Rohini Sindhuri: ರೋಹಿಣಿ ವಿರುದ್ಧ ಸಿಡಿದೆದ್ದ ಸಾರಾ ಮಹೇಶ್! 1 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ


  IAS ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ MLA ಸಾರಾ ಮಹೇಶ್ಗಿ

 ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಸಾರಾ ಮಹೇಶ್, ರೋಹಿಣಿ ಸಿಂಧೂರಿ ವಿರುದ್ಧದ ಮಾನನಷ್ಟ ಮೊಕದ್ದಮೆ ಕುರಿತಂತೆ ಸ್ಪಷ್ಟನೆ ನೀಡಿದರು. ರೋಹಿಣಿ ಸಿಂಧೂರಿ ಈ ಹಿಂದೆ ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ನನ್ನ ವಿರುದ್ಧ ಭೂ ಕಬಳಿಕೆ ಆರೋಪ ಮಾಡಿದ್ದರು. ಆರೋಪ ಸುಳ್ಳಾಗಿರೋದ್ರಿಂದ ಮಾನನಷ್ಟ ಮೊಕದ್ದಮೆ ಹಾಕಲಾಗಿದೆ ಎಂದ್ರು

 ಮೈಸೂರು: ಐಎಎಸ್ ಅಧಿಕಾರಿ (IAS Officer) ರೋಹಿಣಿ ಸಿಂಧೂರಿ (Rohini Sindhuri) ಹಾಗೂ ಮೈಸೂರಿನ (Mysuru) ಕೆಆರ್‌ ನಗರ (KR Nagar) ಕ್ಷೇತ್ರದ ಶಾಸಕ ಸಾರಾ ಮಹೇಶ್ (MLA Sara Mahesh) ನಡುವಿನ ಸಂಘರ್ಷ ಮತ್ತೊಂದು ತಿರುವು ಪಡೆದುಕೊಂಡಿದೆ. ರೋಹಿಣಿ ಸಿಂಧೂರಿ ವಿರುದ್ಧ ಸಾರಾ ಮಹೇಶ್ ಮಾನನಷ್ಟ ಮೊಕದ್ದಮೆ (defamation case) ದಾಖಲಿಸಿದ್ದಾರೆ. ರೋಹಿಣಿ ಸಿಂಧೂರಿ ಈ ಹಿಂದೆ ಮೈಸೂರು ಜಿಲ್ಲಾಧಿಕಾರಿ (Mysore DC) ಆಗಿದ್ದಾಗ ಸಾರಾ ಮಹೇಶ್ ವಿರುದ್ಧ ಭೂ ಕಬಳಿಕೆಯ (land acquisition) ಆರೋಪ ಮಾಡಿದ್ದರು. ಇದೀಗ ಪ್ರಾದೇಶಿಕ ಆಯುಕ್ತರು (Regional Commissioner) ಸಾರಾ ಮಹೇಶ್ ವಿರುದ್ಧದ ಭೂ ಕಬಳಿಕೆ ಆರೋಪ ಸುಳ್ಳು ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ರೋಹಿಣಿ ಸಿಂಧೂರಿ ವಿರುದ್ಧ ಸಾರಾ ಮಹೇಶ್ ಮೈಸೂರು ನ್ಯಾಯಾಲಯದಲ್ಲಿ (Mysuru Court) 1 ಕೋಟಿ ರೂಪಾಯಿಗಳ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾ

ಸುದ್ದಿಗೋಷ್ಠಿಯಲ್ಲಿ ಶಾಸಕರಿಂದ ಸ್ಪಷ್ಟ

 ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಸಾರಾ ಮಹೇಶ್, ರೋಹಿಣಿ ಸಿಂಧೂರಿ ವಿರುದ್ಧದ ಮಾನನಷ್ಟ ಮೊಕದ್ದಮೆ ಕುರಿತಂತೆ ಸ್ಪಷ್ಟನೆ ನೀಡಿದರು. ರೋಹಿಣಿ ಸಿಂಧೂರಿ ಈ ಹಿಂದೆ ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ನನ್ನ ವಿರುದ್ಧ ಭೂ ಕಬಳಿಕೆ ಆರೋಪ ಮಾಡಿದ್ದರು. ಆದರೆ ಪ್ರಾದೇಶಿಕ ಆಯುಕ್ತರು ಆರೋಪ ಸುಳ್ಳು ಎಂದು ಹೇಳಿದ್ದಾರೆ. ಹೀಗಾಗಿ, ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಹೋರಾಟ ಮಾಡುವುದಾಗಿ ಹೇಳಿದ್ದೆ. ಆ ನಿಟ್ಟಿನಲ್ಲಿ ಮೈಸೂರು ನ್ಯಾಯಾಲಯದಲ್ಲಿ ರೋಹಿಣಿ ಸಿಂಧೂರಿ ವಿರುದ್ಧ ಸಿವಿಲ್ ಮತ್ತು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ. ಮೈಸೂರು ನ್ಯಾಯಾಲಯದಲ್ಲಿ ದಾವೆ ಹೂಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ

“ಕೋವಿಡ್ ಸಂದರ್ಭದಲ್ಲೂ ಬೇಜವಾಬ್ದಾರಿ ವರ್ತ

ಮೈಸೂರಿನ ಹಿಂದಿನ ಜಿಲ್ಲಾಧಿಕಾರಿ ಐಶಾರಾಮಿ ಜೀವನ ನಡೆಸಿದ್ದಾರೆ. ಸರ್ಕಾರಿ ಹಣ ದುರುಪಯೋಗ, ಕೋವಿಡ್ ಸಂದರ್ಭದ ಕಾರ್ಯವೈಖರಿ ಪ್ರಾಮಾಣಿಕವಾಗಿ ಕೆಲಸ ಮಾಡದೆ ಬೇಜವಾಬ್ದಾರಿ ವರ್ತನೆ ಮಾಡಿದ್ದು, ಇದರಿಂದ ಸಾವಿರಾರು ಜನರಿಗೆ ಸಮಸ್ಯೆಯಾಗಿದೆ. ಇದನ್ನು ಮುಚ್ಚಿ ಹಾಕಲು ಟೆಸ್ಟಿಂಗ್ ಸಂಖ್ಯೆ ಸಾವಿನ ಸಂಖ್ಯೆ ಕಡಿಮೆ ತೋರಿಸಿದ್ದರು ಅಂತ ಆರೋಪಿಸಿದ್ರು

ಇದನ್ನೂ ಓದಿ: Nikhil Kumaraswamy: ಜೆಡಿಎಸ್‌ಗೆ ಇದೇ ಕೊನೆ ಎಲೆಕ್ಷನ್ನಾ? ನಿಖಿಲ್ ಕುಮಾರಸ್ವಾಮಿ ಮಾತಿನ ಅರ್ಥ

ಅಕ್ರಮ ಪ್ರಶ್ನೆ ಮಾಡಿದ್ದಕ್ಕೆ ನನ್ನ ಮೇಲೆ ಆರೋ

ಇನ್ನು ಈ ಬಗ್ಗೆ ಚೀಪ್ ಸೆಕ್ರೆಟರಿ ವರದಿ ನಂತರ ವರ್ಗಾವಣೆ ಮಾಡಿದ್ದು, ವರ್ಗಾವಣೆ ಬೇಡ ಅಮಾನತು ಮಾಡುವಂತೆ ಒತ್ತಾಯಿಸಿದ್ದೆ. ಇದೇ ಕಾರಣಕ್ಕೆ ನನ್ನ ವಿರುದ್ದ ಭೂ ಹಗರಣದ ಆರೋಪ ಮಾಡಲಾಗಿದೆ. ಭೂ ಅಕ್ರಮದಿಂದ ನನ್ನ ವರ್ಗಾವಣೆ ಅಂತಾ ಬಿಂಬಿಸಲು ಹೊರಟಿದ್ದರು. ಈಗಾಗಲೇ ಆರ್ ಸಿ ಈ ಬಗ್ಗೆ ವರದಿ ನೀಡದ್ದಾರೆ. ಸರ್ಕಾರ ಉನ್ನತಮಟ್ಟದ ತನಿಖೆ ನಡೆಸುತ್ತಿದೆ. ಅದರ ವರದಿ ಕೂಡ ಬರಲಿದೆ ಎಂದು ತಿಳಿಸಿದ

ವೈರಲ್ ಆಗಿದ್ದ ರೋಹಿಣಿ ಸಿಂಧೂ

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಸಾರಾ ಮಹೇಶ್ ಪರ ವಕೀಲ ಅರುಣ್ ಕುಮಾರ್, ಸಾರಾ ಮಹೇಶ್ ಭೂ ಅಕ್ರಮ ಮಾಡಿದ್ದಾರೆ ಎಂಬ ರೋಹಿಣಿ ಸಿಂಧೂರಿ ಆಡಿಯೋ ವೈರಲ್ ಆಗಿತ್ತು. ಸಾರಾ ಮಹೇಶ್ ಭೂ ಕಬಳಿಕೆ ಮಾಡಿದ್ದಾರೆ ಎಂದು ರೋಹಿಣಿ ಸಿಂಧೂರಿ ಬಿಂಬಿಸಿದ್ದರು. ಈ ಕಾರಣ ಅವರ ವಿರುದ್ದ ಮಾನ ನಷ್ಟ ಮೊಕದ್ದಮೆ ಹೂಡಲಾಗಿದೆ ಎಂ

ಇದನ್ನೂ ಓದಿ: Siddaramaiah: ಸವಾಲು ಹಾಕುವ ಧಮ್ ನಿಮಗಿಲ್ಲ; ಅದು ಹೇಳಿದ್ದು, ನನಗೋ ಯಡಿಯೂರಪ್ಪನವರಿಗೋ? ಸಿಎಂಗೆ ಸಿದ್ದರಾಮಯ್ಯ ಪ್ರಶ್ನೆ

ಈ ಬಗ್ಗೆ ಸ್ಪಷ್ಟನೆ ನೀಡಿದ್ದ ರೋಹಿಣಿ ಸಿಂ

ಮಾನನಷ್ಟ ಮೊಕದ್ದಮೆ ಹೂಡುವ ಮುನ್ನ ರೋಹಿಣಿ ಸಿಂಧೂರಿ ಅವರಿಗೆ ಲೀಗಲ್ ನೋಟೀಸ್ ಕೊಟ್ಟಿದ್ದೆವು. ನೋಟೀಸ್ಗೆ ರೋಹಿಣಿ ಸಿಂಧೂರಿ ಅವರು ಉತ್ತರ ಕೊಟ್ಟಿದ್ದಾರೆ. ಸಾರಾ ಮಹೇಶ್ ವಿರುದ್ದ ಮಾತಾಡಿರೋ ಧ್ವನಿ ತಮ್ಮದೆ ಎಂದು ಒಪ್ಪಿಕೊಂಡಿದ್ದಾರೆ. ಇದು ಖಾಸಗಿ ಸಂಭಾಷಣೆ ಎಂದು ಹೇಳಿದ್ದಾರೆ. ಇದೇ ಉತ್ತರದ ಆಧಾರದ ಮೇಲೆ ಒಂದು ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇವೆ. ಎರಡನೇ ಜಿಲ್ಲಾ ಸೆಷನ್ಸ್ ನ್ಯಾಯಾಲಯದಿಂದ ರೋಹಿಣಿ ಸಿಂಧೂರಿಗೆ ನೋಟೀಸ್ ಜಾರಿಯಾಗಿದೆ. ಅಕ್ಟೋಬರ್ 20 ರೊಳಗೆ ರೋಹಿಣಿ ಸಿಂಧೂರಿ ಉತ್ತರ ಕೊಡಬೇಕು ಎಂದು ನ್ಯಾಯಾಲಯ ಹೇಳಿದ್ದಾಗಿ ವಕೀಲ ಅರುಣ್ ಕುಮಾರ್ ಹೇಳಿದ್ದಾರೆ. ಧೂರಿದರು.ರಿರು.ಪ”ವೇನು?.ನೆ”.ನೆರೆ.. ವಕೀಲ ಅರುಣ್ ಕುಮಾರ್ ಹೇಳಿದ್ದಾರೆ.

Post a Comment

Previous Post Next Post