Firecrackers: ರಾಜ್ಯದಲ್ಲಿ ಪರಿಸರ ಸ್ನೇಹಿ ಪಟಾಕಿಗೆ ಮಾತ್ರ ಅವಕಾಶ! ಮಾಲಿನ್ಯ ನಿಯಂತ್ರಣಕ್ಕೆ ಕ್ರಮ



 ದೀಪಾವಳಿ ಹಬ್ಬದ ಅಂದ್ರೆ ಪಟಾಕಿಯ ಸದ್ದು ಇರಲೇಬೇಕು. ಕಳೆದ ಎರಡು ವರ್ಷದಿಂದ ಕೊರೊನಾ ಹಿನ್ನೆಲೆ ಹಬ್ಬಗಳ ಆಚರಣೆ ಸರಳವಾಗಿತ್ತು. ಈ ಭಾರೀ ಎಲ್ಲಾ ಹಬ್ಬಗಳ ಆಚರಣೆ ಅದ್ಧೂರಿಯಾಗಿದ್ದು, ದೀಪಾವಳಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲು ಮುಂದಾದವರಿಗೆ ಪರಿಸರ ಮಾಲಿನ್ಯ ಮಂಡಳಿ ಶಾಕ್ ನೀಡಿದೆ.ದೀಪಾವಳಿ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಮಾಲಿನ್ಯ ಹೆಚ್ಚಾಗದಂತೆ ಪರಿಸರ ಮಾಲಿನ್ಯ ಮಂಡಳಿಯಿಂದ ಅಗತ್ಯ ಕ್ರಮಕ್ಕೆ ಮುಂದಾಗಿದೆ. ಈ ವರ್ಷವು ಹಸಿರು ಪಟಾಕಿಯನ್ನಷ್ಟೇ ಮಾರಲು ಅವಕಾಶ ಕಲ್ಪಿಸಲಾಗಿದೆ.
ಒಂದು ವೇಳೆ ಹಸಿರು ಪಟಾಕಿ ಹೊರೆತು ಪಡಿಸಿ ಬೇರೆ ಪಟಾಕಿ ಇಡುವುದು ಕಂಡುಬಂದರೆ ಮುಲಾಜಿಲ್ಲದೇ ಸೀಜ್ ಮಾಡುವಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಡಿಸಿಗಳಿಗೆ, ಪೋಲಿಸ್ ಇಲಾಖೆ, ಅಗ್ನಿ ಶಾಮಾಕ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಬಿಬಿಎಂಪಿಗೆ ಸೂಚನೆ ನೀಡಲಾಗಿದೆ.
ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಮಾತ್ರ ಪಾಟಾಕಿ ಹೊಡೆಯಲು ಅವಕಾಶ. ಪರಿಸರ ಸ್ನೇಹಿ ಪಾಟಾಕಿಗಳನ್ನ ಹೊಡೆಯುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು.
ದೀಪಾವಳಿ ಹಬ್ಬಕ್ಕೂ ಮುಂಚೆ ಹಾಗೂ ನಂತರ ರಾಜಾಧಾನಿ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಎಷ್ಟೇಷ್ಟು ವಾಯುಮಾಲಿನ್ಯ ಹಾಗೂ ಶಬ್ದಮಾಲಿನ್ಯ ಆಗಲಿದೆ ಎನ್ನುವುದನ್ನ ಪತ್ತೆ ಮಾಡಲು ಮಾಪನ ಅಳವಡಿಕೆ ಮಾಡಲಾಗಿದೆ.
ಮಕ್ಕಳಿಗೆ ಪಟಾಕಿ ಕುರಿತು ಜಾಗೃತಿ ಮೂಡಿಸಲು ಶಿಕ್ಷಣ ಇಲಾಖೆಯಿಂದ ವಿಶೇಷ ಕಾರ್ಯಕ್ರಮ ಮಾಡಲಾಗುವುದು. ಕರ್ನಾಟಕದಲ್ಲಿ ಹಸಿರು ಪಟಾಕಿ ಬಗ್ಗೆ ಜನರಿಗೆ ಅರಿವು ಮೂಡಬೇಕಿದೆ,.


ಪಟಾಕಿ ಸ್ಟಾಲ್ಗಳ ಮೇಲೆ ಹದ್ದಿನ ಕಣ್ಣಿಡಲು ಪೋಲಿಸ್ ಇಲಾಖೆಯಗೂ ಸೂಚನೆ ನೀಡಲಾಗಿದೆ. ಪಟಾಕಿಯಿಂದಾಗುವ ತ್ಯಾಜ್ಯವನ್ನ ಹೊರಹಾಕಲು ಘನತ್ಯಾಜ್ಯ ವಾಹನಗಳ ನೇಮಕಕ್ಕೆ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ.
ಪಟಾಕಿಗಳಿಂದಾಗುವ ಹಾನಿಯನ್ನ ತಪ್ಪಿಸಲು ಅಗ್ನಿಶಾಮಕ ಇಲಾಖೆಯೊಂದಿಗೂ ಚರ್ಚೆ ಮಾಡಿದ್ದು, ವಾಯುಮಾಲಿನ್ಯ ಹೆಚ್ಚಾಗದಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತಿದೆ.
ಕಡಿಮೆ ಬೆಳಕು ಮತ್ತು ಶಬ್ದವನ್ನು ಹೊರ ಹಾಕುವ ಮತ್ತು ಸಿಡಿದ ನಂತರ ನೈಟ್ರೋಜನ್, ಆಕ್ಸೈಡ್, ಸಲ್ಫರ್ ಡೈ ಆಕ್ಸೈಡ್ ಹೊರಚಲ್ಲುವ ಪಟಾಕಿಗಳನ್ನು ಹಸಿರು WWW.publicvahini.com ಎನ್ನುತ್ತಾರೆ.

Post a Comment

Previous Post Next Post