ಸಚಿವ ಕೆ ವೆಂಕಟೇಶ್/ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಕರ್ನಾಟಕದಲ್ಲಿ ಹೊಸ ಕಾಯಿದೆ ತಂದಿಲ್ಲ. ಇರುವ ಕಾನೂನಿಗೆ ಬಲ ತುಂಬಿದ್ದೇವೆ. ಈ ರೀತಿಯ ಹೇಳಿಕೆ ನೀಡುವ ಮೊದಲು ಸಚಿವರು ಆಲೋಚನೆ ಮಾಡಬೇಕು ಎಂದು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.ಬೆಂಗಳೂರು: ಹಸುಗಳನ್ನು (Cow) ಏಕೆ ಕಡಿಯಬಾರದು ಎಂದು ಪ್ರಶ್ನಿಸಿರುವ ಪಶು ಸಂಗೋಪನಾ ಸಚಿವ ಕೆ ವೆಂಕಟೇಶ್ (K Venkatesh) ಅವರ ಹೇಳಿಕೆಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bomami) ಕಿಡಿಕಾರಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ, ಸಚಿವ ಕೆ ವೆಂಕಟೇಶ್ ಅವರು ಯಾರ ಓಲೈಕೆಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ, ತಮಗೆ ನೀಡಿರುವ ಖಾತೆಯನ್ನು ಬದಲಾಯಿಸಲಿ ಎಂದೋ, ಹೈ ಕಮಾಂಡ್ (High Command) ಮೆಚ್ಚಿಸಲೋ? ಎಂದು ಪ್ರಶ್ನಿಸಿದ್ದಾರೆ.ಮಾಜಿ ಸಿಎಂ ಬೊಮ್ಮಾಯಿ ಅವರು ಟ್ವೀಟ್ನಲ್ಲಿ ಏನಿದೆ? ಗೋವುಗಳನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿರುವ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರ ಹೇಳಿಕೆ ಆಶ್ಚರ್ಯ ತಂದಿದ್ದು, ಅವರ ಹೇಳಿಕೆ ಖಂಡನೀಯ ಗೋವಿನೊಂದಿಗೆ ಭಾರತೀಯರಾದ ನಾವು ಭಾವನಾತ್ಮಕ ಸಂಬಂಧ ಹೊಂದಿದ್ದು, ತಾಯಿ ಸ್ಥಾನದಲ್ಲಿ ಗೋವನ್ನು ಪೂಜಿಸುತ್ತೇವೆ. ಸಚಿವ ಕೆ. ವೆಂಕಟೇಶ್ ಅವರು ಯಾರ ಓಲೈಕೆಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ, ತಮಗೆ ನೀಡಿರುವ ಖಾತೆಯನ್ನು ಬದಲಾಯಿಸಲಿ ಎಂದೋ, ಹೈ ಕಮಾಂಡ್ ಮೆಚ್ಚಿಸಲೋ ಎಂದು ಪ್ರಶ್ನಿಸಿದ್ದಾರೆ.ಇದನ್ನೂ ಓದಿ: Siddaramaiah Fans: ಸಿದ್ದರಾಮಯ್ಯ, ಎಚ್‌ಡಿಕೆ ಬಗ್ಗೆ ಅವಾಚ್ಯವಾಗಿ ನಿಂದನೆ; ಕಪಾಳಮೋಕ್ಷ ಮಾಡಿದ ಅಭಿಮಾನಿಗಳು!ಅಲ್ಲದೇ, ಗೋಹತ್ಯೆ ನಿಷೇಧ ಪ್ರಥಮವಾಗಿ ಪ್ರತಿಪಾದಿಸಿದ್ದು ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿಯವರು. ಪೂಜ್ಯ ಮಹಾತ್ಮಾ ಗಾಂಧಿ ಪ್ರತಿಪಾದಿಸಿದ ಗೋಹತ್ಯೆ ನಿಷೇಧವನ್ನು 1960 ರ ದಶಕದಲ್ಲಿ ಹಲವಾರು ರಾಜ್ಯಗಳಲ್ಲಿ ಕಾನೂನು ತರಲಾಗಿದೆ. ಸಚಿವರ ಹೇಳಿಕೆಯಿಂದ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಗೋವುಗಳ ಕಳ್ಳ ಸಾಗಾಣಿಕೆ, ಸಾಮೂಹಿಕ ಗೋ ಹತ್ಯೆ ಮಾಡುವ ಕಾರ್ಖಾನೆಗಳು ತಲೆ ಎತ್ತಲಿವೆ.ನಮ್ಮ ಸರ್ಕಾರದ ಅವಧಿಯಲ್ಲಿ ಕಾನೂನು ಬಾಹಿರ ಕಸಾಯಿ ಖಾನೆಗಳನ್ನು ತಡೆಗಟ್ಟಲು ಕಾನೂನು ತರಲಾಗಿದೆ. ಕರ್ನಾಟಕದಲ್ಲಿ ಹೊಸ ಕಾಯಿದೆ ತಂದಿಲ್ಲ. ಇರುವ ಕಾನೂನಿಗೆ ಬಲ ತುಂಬಿದ್ದೇವೆ. ಈ ರೀತಿಯ ಹೇಳಿಕೆ ನೀಡುವ ಮೊದಲು ಸಚಿವರು ಆಲೋಚನೆ ಮಾಡಬೇಕು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಸಚಿವರಿಗೆ ಸೂಕ್ತ ಸಲಹೆ ನೀಡುವುದು ಅವಶ್ಯಕತೆ ಇದೆ ಎಂದು ಮಾಜಿ ಸಿಎಂ ತಿಳಿಸಿದ್ದಾರೆ.ಗೋವುಗಳನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿರುವ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರ ಹೇಳಿಕೆ ಆಶ್ಚರ್ಯ ತಂದಿದ್ದು, ಅವರ ಹೇಳಿಕೆ ಖಂಡನೀಯ ಗೋವಿನೊಂದಿಗೆ ಭಾರತೀಯರಾದ ನಾವು ಭಾವನಾತ್ಮಕ ಸಂಬಂಧ ಹೊಂದಿದ್ದು, ತಾಯಿ ಸ್ಥಾನದಲ್ಲಿ ಗೋವನ್ನು ಪೂಜಿಸುತ್ತೇವೆ. ಎಮ್ಮೆ-ಕೋಣಗಳಂತೆ ಹಸುಗಳನ್ನು ಏಕೆ ಕಡಿಯಬಾರದು?ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಪಶುಸಂಗೋಪನ ಸಚಿವ ಕೆ. ವೆಂಕಟೇಶ್, ಗೋ ಹತ್ಯೆ ನಿಷೇಧ ಕಾಯ್ದೆ ರದ್ದು ಪಡಿಸುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದರು. ಎಮ್ಮೆ, ಕೋಣಗಳನ್ನು ಕಡಿಯಬಹುದು ಅಂತಾದರೆ ಹಸುಗಳನ್ನೂ ಏಕೆ ಕಡಿಯಬಾರದು ಅಂತ ಪ್ರಶ್ನಿಸಿದ್ದಾರೆ.ನಮ್ಮ ಮನೆಯಲ್ಲೂ ಮೂರ್ನಾಲ್ಕು ಹಸುಗಳಿವೆ ಎಂದ ಸಚಿವರು, ಈ ಪೈಕಿ ಒಂದು ಹಸು ಸತ್ತಾಗ ಗುಂಡಿ ತೋಡಿ ಹೂಳಲು ತುಂಬಾ ಕಷ್ಟ ಪಡಬೇಕಾಯಿತು ಅಂತ ಹೇಳಿದ್ದರು. ಸತ್ತ ಹಸುವಿನ ಮೃತದೇಹ ಎತ್ತಲು ನಮಗ್ಯಾರಿಗೂ ಸಾಧ್ಯವಾಗಲಿಲ್ಲ. ಕೊನೆಗೆ ಜೆಸಿಬಿ ತರಿಸಿ ಮೃತ ಹಸುವಿನ ದೇಹವನ್ನು ಎತ್ತಿಸಿ, ಗುಂಡಿತೋಡಿಸಿ ಹೂಳಬೇಕಾದ ಪರಿಸ್ಥಿತಿ ನಿರ್ಮಾಣವಾಯ್ತು ಅಂತ ತಮ್ಮ ಮನೆಯ ಕಥೆ ಹೇಳಿದ್ದರು.

Post a Comment