ಕಂಠೀರವ ಸ್ಟೇಡಿಯಂನಲ್ಲಿ ಪೊಲೀಸರ ಪರಿಶೀಲನೆ
ಕಂಠೀರವ ಕ್ರೀಡಾಂಗಣ ಸುತ್ತಲೂ ಅಸಂಖ್ಯಾತ ಪೊಲೀಸರನ್ನು ನಿಯೋಜಿಸಲಾಗಿದೆ. ಇದರ ಜೊತೆಗೆ ಕಂಠೀರವ ಸ್ಟೇಡಿಯಂಗೆ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮತ್ತು ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸ್ ಗೌಡ ಸೇರಿದಂತೆ ವಿವಿಧ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaia) ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಡಿಸಿಎಂ ಆಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅಧಿಕಾರ ವಹಿಸಲಿದ್ದಾರೆ. ನಾಳೆ ಕಂಠೀರವ ಕ್ರೀಡಾಂಗಣದಲ್ಲಿ (Kanteerava Stadium) ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗ್ತಿದೆ.ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಮಂದಿ ನೂತನ ಸರ್ಕಾರದ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬರುತ್ತಿರುವುದರಿಂದ ಈಗಾಗಲೇ ಎಲ್ಲಾ ರೀತಿಯ ಸಿದ್ಧತಾ ಕ್ರಮಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಕಂಠೀರವ ಕ್ರೀಡಾಂಗಣ ಸುತ್ತಲೂ ಅಸಂಖ್ಯಾತ ಪೊಲೀಸರನ್ನು ನಿಯೋಜಿಸಲಾಗಿದೆ. ಇದರ ಜೊತೆಗೆ ಕಂಠೀರವ ಸ್ಟೇಡಿಯಂಗೆ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮತ್ತು ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸ್ ಗೌಡ ಸೇರಿದಂತೆ ವಿವಿಧ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Post a Comment