Wrestlers Arrested: ನೂತನ ಸಂಸತ್ ಭವನದ ಮುಂದೆ ಪ್ರತಿಭಟನೆಗೆ ಮುಂದಾದ ಕುಸ್ತಿಪಟುಗಳನ್ನು ಬಂಧಿಸಿದ ಪೊಲೀಸರು!


  ಪ್ರತಿಭಟನಾ ನಿರತ ಕುಸ್ತಿಪಟುಗಳ ಬಂಧನ

ನಿನ್ನೆ ನೂತನ ಸಂಸತ್ ಕಟ್ಟಡದ ಎದುರು ಮಹಿಳಾ ಮಹಾ ಪಂಚಾಯತ್ ನಡೆಸಲು ಕುಸ್ತಿಪಟುಗಳು ನಿರ್ಧರಿಸಿದ್ದರು. ಪ್ರತಿಭಟನಾ ಮೆರವಣಿಗೆಗೆ ಮುಂದಾದಾಗ ಕ್ಯಾತೆ ತೆಗೆದ ದೆಹಲಿ ಪೊಲೀಸರು ಮಾರ್ಗದುದ್ದಕ್ಕೂ ಬ್ಯಾರಿಕೇಡ್‌ಗಳನ್ನು ಹಾಕಿ ಅಡ್ಡಗಟ್ಟಿದ್ದಾರೆ.ನವದೆಹಲಿ: ಮಹಿಳಾ ಕುಸ್ತಿಪಟುಗಳ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ವಿರುದ್ಧ ಕಳೆದ ಹಲವು ವಾರಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ (Protest) ನಡೆಯುತ್ತಿದೆ. ರಾಷ್ಟ್ರಕ್ಕೆ ಅಥ್ಲೆಟಿಕ್ಸ್‌ನಲ್ಲಿ ಪದಕ ಗೆದ್ದು ಹೆಮ್ಮೆ ಮೂಡಿಸಿದ್ದ ಕ್ರಿಡಾಪಟುಗಳು ಕುಸ್ತಿ ಫೆಡರೇಶನ್‌ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವೊಡ್ಡಿ (Wrestlers Arrested) ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಈ ಮಧ್ಯೆ ನಿನ್ನೆ ಪ್ರತಿಭಟನೆ ನಡೆಸುತ್ತಿದ್ದ ಕ್ರೀಡಾಪಟುಗಳನ್ನು ಬಂಧಿಸಿರುವ ಪೊಲೀಸರು ಅವರ ವಿರುದ್ಧ ಎಫ್‌ಐಆರ್ (FIR) ದಾಖಲಿಸಿದ್ದಾರೆ.ಹೌದು.. ಕಳೆದ ಹಲವು ವಾರಗಳಿಂದ ದೆಹಲಿಯ ಜಂತರ್‌ ಮಂತರ್‌ನಲ್ಲಿ ರಾಷ್ಟ್ರದ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದು, ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಬ್ರಿಜ್‌ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತಿದ್ದಾರೆ. ಆದರೆ ಕೇಂಕುಸ್ದ್ರತಿ ಸರ್ಕಾರ ಸಂಸದನ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಹೀಗಾಗಿ ಪ್ರತಿಭಟನೆಯನ್ನು ಮುಂದುವರಿಸಿರುವ ಕುಸ್ತಿಪಟುಗಳು ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ.ಇದನ್ನೂ ಓದಿ: PT Usha: ಜಂತರ್ ಮಂತರ್‌ನಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಕೊನೆಗೂ ಭೇಟಿಯಾದ ಪಿಟಿ ಉಷಾಈವರೆಗೆ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳು ನಿನ್ನೆ ನೂತನ ಸಂಸತ್ ಭವನದ ಮುಂದೆ ಪ್ರತಿಭಟನೆಗೆ ಮುಂದಾಗಿದ್ದರು, ಈ ವೇಳೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿನೇಶ್​ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಸೇರಿದಂತೆ ಕೆಲವು ಕುಸ್ತಿಪಟುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ಭಾಗವಾಗಿ ಅಥ್ಲೀಟ್‌ಗಳು ಮಹಿಳಾ ಸಮ್ಮಾನ್ ಮಹಾಪಂಚಾಯತ್ ಆಯೋಜಿಸಿದ್ದರು.ಇದನ್ನೂ ಓದಿ: Mann Ki Baat: 101ನೇ ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು? ಇಲ್ಲಿದೆ ಹೈಲೈಟ್ಸ್ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳನ್ನು ಅಲ್ಲಿಂದ ತೆರವುಗೊಳಿಸಲು ಪೊಲೀಸರು ಪ್ರತಿಭಟನಾಕಾರರ ಟೆಂಟ್‌ಗಳನ್ನು ಕಿತ್ತುಹಾಕಿದ್ದು, ಹೀಗಾಗಿ ನಿನ್ನೆ ನೂತನ ಸಂಸತ್ ಕಟ್ಟಡದ ಎದುರು ಮಹಿಳಾ ಮಹಾ ಪಂಚಾಯತ್ ನಡೆಸಲು ಕುಸ್ತಿಪಟುಗಳು ನಿರ್ಧರಿಸಿದ್ದರು. ಪ್ರತಿಭಟನಾ ಮೆರವಣಿಗೆಗೆ ಮುಂದಾದಾಗ ಕ್ಯಾತೆ ತೆಗೆದ ದೆಹಲಿ ಪೊಲೀಸರು ಮಾರ್ಗದುದ್ದಕ್ಕೂ ಬ್ಯಾರಿಕೇಡ್‌ಗಳನ್ನು ಹಾಕಿ ಅಡ್ಡಗಟ್ಟಿದ್ದಾರೆ.ಪ್ರತಿಭಟನಾ ನಿರತ ಕುಸ್ತಿಗಳನ್ನು ಪೊಲೀಸರು ರಸ್ತೆಯಲ್ಲಿ ಎಳೆದಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋ, ವಿಡಿಯೋಗಳು ವೈರಲ್ ಆಗಿದೆ. ಕ್ರೀಡೆಯಲ್ಲಿ ದೇಶಕ್ಕೆ ಚಿನ್ನದ ಪದಕ ಗೆದ್ದು ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಘನತೆ ಎತ್ತಿಹಿಡಿದ ಕ್ರೀಡಾಪಟುಗಳ ಜೊತೆ ಹೀನಾಯವಾಗಿ ವರ್ತಿಸಿರುವುದರ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ.

Post a Comment

Previous Post Next Post