ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಸಿಎಂ
Mamata Banerjee: 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸಮಾನ ಮನಸ್ಕ ಪಕ್ಷಗಳ ವಿರೋಧ ಪಕ್ಷದ ಮೈತ್ರಿಯನ್ನು ಮುನ್ನಡೆಸುವುದಾಗಿ ಕಾಂಗ್ರೆಸ್ ಸಮರ್ಥಿಸಿಕೊಂಡಿದೆ ಅದಾಗ್ಯೂ ಟಿಎಂಸಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಸಾಧಿಸುವುದಿಲ್ಲ ಎಂದು ಹೇಳಿತ್ತು.ಬೆಂಗಳೂರು: 2023 ರ ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Election 2023) ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದೆ. ಈ ಗೆಲುವು ರಾಜಕೀಯದಲ್ಲಿ ಅನೇಕ ಬೆಳವಣಿಗೆಗಳನ್ನು ಉಂಟುಮಾಡಲಿದ್ದು ತೃಣಮೂಲ ಕಾಂಗ್ರೆಸ್ (ಟಿಎಂಸಿ-TMC) ಅಧ್ಯಕ್ಷೆ ಮಮತಾ ಬ್ಯಾನರ್ಜಿ (CM Mamata Banerjee) ಅವರು 2024 ರ ಲೋಕಸಭೆ ಚುನಾವಣೆಯಲ್ಲಿ (Loksabha Election) ಹಳೆಯ ಪಕ್ಷ ಹಾಗೂ ಎರಡರಂಗಗಳನ್ನು ಹೇಗೆ ಎದುರಿಸಲಿದ್ದಾರೆ ಎಂಬ ಚಿಂತನೆಗಳನ್ನು ಹುಟ್ಟುಹಾಕಿದೆ.ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವಿರುದ್ಧ ಒಟ್ಟಾಗಿ ಸಮರ ಸಾರಲು ಪ್ರಾದೇಶಿಕ ಪಕ್ಷಗಳ ನಾಯಕರು ಸಾಮಾನ್ಯ ವೇದಿಕೆಯನ್ನು ಹಂಚಿಕೊಳ್ಳಬೇಕು ಎಂಬ ತೀರ್ಮಾನವನ್ನು ಕೈಗೊಂಡಿದ್ದರೂ ಕಾಂಗ್ರೆಸ್ ಹಾಗೂ ಎಡಪಕ್ಷಗಳಿಂದ ಅಂತರ ಕಾಯ್ದುಕೊಂಡಿದ್ದಾರೆ.

Post a Comment