Hijab Verdict: ನ್ಯಾಯಮೂರ್ತಿಗಳಿಂದ ವಿಭಿನ್ನ ತೀರ್ಪು, ಹಿಜಾಬ್ ವಿವಾದ ವಿಸ್ತೃತ ಪೀಠಕ್ಕೆ ವರ್ಗಾವಣೆ


  ಸಾಂದರ್ಭಿಕ ಚಿತ್ರ

 ಸೆಪ್ಟೆಂಬರ್ 22ರಂದು ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪಿನ (Karnataka highcourt Judgment) ವಿರುದ್ಧದ ಅರ್ಜಿಗಳ ತೀರ್ಪನ್ನು ಮೂರು ವಾರಗಳ ಹಿಂದೆಯೇ ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟವಾಗಿದೆ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ ಅರ್ಜಿಯನ್ನು ವಜಾ ಮಾಡಿದ್ದಾರೆ. ನ್ಯಾಯಮೂರ್ತಿ ಸುಧಾಂಶ ಧುಲಿಯಾ ಅವರು ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪನ್ನು ರದ್ದುಗೊಳಿಸಿದ್ದಾರೆ. ಹಿಜಾಬ್ ವಿವಾದ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆಗೊಳಿಸಲಾಗಿದೆ. ಕರ್ನಾಟಕದ ಶಾಲಾ ಕಾಲೇಜುಗಳಲ್ಲಿ ಕೆಲವು ಮುಸ್ಲಿಂ ಮಹಿಳೆಯರು (Women) ಧರಿಸುವ ಹಿಜಾಬ್ಗೆ ನಿಷೇಧ (Hijab Ban) ಹೇರಿದ್ದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ತೀರ್ಪನ್ನು ಸುಪ್ರೀಂಕೋರ್ಟ್‌ನ (Supreme court) ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ (Justices Hemant Gupta and Sudhanshu Dhulia) ದ್ವಿ ಸದಸ್ಯ ಪೀಠ ಪ್ರಕಟಿಸಿದೆ. ಈ ಪೀಠವು 10 ದಿನಗಳ ವಾದಗಳನ್ನು  ಆಲಿಸಿದ ನಂತರ ಸೆಪ್ಟೆಂಬರ್ 22ರಂದು ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪಿನ (Karnataka highcourt Judgment) ವಿರುದ್ಧದ ಅರ್ಜಿಗಳ ತೀರ್ಪನ್ನು ಮೂರು ವಾರಗಳ ಹಿಂದೆಯೇ ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟವಾಗಿದೆ. ಪೀಠದ ನೇತೃತ್ವದ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ಭಾನುವಾರ ನಿವೃತ್ತರಾಗಲಿದ್ದಾರ

ಕರ್ನಾಟಕ ಹೈಕೋರ್ಟ್ ತೀರ್ಪು ಏನಾಗಿತ್ತು

ಹಿಜಾಬ್ ಪರವಾಗಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸುವ ಮೂಲಕ ಶಾಲಾ-ಕಾಲೇಜುಗಳಲ್ಲಿ ಧರ್ಮವಸ್ತ್ರ ಕಡ್ಡಾಯ ಅಲ್ಲ ಎಂದು ಕರ್ನಾಟಕ ಉಚ್ಛ ನ್ಯಾಯಾಲಯ (Karnataka High court) ಮಹತ್ವದ ತೀರ್ಪನ್ನು ನೀಡಿತ್ತು. ಮಾರ್ಚ್ 15ರಂದು 10.30ಕ್ಕೆ ಹೈಕೋರ್ಟ್ ಪೂರ್ಣ ಪೀಠದಿಂದ ತೀರ್ಪು ಹೊರ ಬಂದಿತ್ತು

 ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರ ಪೂರ್ಣ ಪೀಠ ತೀರ್ಪು ಸರ್ವಸಮ್ಮತವಾಗಿ ತೀರ್ಪನ್ನು ನೀಡಿತ್ತು

ಇದೇ ವೇಳೆ ನ್ಯಾಯಪೀಠ, 2022 ಫೆಬ್ರವರಿ 5ರಂದು ಸರ್ಕಾರದ (Government Order) ಏಕರೂಪ ಸಮವಸ್ತ್ರ (Uniform) ಕಡ್ಡಾಯ ಆದೇಶವನ್ನು ಎತ್ತಿ ಹಿಡಿದಿದ್ದು, ಕಾನೂನುಬದ್ಧವಾಗಿದೆ ಎಂದು ನ್ಯಾಯಾಲಯ ಹೇಳಿದೆ. ನ್ಯಾಯಾಲಯ ಒಟ್ಟು 129 ಪುಟಗಳ ತೀರ್ಪು ಪ್ರಕಟಿಸಿತ್ತು


 ಸಾಂದರ್ಭಿಕ ಚಿತ್ರ


ಏನಿದು ಹಿಜಾಬ್​ ಪ್ರಕರಣ?

ಉಡುಪಿಯ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಹಿಜಾಬ್​ ನಿರ್ಬಂಧಿಸುವುದನ್ನು ಪ್ರಶ್ನಿಸಿ ಕಾಲೇಜಿನ ಐವರು ವಿದ್ಯಾರ್ಥಿನಿಯರು, ಸಮವಸ್ತ್ರದ ಜೊತೆ ಹಿಜಾಬ್​ ಧರಿಸಿ ತರಗತಿಗಳಿಗೆ ಹಾಜರಾಗಲು ಅನುಮತಿ ನೀಡುವಂತೆ ಕೋರಿ ಕುಂದಾಪುರದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಅರ್ಜಿಗಳನ್ನು ಸಲ್ಲಿಸಿದ್ರು.

ಇದನ್ನೂ ಓದಿ: Hijab Row: ತ್ರಿಸದಸ್ಯ ಪೀಠದಿಂದ 129 ಪುಟಗಳ ತೀರ್ಪು: ತೀರ್ಪಿನಲ್ಲಿ ನಾಲ್ಕು ಪ್ರಶ್ನೆಗಳನ್ನ ಗಂಭೀರವಾಗಿ ಪರಿಗಣನೆ

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್​ ನಿರ್ಬಂಧಿಸಿ ರಾಜ್ಯ ಸರ್ಕಾರ ಫೆ.5ರಂದು ಹೊರಡಿಸಿದ್ದ ಆದೇಶವನ್ನೂ ಅರ್ಜಿಗಳಲ್ಲಿ ಪ್ರಶ್ನಿಸಲಾಗಿತ್ತು.

ಹಿಜಾಬ್ ಗಲಾಟೆಯಾದ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರ ದಾಖಲಾತಿ ಹೆಚ್ಚಳ

ರಾಜ್ಯದಲ್ಲಿ ಹಿಜಾಬ್ ಗಲಾಟೆ ಆರಂಭವಾಗಿದ್ದ ಉಡುಪಿ ಸರ್ಕಾರಿ ಮಹಿಳಾ ಪಿಯು ಕಾಲೇಜಿನಲ್ಲಿ ದಾಖಲಾತಿ ಆರಂಭಗೊಂಡಿದೆ. ಈ ಬಾರಿ ಮುಸ್ಲಿಂ ವಿದ್ಯಾರ್ಥಿನಿಯರ ದಾಖಲಾತಿ ಸಂಖ್ಯೆ ಹೆಚ್ಚಳವಾಗಿದೆ. ಇದೇ ಕಾಲೇಜಿನ ಆರು ವಿದ್ಯಾರ್ಥಿನಿಯರು ಹಿಜಾಬ್ ಪರವಾಗಿ ನ್ಯಾಯಾಲಯ ಮೆಟ್ಟಿಲೇರಿದ್ದರು. ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ ಬಳಿಕವೂ ಹಿಜಾಬ್ ಧರಿಸಿ ಪರೀಕ್ಷೆ ಬರೆಯೋದಾಗಿ ಹಠ ಮಾಡಿದ್ದರು. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡದ ಹಿನ್ನೆಲೆ ಗೈರಾಗಿದ್ದರು.

ಇದನ್ನೂ ಓದಿ: Saffron Flag: ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವ ಹೇಳಿಕೆ: KS Eshwarappa ವಿರುದ್ಧ ದೆಹಲಿಯಲ್ಲಿ FIR ದಾಖಲು

ಇದೀಗ ಇದೇ ಕಾಲೇಜಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ದಾಖಲಾತಿ ಪಡೆದುಕೊಂಡಿದ್ದಾರೆ. ಹಿಜಾಬ್ ಗಲಾಟೆ ಬಳಿಕ ಉಡುಪಿ ಸರ್ಕಾರಿ ಮಹಿಳಾ ಪಿಯು ಕಾಲೇಜಿಗೆ ಮುಸ್ಲಿಂ ವಿದ್ಯಾರ್ಥನಿಯರ ದಾಖಲಾತಿ ಕಡಿಮೆ ಆಗಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.

Post a Comment

Previous Post Next Post