Narendra Modi: 396 ಲೋಕಸಭಾ ಕ್ಷೇತ್ರಗಳು, 51 ಸಮಾವೇಶ! 1 ತಿಂಗಳಲ್ಲಿ 1 ಲಕ್ಷ ಮನೆಗೆ ಮೋದಿ ಸಂದೇಶ ತಲುಪಿಸಲು ಬಿಜೆಪಿ ನಿರ್ಧಾರ


  ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ನೀತಿಗಳು ಮತ್ತು ಸಾಧನೆಗಳನ್ನು ಸಾರ್ವಜನಿಕರಿಗೆ ತಲುಪಿಸುವ ಕೆಲಸ ಈ ಕಾರ್ಯಕ್ರಮದಲ್ಲಿ ನಡೆಯಲಿದೆ. ಇನ್ನು ಈ ರ್ಯಾಲಿಗಳು ಮತ್ತು ಸಾರ್ವಜನಿಕ ಸಭೆಗಳಲ್ಲಿ ಬಿಜೆಪಿಯ ಮುಖ್ಯಮಂತ್ರಿಗಳು, ರಾಜ್ಯಗಳ ವಿರೋಧ ಪಕ್ಷದ ನಾಯಕರು, ಸಂಸದರು ಮತ್ತು ಶಾಸಕರನ್ನು ಸಹ ಆಹ್ವಾನಿಸಲಾಗುತ್ತದೆ.ನವದೆಹಲಿ: ಕೇಂದ್ರದ ನರೇಂದ್ರ ಮೋದಿ (Narendra Modi) ನೇತೃತ್ವದ ಬಿಜೆಪಿ (BJP) ಸರ್ಕಾರಕ್ಕೆ ಒಂಭತ್ತು ವರ್ಷ ತುಂಬುತ್ತಿದೆ. 2024ಕ್ಕೆ 10 ವರ್ಷ ತುಂಬಿ ಮತ್ತೊಮ್ಮೆ ಲೋಕಸಭಾ ಚುನಾವಣೆ (Lokasabha Election) ಎದುರಾಗಲಿದೆ. ಹೀಗಾಗಿ ಸಾರ್ವತ್ರಿಕ ಚುನಾವಣೆಗೆ ಒಂದು ವರ್ಷ ಇರುವಾಗಲೇ ದೇಶದ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಒಂದು ತಿಂಗಳ ಕಾಲ ಬೃಹತ್ ವಿಶೇಷ ಸಂಪರ್ಕ ಅಭಿಯಾನವನ್ನು ನಡೆಸಲು ಕೇಂದ್ರ ಸರ್ಕಾರ ಯೋಜನೆ ಹಾಕಿಕೊಂಡಿದೆ.ಮುಂದಿನ ವರ್ಷ ಬರಲಿರುವ ಲೋಕಸಭಾ ಚುನಾವಣೆಗೂ ಮುನ್ನ ದೇಶಾದ್ಯಂತ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಒಂದು ತಿಂಗಳ ಕಾಲ ಬೃಹತ್ ವಿಶೇಷ ಸಂಪರ್ಕ ಅಭಿಯಾನವನ್ನು ನಡೆಸಲು ಬಿಜೆಪಿ ಮುಂದಾಗಿದ್ದು, ಇದೇ ಮೇ 30ರಿಂದ ಆರಂಭಗೊಂಡು ಜೂನ್ 30ರ ತನಕ ಈ ಕಾರ್ಯಕ್ರಮ ನಡೆಯಲಿದೆ. ಮೇ 30 ರಂದು ಬೃಹತ್ ರ್ಯಾಲಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿದ್ದು, ಮರುದಿನ ಮೇ 31ರಂದು ಎರಡನೇ ರ್ಯಾಲಿಯಲ್ಲೂ ನರೇಂದ್ರ ಮೋದಿ ಭಾಗಿಯಾಗಲಿದ್ದು, ಒಂದು ತಿಂಗಳ ಕಾಲ ನಡೆಯುವ ಒಟ್ಟು 51 ರ್ಯಾಲಿಗಳಲ್ಲಿ ಬಿಜೆಪಿಯ ಬೇರೆ ಬೇರೆ ಹಿರಿಯ ನಾಯಕರು ವಿವಿಧ ಭಾಗಗಳಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

Post a Comment

Previous Post Next Post