ಸಿಎಂ ಬಸವರಾಜ ಬೊಮ್ಮಾಯಿ
ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಂದಿರುವ ಘಟನೆಯನ್ನ ನಾನು ತೀವ್ರ ರೀತಿಯಲ್ಲಿ ಖಂಡಿಸ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಇನ್ನು ಇದೇ ವೇಳೆ ಮೃತ ಬಾಲಕಿ ಕುಟುಂಬಕ್ಕೆ 10 ಲಕ್ಷ ಪರಿಹಾರ ಸಹ ಘೋಷಣೆ ಮಾಡಿದ್ದಾರೆ
ಮಂಡ್ಯ : ಮಳವಳ್ಳಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿರುವ ಘಟನೆ ಅಮಾನವೀಯವಾಗಿದೆ. ಮಾನವೀಯತೆ ಇರೋ ಯಾರೂ ಈ ರೀತಿ ನಡೆದುಕೊಳ್ಳಲ್ಲ. ಈ ಘಟನೆಯನ್ನ ನಾನು ತೀವ್ರ ರೀತಿಯಲ್ಲಿ ಖಂಡಿಸ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಇನ್ನು ಇದೇ ವೇಳೆ ಮೃತ ಬಾಲಕಿ ಕುಟುಂಬಕ್ಕೆ 10 ಲಕ್ಷ ಪರಿಹಾರ ಸಹ ಘೋಷಣೆ ಮಾಡಿದ್ದಾರೆ.
ಆರೋಪಿಗೆ ತಕ್ಕ ಶಿಕ್ಷೆಯಾ
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. ಟ್ಯೂಷನ್ ಮಾಸ್ಟರ್ ನನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಬಾಲಕಿ ಕುಟುಂಬಸ್ಥರು ಆರೋಪಿಗೆ ತಕ್ಕ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ.
ಟ್ಯೂಷನ್ ಶಿಕ್ಷಕನಿಂದ ಕೃ
ಟ್ಯೂಷನ್ ಶಿಕ್ಷಕನೇ (Teacher) ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿದ್ದಾನೆ. ಕಾಂತರಾಜ್ (Kantaraj) ಎಂಬ ಶಿಕ್ಷಕ ವಿದ್ಯಾರ್ಥಿ ದಿವ್ಯಾಳನ್ನ ಟ್ಯೂಷನ್ಗೆ ಕರೆಸಿ ಕೊಲೆ ಮಾಡಿ ಸಂಪಿನಲ್ಲಿ ಎಸೆದಿದ್ದಾನೆ. ಆರೋಪಿ ಕಾಂತರಾಜ್ ಬಂಧಿಸಿ ಪೊಲೀಸರು (Police) ತೀವ್ರ ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವ ಬಗ್ಗೆ ಆರೋಪಿ ಬಾಯ್ಬಿಟ್ಟಿದ್ದಾನೆ. ಪ್ರಕರಣ ಸಂಬಂಧ ಮಳವಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮೃತ ಬಾಲಕಿ ಮನೆಗೆ ಇಂದು ಜೆಡಿಎಸ್ ಯುವ ಸಂಘಟನೆ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿದ್ದಾ
ನಿಖಿಲ್ ಕುಮಾರಸ್ವಾಮಿ ಭೇ
ನಿಖಿಲ್ ಕುಮಾರಸ್ವಾಮಿ ಭೇ
ಮೃತ ಬಾಲಕಿ ಮನೆಗೆ ಇಂದು ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾರೆ. ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಮಗಳನ್ನು ಕಳೆದುಕೊಂಡು ಕುಗ್ಗಿರುವ ಕುಟುಂಬಕ್ಕೆ ಶಕ್ತಿ ತುಂಬುವ ಕೆಲಸ ಮಾಡ್ತಿದ್ದಾರೆ. ಇದೇ ವೇಳೆ ಬಾಲಕಿ ಪೋಷಕರು ನಿಖಿಲ್ ಕುಮಾರಸ್ವಾಮಿ ಕಾಲಿಗೆ ಬಿದ್ದು ಗೋಳಾಡಿದ್ದಾರೆ. ಆರೋಪಿಗಳಿಗೆ ತಕ್ಕ ಶಿಕ್ಷೆ ಕೊಡಿಸುವಂತೆ ಕೇಳಿಕೊಂಡಿದ್ದಾ
ಇದನ್ನೂ ಓದಿ: Murugha Mutt: ಮುರುಘಾಮಠದ ಪ್ರಭಾರ ಪೀಠಾಧ್ಯಕ್ಷರ ನೇಮಕ; ಬಸವಪ್ರಭು ಶ್ರೀಗಳಿಗೆ ಪೂಜಾ ಕೈಂಕರ್ಯದ ಉಸ್ತು
ಅತ್ಯಾಚಾರವೆಸಗಿ ಕೊಂದವರಿಗೆ ಗಲ್ಲುಶಿಕ್ಷೆ ವಿಧಿಸಬೇ
ಬಳಿಕ ಮಾಧ್ಯಮಗಳ ಜೊತೆ ಮಾತಾಡಿದ ನಿಖಿಲ್ ಕುಮಾರಸ್ವಾಮಿ, ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಂದವರಿಗೆ ಗಲ್ಲುಶಿಕ್ಷೆ ವಿಧಿಸಬೇಕು. ಈ ವಿಚಾರವಾಗಿ ಅಸೆಂಬ್ಲಿಯಲ್ಲಿ ಮಾತನಾಡ್ತುತ್ತೇನೆ. ಕೇಂದ್ರ ಸರ್ಕಾರ ಕೂಡಲೇ ಈ ವಿಚಾರದಲ್ಲಿ ಸಂವಿಧಾನ ತಿದ್ದುಪಡಿ ಮಾಡಿ ಕ್ರಮವಹಿಸಬೇಕು ಎಂದು ಹೇಳಿದ್ದಾ
ಇದನ್ನೂ ಓದಿ: Prabhakar Kore: ಕೆಎಲ್ಇ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ 75ನೇ ಅಮೃತ ಮಹೋತ್ಸವ ಸಮಾರಂಭ; ಹಲವು ಬಿಜೆಪಿ ನಾಯಕರು
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿರುವುದು ವಿಷಾದನೀಯ ಎಂದು ಮಳವಳ್ಳಿ ಶಾಸಕ ಅನ್ನದಾನಿ ಹೇಳಿಕೆ ನೀಡಿದ್ದಾರೆ. ಘಟನೆಯಿಂದ ಇಡೀ ತಾಲೂಕಿನ ಜನತೆ ದುಃಖದಲ್ಲಿ ಮುಳುಗಿದೆ. ಆದರೆ ಜಿಲ್ಲಾಡಳಿತ ಘಟನೆ ಬಗ್ಗೆ ಕ್ರಮವಹಿಸದೇ ಕುಂಭಮೇಳ ಮಾಡ್ತಿದೆ. ಸಂತ್ರಸ್ತ ಕುಟುಂಬಕ್ಕೆ ಜಿಲ್ಲಾಧಿಕಾರಿ ಬಂದು ಸಾಂತ್ವನ ಹೇಳಿಲ್ಲ ಎಂದು ಅನ್ನದಾನಿ ಹೇಳಿದ್ದಾ
ಟ್ಯೂಷನ್ಗೆ ತೆರಳಿದ್ದ ಬಾಲಕಿ ಶವವಾಗಿ ಪತ್ತೆ
ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದಲ್ಲಿ ನಿರ್ಮಾಣ ಹಂತದ ಮನೆಯ ಸಂಪ್ನಲ್ಲಿ ಬಾಲಕಿ ಶವಪತ್ತೆಯಾಗಿತ್ತು. ದಿವ್ಯಾ ಮಧ್ಯಾಹ್ನ ಟ್ಯೂಷನ್ಗೆ ತೆರಳಿದ್ದಳು. ಎಷ್ಟು ಸಮಯ ಕಳೆದರೂ ಬಾಲಕಿ ಮನೆಗೆ ಬಾರದ ಹಿನ್ನೆಲೆ ಕುಟುಂಬಸ್ಥರು ಹುಡುಕಾಡಿದ್ದಾರೆ. ಈ ವೇಳೆ ಟ್ಯೂಷನ್ ಹಿಂಭಾಗದಲ್ಲಿ ನಿರ್ಮಾಣ ಹಂತದ ಮನೆಯ ಸಂಪ್ನಲ್ಲಿ ಬಾಲಕಿ ಶವ ಪತ್ತೆಯಾಗಿತ್ತು. ಸ್ಥಳಕ್ಕೆ ಮಳವಳ್ಳಿ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಮಿಮ್ಸ್ ಶವಾಗಾರಕ್ಕೆ ರವಾನಿಸಿದ್ದರು. ಇದರ ನಡುವೆ ಬಾಲಕಿಯನ್ನ ಅತ್ಯಾಚಾರವೆಸಗಿ ಕೊಲೆಗೈದಿರುವ ಬಗ್ಗೆ ಪೋಷಕರು ಆರೋಪ ಮಾಡಿದ್ದರು. ಸದ್ಯ ಈಗ ಪೊಲೀಸರ ವಿಚಾರಣೆ ವೇಳೆ ಸತ್ಯ ಬಯಲಾ
ನಿನ್ನೆ ಬಾಲಕಿಯನ್ನ ಕೊಂದು ಸಂಪಿನಲ್ಲಿ ಎಸೆಯಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದು ಆರೋಪಿಗಳನ್ನು ಆದಷ್ಟು ಬೇಗ ಬಂಧಿಸುವಂತೆ ಒತ್ತಾಯಿಸಿದ್ದರು. ಮಳವಳ್ಳಿ ಟೌನ್ ಪೊಲೀಸ್ ಠಾಣೆ ಮುಂದೆ ಕುಟುಂಬಸ್ಥರು ಪ್ರತಿಭಟನೆ ನಡೆಸುತ್ತಿದ್ದರು. ಗಿದೆ.ರೆ.ಭಾಗಿರೆ.ಕುವಾರಿರೆ.ಟಿಟಿರೆ.ತ್ಯ ಗಲಿ . ಮುಂದೆ ಕುಟುಂಬಸ್ಥರು ಪ್ರತಿಭಟನೆ ನಡೆಸುತ್ತಿದ್ದರು.

Post a Comment