ಕೆಎಸ್ ಈಶ್ವರಪ್ಪ, ಮಾಜಿ ಸಚಿವ
KS Eshwarappa: ಶಿವಮೊಗ್ಗ ಮತದಾರರು ಯಾವುದೇ ಜಾತಿಯ ಒತ್ತಡಕ್ಕೆ ಮಣಿಯದೆ ಗೆಲುವು ನೀಡಿದ್ದಾರೆ. ಇದಕ್ಕೆ ಕಾರಣ ನಮ್ಮ ಸಂಘಟನೆ.ಶಿವಮೊಗ್ಗ: ನಗರದ ಬಿಜೆಪಿ ಕಚೇರಿಯಲ್ಲಿ (BJP) ಸುದ್ದಿಗೋಷ್ಠಿ ನಡೆಸಿದ ಮಾಜಿ ಶಾಸಕ ಕೆ.ಎಸ್.ಈಶ್ವರಪ್ಪ (Former Minister KS Eshwarappa), ಕಾಂಗ್ರೆಸ್ (Congress) ಅಧಿಕಾರಕ್ಕೆ ಬರುತ್ತಿದ್ದಂತೆ ದೇಶದ್ರೋಹಿ ಚಟುವಟಿಕೆಗಳು ಹೆಚ್ಚಾಗಿವೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ದೇಶ ವಿರೋಧಿ ಚಟುವಟಿಕೆಗಳು ಹೆಚ್ಚಾಗಿದೆ. ಬೆಳಗಾವಿಯ (Belagavi) ತಿಲಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ವಿಜಯೋತ್ಸವದಲ್ಲಿ ಪಾಕ್ ಪರ ಘೋಷಣೆ ಕೂಗಲಾಗಿದೆ. ಈ ಬಗ್ಗೆ ಪೊಲೀಸ್ ಅಧಿಕಾರಿಯೇ ದೂರು ನೀಡಿದ್ದಾರೆ. ಶಿರಸಿಯಲ್ಲೂ (Sirsi) ಹಸಿರು ಬಾವುಟ ಹಾರಾಡಿದೆ ಎಂದು ಹೇಳಿದರು.
ರಾತ್ರಿ ಬೆದರಿಕೆ ಕರೆ

Post a Comment