊಂದಿಲ್ಲ. ಆದರೂ ಕಳೆದ ಮೂರು ವರ್ಷಗಳಿಂದ ಪೊಲೀಸ್‌ ಇಲಾಖೆ ಅಡ್ಡಿಪಡಿಸುತ್ತಿದೆ. ಈ ಬಾರಿ ಮಾಡೇ ಮಾಡುತ್ತೇವೆ ಎಂದು ಸಮಿತಿಯ ಕೆಲ ನಾಯಕರು ಹೇಳಿದ್ರು ಹೀಗಾಗಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ರು

ಬ್ಯಾರಿಕೇಡ್ ಅಳವಡಿಸಿ ಪೊಲೀಸರ ನಿಯೋ

ಮಹಿಷ ಪ್ರತಿಮೆಯ ಸುತ್ತಲಿನ ಜಾಗದಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದು, ಪೊಲೀಸರನ್ನು ನಿಯೋಜಿಸಲಾಗಿದೆ. ಮಹಿಷ ಪ್ರತಿಮೆಗೆ ಮಾಲಾರ್ಪಣೆ ಸೇರಿದಂತೆ ಪುಷ್ಪಾರ್ಚನೆಗೆ ತೆರಳಬಹುದೆಂಬ ಕಾರಣಕ್ಕೆ ಪ್ರತಿಮೆಯನ್ನು ಬಟ್ಟೆಯಿಂದ ಮುಚ್ಚಲಾಗಿದೆ


. ಜನೆ.ಲ್ಲ .ಚ್ಚಲಾಗಿದೆ ಮಹಿಸಾಸುರ ಪ್ರತಿಮೆ

 ಅನುಮತಿ ಕೋರಿ ತಮ್ಮ ಕಚೇರಿಗೆ ಯಾರೂ ಮನವಿ ಸಲ್ಲಿಸಿಲ್ಲ

ಬೆಟ್ಟಕ್ಕೆ ತೆರಳುವ ವಾಹನಗಳನ್ನು ಪ್ರವೇಶಕ್ಕೆ ಮುನ್ನವೇ ಸಂಪೂರ್ಣ ತಪಾಸಣೆ ನಡೆಸಿಯೇ ಬಿಡಲಾಗುತ್ತಿದೆ. ಹೆಚ್ಚಿನ ಪೊಲೀಸ್ ಭದ್ರತೆಯನ್ನು ಅಲ್ಲಿ ಮಾಡಲಾಗಿದೆ. ಮಹಿಷ ದಸರಾ ಆಚರಿಸಲು ಅನುಮತಿ ಕೋರಿ ತಮ್ಮ ಕಚೇರಿಗೆ ಯಾರೂ ಮನವಿ ಸಲ್ಲಿಸಿಲ್ಲ ಎಂದು ಸಿಒಪಿ ಡಾ ಚಂದ್ರಗುಪ್ತ ಹೇಳಿದ್ದಾರೆ.

ದಸರಾ ಆಚರಣೆಗೆ ಅಗತ್ಯವಾದ ಭದ್ರತೆ

ದಸರಾ ಆಚರಣೆಗೆ ಅಗತ್ಯವಾದ ಭದ್ರತೆ ಒದಗಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ತಿಳಿಸಿದರು. ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು, ಮೈಸೂರು ದಸರಾ ಮಹೋತ್ಸವವನ್ನು ಸೆ.26 ರಿಂದ ಅ.5 ರವರೆಗೆ ಆಯೋಜಿಸಲಾಗಿದ್ದು, ನಗರದ ವಿವಿಧೆಡೆ ಹಲವು ಕಾರ್ಯಕ್ರಮಗಳು ನಡೆಯಲಿವೆ. ಈ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ನೋಡಿಕೊಳ್ಳಲು, ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ನಿಗಾ ವಹಿಸಲಾಗಿದೆ ಎಂದು ಡಾ.ಚಂದ್ರಗುಪ್ತ ತಿಳಿಸಿದ್ದಾರೆ.

ಮೈಸೂರು ನಗರದ ಅಧಿಕಾರಿ ಮತ್ತು ಸಿಬ್ಬಂದಿ ಸೇರಿದಂತೆ ಹೊರ ಜಿಲ್ಲೆಗಳಿಂದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿದೆ. ನಗರದ 1, 255, ಹೊರ ಜಿಲ್ಲೆಗಳಿಂದ 3, 580 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ, 650 ಗೃಹ ರಕ್ಷಕ ಸಿಬ್ಬಂದಿ ಸೇರಿದಂತೆ ಒಟ್ಟು 5,485 ಪೊಲೀಸರನ್ನು ಬಂದೋಬಸ್ತ್‌ಗೆ ಬಳಸಲಾಗುತ್ತಿದೆ ಎಂದು ವಿವರಿಸಿದರು.

ಇದನ್ನೂ ಓದಿ: Mysuru Top 5 News: ಯುವ ದಸರೆಯಲ್ಲಿ ಒಂದು ದಿನ ಅಪ್ಪುಗಾಗಿ ಮೀಸಲು, ತುತ್ತೂರಿ ಮಾರಾಟ ನಿಷೇಧ; ಮೈಸೂರಿನ ಟಾಪ್ ನ್ಯೂಸ್​​ಗಳು

ಡ್ರೋಣ್ ಕ್ಯಾಮೆರಾಗಳಿಂದ ಕಣ್ಗಾವಲು

ಅರಮನೆ ಮತ್ತು ಬನ್ನಿಮಂಟಪದ ಎಲ್ಲಾ ಪ್ರವೇಶ ದ್ವಾರಗಳಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ಬಾಡಿ ವೋರ್ನ್‌ ಕ್ಯಾಮೆರಾ ವಿತರಿಸಲಾಗುತ್ತದೆ. ಅಲ್ಲಿನ ಸಂಪೂರ್ಣ ದೃಶ್ಯಾವಳಿ ಈ ಕ್ಯಾಮೆರಾಗಳಲ್ಲಿ ಮತ್ತು ಮೊಬೈಲ್ ಕಮಾಂಡ್ ಸೆಂಟರ್‌ನಲ್ಲಿ ದಾಖಲಾಗುವ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಮುಖ ದಸರಾ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಡ್ರೋಣ್ ಕ್ಯಾಮೆರಾಗಳಿಂದ ಕಣ್ಗಾವಲು ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಮೆಗಾಫೋನ್ ಸಮೇತ ಕರ್ತವ್ಯ ನಿಯೋಜನೆ

ದಸರೆಯ ಪ್ರಮುಖ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಪೊಲೀಸರು ಎದ್ದು ಕಾಣುವ ರೀತಿಯಲ್ಲಿ ಎತ್ತರದ ಅಂಕಣಗಳನ್ನು ನಿರ್ಮಿಸಲಾಗುವುದು. ಅದರ ಮೇಲೆ ಪೊಲೀಸರನ್ನು ಮೆಗಾಫೋನ್ ಸಮೇತ ಕರ್ತವ್ಯಕ್ಕೆ ನಿಯೋಜಿಸಲಾಗುವುದು. ಅಪರಾಧಗಳನ್ನು ತಡೆಗಟ್ಟಲು ಅಕ್ಕಪಕ್ಕದ ಜಿಲ್ಲೆ ಮತ್ತು ರಾಜ್ಯಗಳಿಂದ ನುರಿತ ಅಪರಾಧ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ ಎಂದು ತಿಳಿಸಿದರು.

ರೈಲು ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ದಿನದ 24 ಗಂಟೆಯೂ ನುರಿತ ಅಪರಾಧ ವಿಭಾಗದ ಸಿಬ್ಬಂದಿ ಗಸ್ತಿನಲ್ಲಿದ್ದು ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆ ಮಾಡಲಾಗುತ್ತದೆ ಎಂದು ಹೇಳಿದರು.

Post a Comment

Previous Post Next Post