HD Kumaraswamy: ನನಗೂ ಫ್ರೀ, ನಿನಗೂ ಫ್ರೀ ಎಂದ ಮುಖ್ಯಮಂತ್ರಿಗಳೇ ಗ್ಯಾರಂಟಿ ಬಗ್ಗೆ ಈಗೇಕೆ ಮೌನ? ಎಚ್‌ಡಿ ಕುಮಾರಸ್ವಾಮಿ


 ಎಚ್ ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ

 ನನಗೂ ಫ್ರೀ, ನಿನಗೂ ಫ್ರೀ, ಸರ್ವರಿಗೂ ಫ್ರೀ ಎಂದ ಮುಖ್ಯಮಂತ್ರಿಗಳೇ ಈಗ ಗ್ಯಾರಂಟಿಗಳ ಬಗ್ಗೆ ದಿವ್ಯಮೌನವೇಕೆ? ಎಂದು ಕಾಲೆಳೆದಿರುವ ಎಚ್‌ಡಿಕೆ, ಕಾಂಗ್ರೆಸ್‌ನವರ ಅಕ್ಕಪಕ್ಕದವರ ಹೇಳಿಕೆಗಳನ್ನು ಜನರು ನಂಬುತ್ತಿಲ್ಲ. ಗ್ಯಾರಂಟಿ ಯೋಜನೆಗಳ ಬಗ್ಗೆ ಮುಖ್ಯಮಂತ್ರಿಗಳೇ ಜನರಿಗೆ ನೇರವಾಗಿ ಹೇಳಲಿ, ಜನರಲ್ಲಿ ವಿಶ್ವಾಸ ಮೂಡಿಸಲಿ ಎಂದು ಆಗ್ರಹಿಸಿದರು.ಬೆಂಗಳೂರು: ಕಾಂಗ್ರೆಸ್‌ಗೆ 135 ಸೀಟು ಕೊಟ್ಟ ಜನತೆಯ 'ಗ್ಯಾರಂಟಿ ಬೇಡಿಕೆ'ಯಲ್ಲಿ ನ್ಯಾಯವಿದೆ. 5 ಗ್ಯಾರಂಟಿ ಜಾರಿ ಕಾಂಗ್ರೆಸ್‌ ಸರಕಾರದ ಜವಾಬ್ದಾರಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ. ಈ ಸಂಬಂದ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗುವುದಕ್ಕೆ ಮುನ್ನ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (Dk Shivakumar) ಅವರೇ ಸಹಿ ಮಾಡಿಕೊಟ್ಟ ಕಾರ್ಡುಗಳು ಜನರ ಬಳಿ ಇವೆ. ಆ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.ದಿನನಿತ್ಯವೂ ಗ್ಯಾರಂಟಿಗಳ ಬಗ್ಗೆ ಜನರಲ್ಲಿ ನಿರೀಕ್ಷೆಯೂ ಮೇರೆ ಮೀರುತ್ತದೆ, ಆಕ್ರೋಶವೂ ಹೆಚ್ಚುತ್ತಿದೆ ಎಂದಿರುವ ಎಚ್‌ಡಿ ಕುಮಾರ ಸ್ವಾಮಿ, ಜನಾಕ್ರೋಶಕ್ಕೆ ಸಬೂಬು ಸರಿಯಲ್ಲ. ಏಕೆಂದರೆ, ನಿರೀಕ್ಷೆ ಮೂಡಿಸಿದ್ದು ಇವರೇ. ಈಗ ಷರತ್ತು ನೆಪದಲ್ಲಿ ಜನರನ್ನು ಸತಾಯಿಸುವುದು ನ್ಯಾಯವಲ್ಲ. ಗ್ಯಾರಂಟಿಗಳ ಬಗ್ಗೆ ಮಾಧ್ಯಮಗಳಲ್ಲಿ ಅಬ್ಬರಿಸಿದ ಇವರೇ, ಈಗ ಮೀನಾಮೇಷ ಎಣಿಸುತ್ತಾರೆ ಎಂದರೆ ಜನ ಒಪ್ಪುವರೇ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: MP Renukacharya: ರಾಜ್ಯದಲ್ಲಿ ಸಚಿವ ಪ್ರಿಯಾಂಕ ಖರ್ಗೆ ಸೂಪರ್ ಸಿಎಂ ಆಗಿದ್ದಾರೆ: ಎಂಪಿ ರೇಣುಕಾಚಾರ್ಯ ಆರೋಪನನಗೂ ಫ್ರೀ, ನಿನಗೂ ಫ್ರೀ, ಸರ್ವರಿಗೂ ಫ್ರೀ ಎಂದ ಮುಖ್ಯಮಂತ್ರಿಗಳೇ ಈಗ ಗ್ಯಾರಂಟಿಗಳ ಬಗ್ಗೆ ದಿವ್ಯಮೌನವೇಕೆ? ಎಂದು ಕಾಲೆಳೆದಿರುವ ಎಚ್‌ಡಿಕೆ, ಕಾಂಗ್ರೆಸ್‌ನವರ ಅಕ್ಕಪಕ್ಕದವರ ಹೇಳಿಕೆಗಳನ್ನು ಜನರು ನಂಬುತ್ತಿಲ್ಲ. ಗ್ಯಾರಂಟಿ ಯೋಜನೆಗಳ ಬಗ್ಗೆ ಮುಖ್ಯಮಂತ್ರಿಗಳೇ ಜನರಿಗೆ ನೇರವಾಗಿ ಹೇಳಲಿ, ಜನರಲ್ಲಿ ವಿಶ್ವಾಸ ಮೂಡಿಸಲಿ ಎಂದು ಆಗ್ರಹಿಸಿದರು.ಇನ್ನು, ಮಾಧ್ಯಮಗಳಲ್ಲಿ ಕಾಂಗ್ರೆಸ್ ಕೊಟ್ಟ 'ಗ್ಯಾರಂಟಿ ಜಾಹೀರಾತು'ಗಳು ಇನ್ನೂ ಜನಮಾನಸದಿಂದ ಮಾಸಿಲ್ಲ. ಅದೇ ರೀತಿ; ಸ್ವತಃ ಮುಖ್ಯಮಂತ್ರಿಗಳೇ ಜೂನ್ 1ಕ್ಕೆ ಜಾರಿ ಮಾಡುವ ಬಗ್ಗೆ ಜಾಹೀರಾತು ನೀಡಿ ಜನರಿಗೆ ಖಾತರಿ ಕೊಡಲಿ. ವಿಳಂಬದಿಂದ ಸರಕಾರದ ವಿಶ್ವಾಸಾರ್ಹತೆಗೆ ಪೆಟ್ಟು ಬೀಳುವುದೇ ಹೆಚ್ಚು. ಜನರಿಗೆ ಅಭದ್ರತೆಯ ಗ್ಯಾರಂಟಿ ಬೇಡವೇ ಬೇಡ ಎಂದು ಕುಮಾರಸ್ವಾಮಿ ಹೇಳಿದ್ದಾರೆ.ಇದನ್ನೂ ಓದಿ: Siddaramaiah: ಮಕ್ಕಳ ಮನಸ್ಸಿಗೆ ವಿಷ ತುಂಬುವ ಕೃತ್ಯಕ್ಕೆ ಅವಕಾಶವಿಲ್ಲ, ಪಠ್ಯ ಬದಲಾವಣೆಯ ಸುಳಿವು ನೀಡಿದ ಸಿಎಂಇನ್ನು, ಗ್ಯಾರೆಂಟಿ ಯೋಜನೆಯನ್ನು ಜಾರಿ ಮಾಡೋದು ಬಿಟ್ಟು, 'ಕೆಲ ಸಚಿವರು, ಶಾಸಕ'ರನ್ನು ನನ್ನ ಮೇಲೆ ಛೂ ಬಿಟ್ಟರೆ ಪ್ರಯೋಜನವಿಲ್ಲ. ಅಂಥ ರಾಜಕಾರಣ ಉಪಯೋಗವೂ ಇಲ್ಲ ಎಂದಿರುವ ಕುಮಾರಸ್ವಾಮಿ. ಗ್ಯಾರಂಟಿಗಳ ಬಗ್ಗೆ ಜನಕ್ಕೆ ಬೆಟ್ಟದಷ್ಟು ನಿರೀಕ್ಷೆ ಇದೆ. ಜಾರಿ ಮಾಡಿ, ಅದರ ಹೊರತಾಗಿ ಈ ಭರವಸೆಗಳೇ ಅಗಮ್ಯಗೋಚರವಾಗಿ ಗಮ್ಯವೇ ಇಲ್ಲದ ಆಡಳಿತ ಕೊಡುವುದು ಬೇಡ. ಇಷ್ಟೇ ನನ್ನ ಕಾಳಜಿ ಎಂದು ಅಭಿಪ್ರಾಯಪಟ್ಟಿದ್ದಾರೆ.

Post a Comment

Previous Post Next Post