Police Commissioner: ಪೊಲೀಸ್‌ ಇಲಾಖೆಗೆ ಮೇಜರ್ ಸರ್ಜರಿ, ಬೆಂಗಳೂರು ಕಮಿಷನರ್ ಆಗಿ ದಯಾನಂದ್ ನೇಮಕ


  ದಯಾನಂದ, ಹಿರಿಯ ಪೊಲೀಸ್ ಅಧಿಕಾರಿ ಸಾಮಾನ್ಯವಾಗಿ ನಗರ ಪೊಲೀಸ್‌ ಆಯುಕ್ತರಾಗಿ ಒಂದು ವರ್ಷ ಪೂರೈಸಿದ ಬಳಿಕ ಬದಲಾವಣೆ ಮಾಡುವ ಅಲಿಖಿತ ನಿಯಮ ರಾಜ್ಯದಲ್ಲಿ ರೂಢಿಯಲ್ಲಿದೆ. ಹೀಗಾಗಿ, ಬೆಂಗಳೂರಿಗೆ ಹೊಸ ಕಮಿಷನರ್‌ ನೇಮಕಗೊಂಡಿದ್ದಾರೆ. ಗುಪ್ತಚರ ದಳದ ಎಡಿಜಿಪಿ ಆಗಿದ್ದ ದಯಾನಂದ್‌ ಅವರನ್ನು ಸರಕಾರ ಕಮಿಷನರ್‌ ಆಗಿ ನೇಮಿಸಿದೆ.ಬೆಂಗಳೂರು: ರಾಜ್ಯದಲ್ಲಿ ಹೊಸ ಸರ್ಕಾರ ಆಡಳಿತಕ್ಕೆ ಬರುತ್ತಿದ್ದಂತೆ ಪೊಲೀಸ್ ಇಲಾಖೆಯಲ್ಲೂ (Karnataka Police) ಕೂಡ ಮೇಜರ್ ಸರ್ಜರಿ ಮಾಡಲಾಗಿದೆ. ಬೃಹತ್ ಬೆಂಗಳೂರಿನ ನೂತನ ಪೊಲೀಸ್ ಕಮಿಷನರ್ (Police Commissioner) ಆಗಿ ಹಿರಿಯ ಪೊಲೀಸ್ ಅಧಿಕಾರಿ ಬಿ ದಯಾನಂದ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಈಗಾಗಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿರುವ ಸಿಎಚ್‌ ಪ್ರತಾಪ್ ರೆಡ್ಡಿ ಅವರು ಒಂದು ವರ್ಷ ಅವಧಿ ಪೂರೈಸಿದ್ದು, ಪ್ರತಾಪ್ ರೆಡ್ಡಿ, ವರ್ಷ ಪೂರೈಸಿದ ಬೆನ್ನಲ್ಲೇ ಅವರನ್ನು ಅವರನ್ನು ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಆಗಿ ವರ್ಗಾವಣೆ ಮಾಡಿ ಅವರ ಜಾಗಕ್ಕೆ ಗುಪ್ತಚರ ದಳದ ಎಡಿಜಿಪಿ ಆಗಿದ್ದ ದಯಾನಂದ್‌ ಅವರನ್ನು ನೇಮಕ ಮಾಡಲಾಗಿದೆ.ಇತ್ತ ಕೆ.ವಿ ಶರತ್ ಚಂದ್ರ ಅವರನ್ನು ಗುಪ್ತಚರ ಇಲಾಖೆ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದ್ದು, ಡಾ.ಎಂ ಎ ಸಲೀಂ ಅವರನ್ನು ಸಿಐಡಿ ಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ.ದಯಾನಂದ್ ಅವರ ಹಿನ್ನೆಲೆ ಏನು?ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ನೇಮಕಗೊಂಡಿರುವ ದಯಾನಂದ್ ಅವರು ಹಲವು ಜವಾಬ್ದಾರಿಗಳನ್ನು ನಿಭಾಯಿಸಿದ್ದು, ಈ ಹಿಂದೆ ಗುಪ್ತಚರ ಇಲಾಖೆ ಎಡಿಜಿಪಿ ಆಗಿದ್ದರು. ಕರ್ನಾಟಕದವರೇ ಆಗಿರುವ ಬಿ ದಯಾನಂದ್, 1994ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದು, ಮೂಲತಃ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನವರಾಗಿದ್ದಾರೆ. ಈ ಹಿಂದೆ ಬೆಂಗಳೂರು ಸಂಚಾರ ವಿಭಾಗದ ಹೆಚ್ಚುವರಿ ಆಯುಕ್ತರಾಗಿ, ಅಪರಾಧ ವಿಭಾಗದ ಹೆಚ್ಚುವರಿ ಆಯುಕ್ತರಾಗಿ, ಮೈಸೂರು ಪೊಲೀಸ್ ಕಮಿಷನರ್ ಹುದ್ದೆಗಳನ್ನು ಸಮರ್ಥವಾಗಿ ನಿರ್ವಹಿಸಿದ್ದರು. ಇದೀಗ ಬೆಂಗಳೂರು ನಗರದ ಪೊಲೀಸ್ ಕಮಿಷನರ್ ಬದಲಾವಣೆ ಸೇರಿದಂತೆ ಕೆಲವೊಂದು ಪ್ರಮುಖ ಹುದ್ದೆಗಳಲ್ಲಿ ಅಧಿಕಾರಿಗಳ ಬದಲಾವಣೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರ ಸಾಕಷ್ಟು ಕುತೂಹಲ ಮೂಡಿಸಿದೆ.

Post a Comment

Previous Post Next Post