ಶ್ರೀರಾಮುಲು ಮತ್ತು ರಾಹುಲ್ ಗಾಂಧಿ
ದೆಹಲಿಯಿಂದಲೇ ರಾಜೀನಾಮೆ ಪತ್ರ ಬಿಸಾಕಿದ ಖಾಯಂ ಎಐಸಿಸಿ AICC ಅಧ್ಯಕ್ಷರ ಮುದ್ದಿನ ಪುತ್ರ ಪಾದಯಾತ್ರೆಯ ಮೂಲಕ ಬಳ್ಳಾರಿಗೆ ಆಗಮಿಸುತ್ತಿರುವುದಕ್ಕೆ ನಿಮಗಿದೋ ಭವ್ಯ ಸ್ವಾಗತ ಎಂದು ವಾಗ್ದಾಳಿ ನಡೆಸಿದ್ದಾರೆ
ಇಂದು ಕಾಂಗ್ರೆಸ್ (Congress) ಬಳ್ಳಾರಿಯಲ್ಲಿ (Bellary) ಬೃಹತ್ ಸಮಾವೇಶ ನಡೆಸಲಿದೆ. ಭಾರತ್ ಜೋಡೋ ಯಾತ್ರೆ (Bharat Jodo Yatre) ಸಹ ಬಳ್ಳಾರಿಯಲ್ಲಿಯೇ ಸಂಚರಿಸುತ್ತಿದೆ. ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಗೆ ಬಿಜೆಪಿ ನಾಯಕ, ಸಚಿವ ಶ್ರೀರಾಮುಲು (Minister B.Sriramulu) ವ್ಯಂಗ್ಯ ಮಾಡಿದ್ದಾರೆ. ಸಾಲು ಸಾಲು ಟ್ವೀಟ್ ಮಾಡಿರುವ ಸಚಿವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 1999ರ ಲೋಕಸಭಾ ಚುನಾವಣೆ (Loksabha Election 1999) ವೇಳೆ ಅಮೇಥಿಯಲ್ಲಿ (Amethie) ಸೋಲಬಹುದು ಎಂಬ ಭೀತಿಯಿಂದ ಬಳ್ಳಾರಿಗೆ ಓಡೋಡಿ ಬಂದು ರಾಜಕೀಯ ಪುನರ್ ಜನ್ಮ ಪಡೆದಿದ್ದಕ್ಕೆ ಪ್ರತಿಯಾಗಿ, ಜಿಲ್ಲೆಯ ಜನತೆಗೆ ಚೂರಿ ಹಾಕಿ ಹೋಗಿದ್ದ ಕಾಂಗ್ರೆಸ್ ಪಕ್ಷದ ಭಾರತ್ ತೋಡೋ ಯಾತ್ರೆಗೆ ಹಾರ್ದಿಕ ಸುಸ್ವಾಗತ ಎಂದು ವ್ಯಂಗ್ಯವಾಡಿದ್ದಾರೆ
ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಗೆದ್ದು, ಸೌಜನ್ಯಕ್ಕಾದರೂ ಜನತೆಗೆ ಧನ್ಯವಾದಗಳನ್ನು ತಿಳಿಸದೇ, ದೆಹಲಿಯಿಂದಲೇ ರಾಜೀನಾಮೆ ಪತ್ರ ಬಿಸಾಕಿದ ಖಾಯಂ ಎಐಸಿಸಿ AICC ಅಧ್ಯಕ್ಷರ ಮುದ್ದಿನ ಪುತ್ರ ಪಾದಯಾತ್ರೆಯ ಮೂಲಕ ಬಳ್ಳಾರಿಗೆ ಆಗಮಿಸುತ್ತಿರುವುದಕ್ಕೆ ನಿಮಗಿದೋ ಭವ್ಯ ಸ್ವಾಗತ ಎಂದು ವಾಗ್ದಾಳಿ ನಡೆಸಿದ್ದಾ
ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಏದುಸಿರು ಬಿಡುತ್ತಾ ಕೈಲಾಗದಿದ್ದರೂ ಎದ್ದೋ ಬಿದ್ದನಂತೆ ಓಡುತ್ತಾ, ರಸ್ತೆಯಲ್ಲಿ ಬಸ್ಕಿ ಹೊಡೆಯುತ್ತಾ, ಹಾವು- ಮುಂಗುಸಿಯಂತೆ ಇದ್ದರೂ, ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಕ್ಯಾಮರಾ ಮುಂದೆ ಪೋಜು ನೀಡುವ ಕೆಪಿಸಿಸಿ ಮಹಾನ್ ನಾಯಕರೆಲ್ಲರಿಗೂ ಸುಸ್ವಾಗತ ಎಂದಿದ್ದಾರೆ
ಸಂಕೋಚ ಏಕೆ ಎಂದು ಪ್ರಶ್ನೆ
ನಾವು ನಡೆಸುತ್ತಿರುವುದು ಭಾರತ್ ಜೋಡೋ ಯಾತ್ರೆಯಲ್ಲ. ಬದಲಿಗೆ ನಮ್ಮ ತಾಯಿಯನ್ನು ಗೆಲ್ಲಿಸಿದ್ದಕ್ಕೆ ಜನಾದೇಶವನ್ನು ದಿಕ್ಕರಿಸಿ ರಾಜೀನಾಮೆ ನೀಡಿದ್ದಕ್ಕೆ, ಅಧಿಕಾರದಲ್ಲಿ ಇದ್ದಾಗ ಏನು ಮಾಡದೆ ಮತದಾರರ ಕ್ಷಮೆ ಕೇಳುವ ಪ್ರಾಯಶ್ಚಿತ ಯಾತ್ರೆ ಮಾಡುತ್ತಿದ್ದೇವೆ ಎಂದು ಹೇಳಲು ಸಂಕೋಚ ಏಕೆ ಎಂದು ಪ್ರಶ್ನೆ ಮಾಡಿದ್ದಾ
ರೆ. ?.ರೆ... ಮಾಡಿದ್ದಾರೆಭಾರತ್ ಜೋಡೋ
1999ರ ಲೋಕಸಭಾ ಚುನಾವಣೆ ನಂತರ ಬಳ್ಳಾರಿ ಜಿಲ್ಲೆಗೆ 3300 ಕೋಟಿ ರೂ.ಗಳ ಸುಳ್ಳು ಪ್ಯಾಕೇಜ್ ಅನ್ನು ನಿಮ್ಮ ಮಾತೃಶ್ರೀಯವರಾದ ಶ್ರೀಮತಿ ಸೋನಿಯಾ ಗಾಂಧಿಯವರು ಘೋಷಣೆ ಮಾಡಿದ್ದರು ಎಂಬುದನ್ನು ಮಾನ್ಯ ರಾಹುಲ್ ಗಾಂಧಿ ಅವರಿಗೆ ನೆನಪಿಲು ಇಚ್ಛೇಸುತ್ತೇನೆ.
ನಾಯಕರ ಬಳಿ ಉತ್ತರ ಇದೆಯಾ?
ಬಳ್ಳಾರಿ ಜನತೆ ಸೋನಿಯಾಗಾಂಧಿ ಅವರು ಘೋಷಿಸಿದ ಪ್ಯಾಕೇಜ್ ಬಂದೇ ಬರುತ್ತದೆ ಎಂದು ಜನ ಕಣ್ ಕಣ್ ಬಿಟ್ಟಿದ್ದೇ ಆಯಿತು, ಆದರೆ ಅದು ಎಲ್ಲಿಗೆ ಬಂತು? ಯಾವಾಗ ಬಂತು? ಯಾರಿಗೆ ಹೋಯಿತು? ಯಾರ ಜೇಬಿಗೆ ಸೇರಿತು? ಕಾಂಗ್ರೆಸ್‍ನ ನಾಯಕರ ಬಳಿ ಉತ್ತರ ಇದೆಯೇ ಎಂದು ಕೇಳಿದ್ದಾರೆ.
ಸೋನಿಯಾಗಾಂಧಿ ಅವರು ಸ್ಪರ್ಧೆ ಮಾಡಿದಾಗ ಅವರ ಮೇಲಿನ ಪ್ರೀತಿ, ಅಭಿಮಾನದಿಂದ ಆಶೀರ್ವಾದ ಮಾಡಿದರು, ಗೆದ್ದ ಮೇಲೆ ಇಲ್ಲಿಗೆ ಎಷ್ಟು ಸಲ ಬಂದರು? ಕನಿಷ್ಟ ಪಕ್ಷ ಗೆಲ್ಲಿಸಿದ್ದಕ್ಕೆ ಮತದಾರರಿಗೆ ಸೌಜನ್ಯಕ್ಕಾದರೂ ಕೃತಜ್ಞತೆ ಹೇಳಿದ್ದಾರಾ? ಇದನ್ನು ಜನತೆಯ ಮುಂದಿಡಲು ಸಿದ್ದರಿ
ದ್ದೀರಾ?ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ
ಬಳ್ಳಾರಿ ಜಿಲ್ಲೆಗೆ ಕಾಂಗ್ರೆಸ್ ಕೊಡುಗೆ ಏನು?
ಬಳ್ಳಾರಿ ಜಿಲ್ಲೆಗೆ ಸೋನಿಯಾಗಾಂಧಿ ಆಗಲಿ ಅಥವಾ ಕಾಂಗ್ರೆಸ್‍ನ ಕೊಡುಗೆ ಏನು ಎಂಬುದನ್ನು ಅವರ ಪುತ್ರ ಶ್ರೀ ರಾಹುಲ್ ಗಾಂಧಿ ಅವರೇ ಹೇಳಬೇಕು. ದೇಶ ಬೆಸೆಯುತ್ತೇನೆ ಎಂದು ಹೊರಟಿರುವ ಅವರಿಗೆ ಜಿಲ್ಲೆಯ ಜನ ಪಾಠ ಕಲಿಸಲಿದ್ದಾರೆ ಎಂಬುದನ್ನು ಮರೆಯಬೇಡಿ. ಕಡೆ ಪಕ್ಷ ಐದು ವರ್ಷಗಳ ಕಾಲ ಅಧಿಕಾರದಲ್ಲಿ ನಿಮ್ಮ ಕಾಂಗ್ರೆಸ್ ಪಕ್ಷ ಬಳ್ಳಾರಿಗೆ ಜಿಲ್ಲೆಗೆ ಕೊಡುಗೆ ಏನು?
ಇದನ್ನೂ ಓದಿ: Yadagiri: ಹಿಂದೂ ಧರ್ಮ ತೊರೆದ ದಲಿತರು! 400ಕ್ಕೂ ಹೆಚ್ಚು ಮಂದಿಯಿಂದ ಬೌದ್ಧ ಧರ್ಮ ಸ್ವೀಕಾರ
ರಾಹುಲ್ ಗಾಂಧಿ ಅವರೇ ನಿಮ್ಮ ಭಾಷಣದಲ್ಲಿ ಹೇಳುತ್ತೀರಾ? ನಿಮ್ಮಬೆಸುಗೆಯ ಯಾತ್ರೆಗೆ ಜನ ಬಗ್ಗೋದಿಲ್ಲ. ಅವರನ್ನು TAKEN FOR GRANTED ಮಾಡಿಕೊಂಡಿದ್ದೀರಾ? ಏಕಂದರೆ, ಬಳ್ಳಾರಿ ಜಿಲ್ಲೆಗೆ ಸೋನಿಯಾ ಗಾಂಧಿ ಅವರು ಒಮ್ಮೆ ಲೋಕಸಭಾ ಸದಸ್ಯರಾಗಿ ಕೊಟ್ಟ ಕೊಡುಗೆ ಶೂನ್ಯ. ಅದನ್ನು ರಾಹುಲ್ ಗಾಂಧಿ ಮರೆತರೂ, ಜನ ಮರೆತಿಲ್ಲ. ಯಾತ್ರೆಯ ಮೂಲಕ ಮರೆ ಮಾಚಲು ಸಾಧ್ಯವಿಲ್ಲ
ಜೈಕಾರ ಹಾಕುವವರೂ ಅಲ್ಲ
ಬಳ್ಳಾರಿ ಜಿಲ್ಲೆ ಅಭಿವೃದ್ದಿಯಲ್ಲಿ ಬಿಜೆಪಿ ಸರ್ಕಾರದ ಕೊಡುಗೆಯೇ ದೊಡ್ಡದು. ಅದು ಜಿಲ್ಲೆಯ ಜನರಿಗೂ ಗೊತ್ತಿದೆ. ಹಾಗಾಗಿ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮೂಲಕ ಬಂದು ಏನೇ ಮಾಡಿದರೂ ನಂಬುವುದಿಲ್ಲ. ಅವರಿಗೆ ವಾಸ್ತವದ ಮೇಲೆ ನಂಬಿಕೆಯೇ ಹೊರತು, ಬರೀ ನಾಟಕ ಮಾಡುವವರ ಮೇಲಲ್ಲ.
ಇದನ್ನೂ ಓದಿ: Harish Poonja: ಜಿಹಾದಿಗಳ ಟಾರ್ಗೆಟ್ ಆದ್ರಾ ಹರೀಶ್ ಪೂಂಜಾ? ತಲ್ವಾರ್ ಝಳಪಿಸಿದವರ ಬಗ್ಗೆ ಶಾಸಕರು ಹೇಳಿದ್ದೇನು?
ಬಳ್ಳಾರಿ ಪಾದಯಾತ್ರೆ ನಡೆಸಿ ಮುಖ್ಯಮಂತ್ರಿ ಆದವರೂ ಕೂಡ ಜಿಲ್ಲೆಯ ಅಭಿವೃದ್ಧಿಗೆ ನಯಾಪೈಸೆ ಹಣ ಕೊಡದೆ, ಈಗ ಯಾವ ಮುಖ ಇಟ್ಟುಕೊಂಡು ಜನರ ಮುಂದೆ ಭಾಷಣ ಮಾಡುತ್ತೀರಿ.? ನಮ್ಮ ಜನ ಸ್ವಾಭಿಮಾನಿಗಳು. ಎಲ್ಲದಕ್ಕೂ ಹೌದು ಹುಲಿಯಾ , ಎನ್ನುವವರಲ್ಲ ಅಥವಾ ಟಗರು ಟಗರು ಎಂದು ಜೈಕಾರ ಹಾಕುವವರೂ ಅಲ್ಲ. ಕಾಂಗ್ರೆಸ್ ಎಂದರೆ ಸುಳ್ಳು ಭರವಸೆ ನೀಡುವ ರಾಜಕೀಯ ಪಕ್ಷ ಎಂಬುದು ಇತಿಹಾ
ಸದಿಂದಲೇ ಋಜುವಾತಾಗಿದೆ.ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ
ಭಾಷಣದಿಂದ ಮೋಡಿ ಮಾಡಲು ಸಾಧ್ಯವಿಲ್ಲ
ಲೋಕಸಭಾ ಉಪ ಚುನಾವಣೆಯಲ್ಲಿ ಗೆದ್ದಾಗಲೂ ಎಂದಿನಂತೆ ಮತ್ತೆ ಮತದಾರರಿಗೆ ಅದೇ ಮೋಸ, ವಂಚನೆ ಜನತೆಯ ಮೂಗಿಗೆ ತುಪ್ಪ ಸವರಿದ್ದು. ಈಗ ಭಾರತ್ ತೋಡೋ. ಕಾಲ ಬದಲಾಗಿದೆ. ಸುಳ್ಳಿನ ಮೇಲೆ ರಾಜಕೀಯ ಮಾಡುವುದು, ಸಂತೆ ಭಾಷಣ ಮಾಡುವುದರಿಂದ ಮೋಡಿ ಮಾಡಲು ಸಾಧ್ಯವಿಲ್ಲ. ಬರಲಿರುವ ದಿನಗಳಲ್ಲಿ ಜಿಲ್ಲೆಯಿಂದ ಕಾಂಗ್ರೆಸ್ ಪಕ್ಷದ ಬೇರುಗಳನ್ನು ಬುಡ ಸಮೇತ ಕಿತ್ತು ಹಾಕಲಿದ್ದಾರೆ ಎಂಬ ಸತ್ಯವನ್ನು ಕಾಂಗ್ರೆಸ್ ನಾಯಕರು ಮರೆಯಬಾರದು ಎಂದು ಹೇಳಿದ್ದಾರೆ.




Post a Comment