ಸುಧಾಕರ್-ಸಿದ್ದರಾಮಯ್ಯಸಮ್ಮಿಶ್ರ ಸರ್ಕಾರದಲ್ಲಿ ನಾವು ರಾಜೀನಾಮೆ ನೀಡುವ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ?’ ಎಂದು ಡಾ ಕೆ ಸುಧಾಕರ್ ತನ್ನ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.ಬೆಂಗಳೂರು: ನೂತನವಾಗಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಮಧ್ಯೆ ಬಿರುಸಿನ ಕಿತ್ತಾಟ ನಡೆಯುತ್ತಿರುವ ಮಧ್ಯೆಯೇ ಒಂದು ಕಾಲದ ಸಿದ್ದರಾಮಯ್ಯ ಆಪ್ತ, ಮಾಜಿ ಸಚಿವ ಡಾ ಕೆ ಸುಧಾಕರ್ (Dr K Sudhakar) ಅವರು ಹೊಸದೊಂದು ಬಾಂಬ್ ಎಸೆದು ಕಾಂಗ್ರೆಸ್‌ನ ಜಗಳದ ಬೆಂಕಿಯಲ್ಲಿ ಬಿಸಿ ಕಾಯಿಸಿಕೊಳ್ಳಲು ಪ್ರಯತ್ನಿಸಿದ್ದಾರೆ.ಮುಖ್ಯಮಂತ್ರಿ ಸ್ಥಾನಕ್ಕಾಗಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಭಾರೀ ಪೈಪೋಟಿ ನಡೆಯುತ್ತಿರುವ ಹೊತ್ತಿನಲ್ಲೇ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ ಮಾಜಿ ಸಚಿವ ಡಾ.ಕೆ ಸುಧಾಕರ್, ‘2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು’ ಎಂದು ಸುಧಾಕರ್ ಬರೆದುಕೊಂಡಿದ್ದಾರೆ.

Post a Comment