ಕಾಂಗ್ರೆಸ್, ಜೆಡಿಎಸ್, ಬಿಜೆಪಿ
ಈ ಸರ್ಕಾರ ಅದೆಷ್ಟು ದರಿದ್ರಗೇಡಿ ಎಂಬುದಕ್ಕೆ ಇದಕ್ಕಿಂತ ಸಾಕ್ಷಿ ಬೇಕೇ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು (ಅ. 22): ಸರ್ಕಾರಿ ಶಾಲೆ ಮಕ್ಕಳಿಂದ ದೇಣಿಗೆ ಸಂಗ್ರಹದ (Donations Collection) ಬಗ್ಗೆ ವಿರೋಧ ಪಕ್ಷದ ನಾಯಕರು ಕಿಡಿಕಾರಿದ್ದಾರೆ. ಕಾಂಗ್ರೆಸ್ ನಾಯಕರು (Congress Leaders) ಹಾಗೂ ಜೆಡಿಎಸ್ ನಾಯಕರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ತಕ್ಷಣವೇ ಸರ್ಕಾರ ಆ ಹಣವನ್ನ ಹಿಂದಿರುಗಿಸಬೇಕು. ಪೋಷಕರ (Parents) ಬಳಿ ಹಣ ವಸೂಲಿ ಮಾಡೋದು ಕೆಟ್ಟ ನಿರ್ಧಾರ. ಸರ್ಕಾರಿ ಶಾಲೆಗಳಲ್ಲಿ ಸರಿಯಾಗಿ ಮೂಲಭೂತ ಸೌಕರ್ಯಗಳಿಲ್ಲ. ಆದರೆ ಪೋಷಕರಿಂದ ಚಂದಾ ವಸೂಲಿ ಮಾಡೋದು ಸರ್ಕಾರದ ದಿವಾಳಿತನ ಈ ರೀತಿಯ ತೀರ್ಮಾನ ಮಾಡೋಕೆ ಸರ್ಕಾರಕ್ಕೆ ನಾಚಿಕೆ ಆಗಬೇಕು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಕಿಡಿಕಾರಿದ್ರು.
ಪ್ರಿಯಾಂಕಾ ಖರ್ಗೆ ಕಿಡಿ
ಶಾಲೆಗಳಿಗೆ ಅಗತ್ಯವಿರುವ ಖರ್ಚು–ವೆಚ್ಚಗಳಿಗಾಗಿ ಪೋಷಕರಿಂದ ದೇಣಿಗೆ ಸಂಗ್ರಹಿಸುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ರಮದ ಬಗ್ಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಇಲಾಖೆಯ ಕ್ರಮ ಖಂಡಿಸಿ ಟ್ವೀಟ್ ಮಾಡಿರುವ ಖರ್ಗೆ, 'ಸರ್ಕಾರಿ ಶಾಲೆ ಮಕ್ಕಳಿಗೆ ದೇಣಿಗೆ ಕೊಡಿ ಎನ್ನುವಷ್ಟು ದಿವಾಳಿಯಾಗಿರುವ ಸರ್ಕಾರ, ಉನ್ನತ ಶಿಕ್ಷಣಕ್ಕೆ ವಿಶೇಷ ವಿದ್ಯಾರ್ಥಿವೇತನ ನೀಡುವುದೇ? ಎಂದು ಪ್ರಶ್ನಿಸಿದ್ದಾ
ರೆಶಾಸಕ ಪ್ರಿಯಾಂಕ್ ಖರ್ಗೆ
ಉನ್ನತ ಶಿಕ್ಷಣಕ್ಕೆ ಸಹಾಯ ಮಾಡುತ್ತಾ?
ಟ್ವೀಟ್ ಮಾಡಿ ಕಿಡಿಕಾರಿದ ಪ್ರಿಯಾಂಕಾ ಖರ್ಗೆ, ಕಾಂಗ್ರೆಸ್ ಸರ್ಕಾರದ ವಿದ್ಯಾಸಿರಿ ಯೋಜನೆ ವಿದ್ಯಾರ್ಥಿಗಳಿಗೆ ಸಹಾಯಹಸ್ತ ನೀಡಿತ್ತು. ಆದರೆ, ಜೋಗಪ್ಪ, ತೃತೀಯಲಿಂಗಿ ವಿದ್ಯಾರ್ಥಿಗಳಿಗೆ ಸಹಾಯಧನ ನೀಡುವ ಭರವಸೆ ನೀಡಿದ್ದ ಬಿಜೆಪಿಗೆ ತನ್ನ ಮಾತೇ ಮರೆತು ಹೋಗಿದೆ ಎಂದೂ ಕುಟುಕಿದ್ದಾರೆ.
ಇದನ್ನೂ ಓದಿ: H.D Kumaraswamy: ರಾಮನಗರ, ಚನ್ನಪಟ್ಟಣ ಎರಡೂ ನನ್ನ ಕಣ್ಣುಗಳಿದ್ದಂತೆ, ಆದರೆ ಈ ಬಾರಿ ಈ ಕ್ಷೇತ್ರದಿಂದ ಮಾತ್ರ ಸ್ಪರ್ಧೆ- ಎಚ್‌ಡಿಕೆ
ಜೋಗಪ್ಪ ಸಮುದಾಯ ಹಾಗೂ ತೃತೀಯ ಲಿಂಗಿಗಳ ಉನ್ನತ ಶಿಕ್ಷಣಕ್ಕೆ ವಿಶೇಷ ವಿದ್ಯಾರ್ಥಿ ವೇತನ ನೀಡುತ್ತೇವೆ ಎಂದಿತ್ತು ಬಿಜೆಪಿ. ತೃತೀಯ ಲಿಂಗಿಗಳಿಗೆ ರೂಪಿಸಿದ ಯೋಜನೆ ಯಾವುದು? ಎಲ್ಲಿ ವಿದ್ಯಾರ್ಥಿ ವೇತನ? ವಿದ್ಯಾರ್ಥಿಗಳಿಂದಲೇ 100 ರೂಪಾಯಿ ಭಿಕ್ಷೆ ಬೇಡುವ ಸರ್ಕಾರಕ್ಕೆ ವಿದ್ಯಾರ್ಥಿ ವೇತನ ನೀಡುವ ಯೋಗ್ಯತೆ ಇದೆಯೇ?' ಎಂದು ಕಾಂಗ್ರೆಸ್ ಸಹ ಟ್ವೀಟ್ ಮಾಡಿ ಚಾಟಿ ಬೀಸಿದೆ.
ಬಿಜೆಪಿ ಜನ ಸಾಮಾನ್ಯರ ರಕ್ತ ಹೀರುತ್ತಿದೆ
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಜನ ಸಾಮಾನ್ಯರ ರಕ್ತ ಹೀರುತ್ತಿದ್ದು, ಅದರ ಮುಂದುವರಿದ ಭಾಗವಾಗಿ ಈಗ ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಪೋಷಕರಿಂದ ತಿಂಗಳಿಗೆ 100 ರೂ. ದೇಣಿಗೆ ವಸೂಲಿಗೆ ಮುಂದಾಗಿದೆ. ಈ ಸರ್ಕಾರ ಅದೆಷ್ಟು ದರಿದ್ರಗೇಡಿ ಎಂಬುದಕ್ಕೆ ಇದಕ್ಕಿಂತ ಸಾಕ್ಷಿ ಬೇಕೇ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಸಾವಿರಾರು ಸರ್ಕಾರಿ ಶಾಲೆಗಳನ್ನು ಮುಚ್ಚಲಾಗಿದೆ. 10 ಲಕ್ಷಕ್ಕೂ ಹೆಚ್ಚು ಮಕ್ಕಳು ಶಿಕ್ಷಣದಿಂದ ವಿಮುಖರಾಗಿದ್ದಾರೆ. ಇದು ಸರ್ಕಾರದ ಶಿಕ್ಷಣ ವಿರೋಧಿ ನೀತಿ ಅಲ್ಲದೆ ಮತ್ತೇನು ಎಂದು ರಾಮಲಿಂಗಾರೆಡ್ಡಿ ಅವರು ಕಿಡಿಕಾರಿದ್ದಾರೆ.
ಸಚಿವ ಬಿಸಿ ನಾಗೇಶ್ ಸಮರ್ಥನೆ
ರಾಜ್ಯದ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಅಗತ್ಯವಿರುವ ಖರ್ಚುವೆಚ್ಚಗಳಿಗಾಗಿ ಮಕ್ಕಳ ಪೋಷಕರಿಂದ ದೇಣಿಗೆ ರೂಪದಲ್ಲಿ ಪ್ರತಿ ತಿಂಗಳು ₹ 100 ಸಂಗ್ರಹಿಸಲು ಎಸ್‌ಡಿಎಂಸಿಗಳಿಗೆ ಅನುಮತಿ ನೀಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಇದಕ್ಕೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.
ಇದನ್ನೂ ಓದಿ: JDS Politics: ಚುನಾವಣೆ ಘೋಷಣೆಗೂ ಮುನ್ನವೇ ಜೆಡಿಎಸ್ ರಣಕಹಳೆ; ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್
ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು, ಇದರಲ್ಲಿ ನನ್ನದಾಗಲಿ ಅಥವಾ ಮುಖ್ಯಮಂತ್ರಿಯದ್ದಾಗಲಿ ಪಾತ್ರವಿಲ್ಲ ಎಂದು ಹೇಳಿದ್ದರು. ಹೀಗೆ ದೇಣಿಗೆ ಸಂಗ್ರಹಿಸಲು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ (ಆರ್‌ಟಿಇ) ಅವಕಾಶವಿದೆ. ಅದನ್ನು ಬಳಸಿ, ಎಸ್‌ಡಿಎಂಸಿಗಳ ಮನವಿ ಮೇರೆಗೆ ಅನುಮತಿ ನೀಡಿದ್ದಾರೆ’ ಎಂದು ಸಮರ್ಥಿಸಿಕೊಂಡಿದ್ದರು.


Post a Comment