Karnataka Election 2023: ವಿಧಾನಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ಬಿಜೆಪಿ ಹೈಕಮಾಂಡ್ ನಾಯಕರು ಅಲರ್ಟ್ ಆಗಿದ್ದಾರೆ. ರಾಜ್ಯದಲ್ಲಿ ಈ ಬಾರಿಯೂ ಕಮಲ ಅರಳಿಸಲು ರೆಡಿಯಾಗಿದ್ದಾರೆ.ಗುಜರಾತ್ ಗೆಲುವಿನ ಖುಷಿಯಲ್ಲಿರೋ ಬಿಜೆಪಿ ಕರ್ನಾಟಕವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ.ಈಗಾಗಲೇ ಜನಸಂಕಲ್ಪ ಯಾತ್ರೆ, ಎಸ್ ಟಿ ಸಮಾವೇಶಗಳ ಮೂಲಕ ಚುನಾಣಾ ಪ್ರಚಾರ ಕಾರ್ಯವನ್ನು ಬಿಜೆಪಿ ಆರಂಭಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷಮ ಜೆ.ಪಿ.ನಡ್ಡಾ ಸೇರಿದಂತೆ ಹಲವು ಹೈಕಮಾಂಡ್ ನಾಯಕರು ರಾಜ್ಯದತ್ತ ಮುಖ ಮಾಡಿದ್ದಾರೆ.ಮತ್ತೊಂದು ಕಡೆ ಆರ್ಎಸ್ಎಸ್ ನಾಯಕರು ಸಹ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಜೊತೆಯಲ್ಲಿ ಚುನಾವಣೆ ಕುರಿತು ಚರ್ಚೆ ನಡೆಸುತ್ತಿದ್ದಾರೆ.ಜನವರಿ 12ಕ್ಕೆ ಖದ್ದು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವದ ಆಯೋಜನೆ ಕುರಿತು ಪೂರ್ವಭಾವಿ ಸಭೆ ನಡೆಯಲಿದೆ.ಹುಬ್ಬಳ್ಳಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವದ ಕಾರ್ಯಕ್ರಮವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಈ ಮೊದಲು ಬೆಳಗಾವಿಯಲ್ಲಿ ರಾಷ್ಟ್ರೀಯ ಯುವಜನೋತ್ಸವದ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚೆಯಾಗಿತ್ತು.ಆದ್ರೆ ಇದೀಗ ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವಜನೋತ್ಸವದ ಕಾರ್ಯಕ್ರಮ ನಡೆಸಲು ಸರ್ಕಾರ ಮುಂದಾಗಿದೆ.ಇಂದು ಸಂಜೆ 6 ಗಂಟೆಗೆ ಸಿಎಂ ಬೊಮ್ಮಾಯಿ ಹಾಗೂ ಕ್ರೀಡಾ ಸಚಿವ ನಾರಾಯಣ ಗೌಡ ನೇತೃತ್ವದಲ್ಲಿ ಸುವರ್ಣ ಸೌಧದಲ್ಲಿ ಮಹತ್ವದ ಸಭೆ ನಡೆಯಲಿದೆ.

Post a Comment