ಲೋಕಾಯುಕ್ತ ದಾಳಿ
ಅಜಿತ್ ರೈ ಸಹೋದರ ಸೇರಿ ನಾಲ್ವರಿಗೆ ನೊಟೀಸ್ ನೀಡಲಾಗಿದ್ದು, ಇಂದು ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗಲು ಆದೇಶಿಸಲಾಗಿದೆ. ಬೆಂಗಳೂರು(ಜು.30): ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ಕಳೆದೆರಡು ದಿನಗಳ ಹಿಂದೆ ಲೋಕಾಯುಕ್ತ ಪೊಲೀಸರು ಹಲವೆಡೆ ದಾಳಿ ಮಾಡಿದ್ದರು. ಈ ದಾಳಿ ಬಳಿಕ ಪೊಲೀಸರು ನಿನ್ನೆ ಕೆಆರ್ ಪುರದ ತಹಶೀಲ್ದಾರ್ ಅಜಿತ್ ರೈ ಅವರನ್ನು ಬಂಧಿಸಿದ್ದರು. ಸದ್ಯ ಈ ಬೆಳವಣಿಗೆ ಬೆನ್ನಲ್ಲೇ ಅಜಿತ್ ರೈ ಸಹೋದರ ಸೇರಿ ನಾಲ್ವರಿಗೆ ನೊಟೀಸ್ ನೀಡಲಾಗಿದ್ದು, ಇಂದು ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗಲು ಆದೇಶಿಸಲಾಗಿದೆ.ಹೌದು ಕಳೆದ ಬುಧವಾರದಂದು ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಪೊಲೀಸರು ತಹಶೀಲ್ದಾರ್ ಅಜಿತ್ ರೈ ಸಹಕಾರನಗರದ ನಿವಾಸ ಸೇರಿ 12 ಕಡೆ ದಾಳಿ ಮಾಡಿದ್ದರು. ಈ ವೇಳೆ 40 ಲಕ್ಷ ರೂಪಾಯಿ ನಗದು, ಕೋಟ್ಯಂತರ ಭೂ ದಾಖಲಾತಿ ಪತ್ರಗಳು ಪತ್ತೆಯಾಗಿತ್ತು. ದುಬಾರಿ ಬೆಲೆಯ ಕಾರು ಖರೀದಿಸಿದ ರಶೀದಿಗಳು ದೇಶ-ವಿದೇಶಿ ಬ್ರ್ಯಾಂಡ್ನ ಮದ್ಯವೂ ಪತ್ತೆಯಾಗಿತ್ತು.ಸತತ 30 ಗಂಟೆಗಳ ಪರಿಶೀಲನೆ ವೇಳೆ ಅಕ್ರಮ ಆಸ್ತಿ ಗಳಿಕೆ ಮಾಡಿರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ತಹಸೀಲ್ದಾರ್ ಅಜಿತ್ ರೈ ಅವರನ್ನು ಪೊಲೀಸರು ಬಂಧಿಸಿದ್ದರು. ಸದ್ಯ ಈ ಬಂಧನದ ಬೆನ್ನಲ್ಲೇ ಅಜಿತ್ ಸಹೋದರ ಸಹೋದರ ಆಶಿಕ್ ರೈ, ಸ್ನೇಹಿತರಾದ ಗೌರವ್, ಹರ್ಷವರ್ಧನ್ ಸೇರಿ ನಾಲ್ವರಿಗೆ ನೊಟೀಸ್ ನೀಡಲಾಗಿದೆ.ಇಂದು ಬೆಳಗ್ಗೆ 11 ಗಂಟೆ ವೇಳೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಿ 10 ದಿನಗಳ ಕಾಲ ಅಜಿತ್ ವಶಕ್ಕೆ ಪಡೆಯಲು ಲೋಕಾಯುಕ್ತ ಪೊಲೀಸರು ಸಿದ್ದತೆ ನಡೆಸಿದ್ದಾರೆ. ಜೊತೆಗೆ ಸಹೋದರ ಹಾಗೂ ಸ್ನೇಹಿತರಿಗೂ ಡ್ರಿಲ್ ಮಾಡಲೂ ಸಿದ್ಧತೆ ನಡೆಸಿದ್ದಾರೆ. ಹಲವರ ಹೆಸರಿನಲ್ಲಿ ಬೇನಾಮಿ ಆಸ್ತಿ ಮಾಡಿರೋ ಬಗ್ಗೆಯೂ ದಾಖಲೆಗಳು ಪತ್ತೆಯಾದ ಹಿನ್ನೆಲೆ ಈ ನಾಲ್ವರಿಗೆ ನೊಟೀಸ್ ಕೊಟ್ಟು ವಿಚಾರಣೆ ನಡೆಸಲು ಲೋಕಾಯುಕ್ತ ತಂಡ ಮುಂದಾಗಿದೆ.

Post a Comment