ಸಾಂದರ್ಭಿಕ ಚಿತ್ರ
ಕಂಬಳ ಮತ್ತು ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಆ ಮೂಲಕ ಎರಡು ರಾಜ್ಯಗಳ ಸಾಂಪ್ರದಾಯಿಕ ಕ್ರೀಡೆಗೆ ಕಾನೂನಿನ ಅಂಗಳದಲ್ಲಿ ಗೆಲುವು ಸಿಕ್ಕಂತಾಗಿದೆ.ನವದೆಹಲಿ: ಕಂಬಳ (Kambala) ಮತ್ತು ಜಲ್ಲಿಕಟ್ಟು (Jallikattu) ಸ್ಪರ್ಧೆಗೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂ ಕೋರ್ಟ್ (Supreme Court) ಎತ್ತಿ ಹಿಡಿದಿದೆ. ಆ ಮೂಲಕ ಎರಡು ರಾಜ್ಯಗಳ ಸಾಂಪ್ರದಾಯಿಕ ಕ್ರೀಡೆಗೆ ಕಾನೂನಿನ ಅಂಗಳದಲ್ಲಿ ಗೆಲುವು ಸಿಕ್ಕಂತಾಗಿದೆ.ತಮಿಳುನಾಡು, ಮಹಾರಾಷ್ಟ್ರ ಮತ್ತು ಕರ್ನಾಟಕದ ಕೆಲವು ಭಾಗಗಳಲ್ಲಿ ನಡೆಯುವ ಜಲ್ಲಿಕಟ್ಟು, ಎತ್ತಿನ ಗಾಡಿ ಓಟ ಮತ್ತು ಕರ್ನಾಟಕದಲ್ಲಿ ನಡೆಯುವ ಕಂಬಳ ಕ್ರೀಡೆಗೆ ಅನುಮತಿ ನೀಡುವ ಕಾನೂನುಗಳ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಂಡಿತು. ಅಲ್ಲದೇ, ನಮ್ಮ ನಿರ್ಧಾರವು ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ನಡೆಯುವ ಕಂಬಳ ಮತ್ತು ಗೂಳಿ ಓಟಕ್ಕೂ ಅನ್ವಯಿಸುತ್ತದೆ. ಈ ಕಾನೂನನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು ಎಂದು ಹೇಳಿ ಅರ್ಜಿಯನ್ನು ಪೀಠ ವಜಾಗೊಳಿಸಿದೆ.

Post a Comment