New Parliament Building ಪ್ರಧಾನಿ ಮೋದಿ ಉದ್ಘಾಟಿಸಿದ್ದಕ್ಕೆ ಸಂತೋಷವಿದೆ -ರಾಷ್ಟ್ರಪತಿ ದ್ರೌಪದಿ ಮುರ್ಮು


 ರಾಷ್ಟ್ರಪತಿ ದ್ರೌಪದಿ ಮುರ್ಮು

ನಿನ್ನೆಯ ಸಮಾರಂಭಕ್ಕೆ ಗೈರು ಹಾಜರಾಗಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು, ತಮ್ಮ ಸಂದೇಶ ಕಳಿಸಿದ್ದರು. ಲೋಕಸಭೆಯ ಸಭಾಂಗಣದಲ್ಲಿ ರಾಜ್ಯಸಭಾ ಉಪ ಸಭಾಪತಿ ಹರಿವಂಶ್ ಅವರು ರಾಷ್ಟ್ರಪತಿಗಳ ಸಂದೇಶವನ್ನು ಓದಿದರು.ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಿನ್ನೆ ಹೊಸ ಸಂಸತ್ ಭವನವನ್ನು (new Parliament building) ಉದ್ಘಾಟನೆ ಮಾಡಿರುವುದು ನನಗೆ ಖುಷಿ ಕೊಟ್ಟಿದೆ ಅಂತ ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಹೇಳಿದ್ದಾರೆ. ಸಂಸತ್ತಿನ ನಂಬಿಕೆಯ ಸಂಕೇತವಾಗಿರುವ ಹೊಸ ಸಂಸತ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದಾರೆ. ಇದು ನನಗೆ ಸಂತಸ ಮತ್ತು ತೃಪ್ತಿ ನೀಡಿದೆ ಅಂತ ರಾಷ್ಟ್ರಪತಿ ತಿಳಿಸಿದ್ದಾರೆ. ನಿನ್ನೆಯ ಸಮಾರಂಭಕ್ಕೆ ಗೈರು ಹಾಜರಾಗಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು, ತಮ್ಮ ಸಂದೇಶ ಕಳಿಸಿದ್ದರು. ಲೋಕಸಭೆಯ ಸಭಾಂಗಣದಲ್ಲಿ ರಾಜ್ಯಸಭಾ ಉಪ ಸಭಾಪತಿ (Rajya Sabha Deputy Speaker) ಹರಿವಂಶ್ (Harivansh) ಅವರು ರಾಷ್ಟ್ರಪತಿಗಳ ಸಂದೇಶವನ್ನು ಓದಿದರು.ರಾಷ್ಟ್ರಪತಿ ದ್ರೌಪದಿ ಮುರ್ಮು ಸಂದೇಶ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮ್ಮ ಸಂದೇಶದಲ್ಲಿ, ಹೊಸ ಸಂಸತ್ ಭವನವನ್ನು ಭಾರತದ ಪ್ರಜಾಪ್ರಭುತ್ವದ ಪಯಣದಲ್ಲಿ ಪ್ರಮುಖ ಮೈಲಿಗಲ್ಲುಎಂದು ಬಣ್ಣಿಸಿದ್ದಾರೆ. ನಮ್ಮ ಸಂಸತ್ತು ದೇಶಕ್ಕೆ ಮಾರ್ಗದರ್ಶಕ ಬೆಳಕು ಮತ್ತು ಹೊಸ ಸಂಸತ್ ಕಟ್ಟಡವು ನಮ್ಮ ಪ್ರಜಾಪ್ರಭುತ್ವದ ಪಯಣದಲ್ಲಿ ಪ್ರಮುಖ ಮೈಲಿಗಲ್ಲು ಅಂತ ಶ್ಲಾಘಿಸಿದ್ದಾರೆ. ಸಂಸತ್ತಿನ ಮೇಲಿನ ನಂಬಿಕೆಯನ್ನು ಸಂಕೇತಿಸುವ ಪ್ರಧಾನಿಯವರು ಹೊಸ ಸಂಸತ್ತನ್ನು ಉದ್ಘಾಟಿಸುತ್ತಿದ್ದಾರೆ ಎಂದು ನನಗೆ ತುಂಬಾ ತೃಪ್ತಿ ಇದೆ ಎಂದು ರಾಷ್ಟ್ರಪತಿಗಳು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.2020ರಲ್ಲಿ ಪ್ರಧಾನಿಯಿಂದ ಶಂಕು ಸ್ಥಾಪನರಾಷ್ಟ್ರರಾಜಧಾನಿ ಪ್ರದೇಶ ಮರು ನಿರ್ಮಾಣ ಯೋಜನೆ (ಸೆಂಟ್ರಲ್ ವಿಸ್ತಾ ಪ್ರಾಜೆಕ್ಟ್) ಯೋಜನೆಯ ಅಡಿಯಲ್ಲಿ ಸಂಸತ್ ಭವನವನ್ನು ನಿರ್ಮಾಣ ಮಾಡಲಾಗಿದೆ. ಡಿಸೆಂಬರ್ 2020 ರಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಸಂಸತ್ತಿನ ಕಟ್ಟಡಕ್ಕೆ ಶಂಕುಸ್ಥಾಪನೆ ಮಾಡಿದ್ದರು.ಇದನ್ನೂ ಓದಿ: New Parliament Buildingನಲ್ಲಿ ಫೋಸ್‌ ನೀಡಿದ ಹೇಮ ಮಾಲಿನಿ! ಫೋಟೋಸ್​ ವೈರಲ್​971 ಕೋಟಿ ರೂಪಾಯಿಗಳ ವೆಚ್ಚದ ಅದ್ಧೂರಿ ಕಟ್ಟಡ64,500 ಚದರ ಮೀಟರ್ ಪ್ರದೇಶದಲ್ಲಿ ತ್ರಿಭುಜಾಕೃತಿಯ ಸಂಸತ್ ಆವರಣ ನಿರ್ಮಾಣ ಆಗಿದೆ. ಈ ಯೋಜನೆಗೆ 971 ಕೋಟಿ ರು. ವೆಚ್ಚವಾಗಿದೆ ಎಂದು ಹೇಳಲಾಗುತ್ತಿದೆ. ಹಳೆಯ ಸಂಸತ್ ಭವನದ ಪಕ್ಕದಲ್ಲೇ ಹೊಸ ಸಂಸತ್ ಭವನವನ್ನ ನಿರ್ಮಾಣ ಮಾಡಲಾಗಿದೆ. ಈ ಹೊಸ ಕಟ್ಟಡವು 150 ವರ್ಷ ಬಾಳಿಕೆ ಬರಲಿದೆ ಎಂದು ತಜ್ಞರು ಅಂದಾಜಿಸಿದ್ದಾರೆ. ಭೂಕಂಪ ಆದರೂ ಯಾವುದೇ ರೀತಿ ಹಾನಿ ಆಗದ ರೀತಿಯಲ್ಲಿ ಈ ಕಟ್ಟಡ ವಿನ್ಯಾಸ ಮಾಡಲಾಗಿದೆ. ಲೋಕಸಭೆ, ರಾಜ್ಯಸಭೆ ಸದಸ್ಯರಿಗಾಗಿ ಬೃಹತ್ ಕಟ್ಟಡಭವಿಷ್ಯದಲ್ಲಿ ಸಂಸತ್ ಸದಸ್ಯರ ಸಂಖ್ಯೆಯನ್ನು ಗಮನದಲ್ಲಿ ಇಟ್ಟುಕೊಂಡು ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ. ಈ ಕಟ್ಟಡದಲ್ಲಿ 1224 ಸಂಸದರು ಒಟ್ಟಿಗೆ ಕುಳಿತು ಕೊಳ್ಳಬಹುದಾಗಿದೆ. ಲೋಕಸಭೆಯಲ್ಲಿ 888 ಹಾಗೂ ರಾಜ್ಯಸಭೆಯಲ್ಲಿ 384 ಆಸನ ವ್ಯವಸ್ಥೆ ಇರಲಿದೆ. ಸದ್ಯ ಲೋಕಸಭೆಯಲ್ಲಿ 543 ಹಾಗೂ ರಾಜ್ಯಸಭೆಯಲ್ಲಿ 245 ಸಂಸದರಿಗೆ ಆಸನ ವ್ಯವಸ್ಥೆ ಇದೆ.

Post a Comment

Previous Post Next Post