ಮಮತಾ ಬ್ಯಾನರ್ಜಿ
ಅಪಘಾತದಲ್ಲಿ ಮೃತರ ಕುಟುಂಬಗಳಿಗೆ ಪರಿಹಾರ ಮತ್ತು ಉದ್ಯೋಗ ನೇಮಕಾತಿ ದಾಖಲೆಗಳನ್ನು ಮಮತಾ ಬ್ಯಾನರ್ಜಿ ಬುಧವಾರ ಹಸ್ತಾಂತರಿಸಲಿದ್ದಾರೆ.ಕೋಲ್ಕತ್ತಾ: ಇತ್ತೀಚೆಗೆ ಒಡಿಶಾದ (Odisha) ಬಾಲಸೋರ್ನಲ್ಲಿ ನಡೆದ ಭೀಕರ ರೈಲು ದುರಂತದಲ್ಲಿ (Train accident) 275 ಮಂದಿ ಸಾವನ್ನಪ್ಪಿದ್ದರು. ಸಾವಿರಾರು ಪ್ರಯಾಣಿಕರು ಗಾಯಗೊಂಡರೆ, ಇದರಲ್ಲಿ ಹಲವು ಮಂದಿ ಗಂಭೀರ ಗಾಯಗೊಂಡಿದ್ದರು. ಇದರಲ್ಲಿ ಪಶ್ಚಿಮ ಬಂಗಾಳದ (West Bengal) ಹಲವು ಮಂದಿ ಗಾಯಗೊಂಡಿದ್ದರು. ಇದೀಗ ದುರಂತದಲ್ಲಿ ಮೃತಪಟ್ಟ ರಾಜ್ಯದ ಸಂತ್ರಸ್ತರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ (Government) ನೀಡುವುದಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ( Mamata Banerjee) ಘೋಷಿಸಿದ್ದಾರೆ.ಇನ್ನು ಅಪಘಾತದಲ್ಲಿ ಕೈಕಾಲು ಕಳೆದುಕೊಂಡವರ ಕುಟುಂಬಸ್ಥರಲ್ಲಿ ಒಬ್ಬರಿಗೆ ಕೆಲಸ ನೀಡಲಾಗುವುದು ಎಂದು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ದೀದಿ, ರೈಲು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ನಗದು ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.ಇನ್ನು ಒಡಿಶಾದ ರೈಲು ದುರಂತದಲ್ಲಿ ಪಶ್ಚಿಮ ಬಂಗಾಳಕ್ಕೆ ಸೇರಿದ 206 ಪ್ರಯಾಣಿಕರು ಗಾಯಗೊಂಡಿದ್ದಾರೆ ಮತ್ತು ಅವರೆಲ್ಲರೂ ಒಡಿಶಾದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ 33 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಕಟಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: Crime News: ಪ್ರತಿದಿನ ಚಾಕೊಲೇಟ್, ಆಟಿಕೆ ಕೇಳುತ್ತಾಳೆ ಅಂತ ರಾಕ್ಷಸನಾದ ತಂದೆ, ಮಗಳನ್ನು ಬರ್ಬರವಾಗಿ ಕೊಂದೇ ಬಿಟ್ಟ ಪಾಪಿ!
ಆಸ್ಪತ್ರೆಗೆ ಭೇಟಿ ನೀಡಲಿರುವ ದೀದಿಮಮತಾ ಬ್ಯಾನರ್ಜಿ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಲು ಇಂದು ಒಡಿಶಾಗೆ ತೆರಳಲಿದ್ದಾರೆ. ರೈಲು ಅಪಘಾತದ ನಂತರ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಕ್ಷಣ ಪ್ರತಿಕ್ರಿಯಿಸಿ, ಸಿಬ್ಬಂದಿ, ವೈದ್ಯರು ಮತ್ತು ಆಂಬ್ಯುಲೆನ್ಸ್‌ಗಳನ್ನು ಒಡಿಶಾಗೆ ರಕ್ಷಣಾ ಕಾರ್ಯಾಚರಣೆಗೆ ಕಳುಹಿಸಿದ್ದರು. ಆ ರಾತ್ರಿ ಅವರು ತಮ್ಮ ನಿವಾಸದಿಂದಲೇ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದ್ದರು.
ಮೃತಪಟ್ಟವರಲ್ಲಿ ಬಂಗಾಳದವರೇ ಹೆಚ್ಚು
ಬಾಲಸೋರ್ ದುರಂತದ ನಂತರ ಮಮತಾ ಬ್ಯಾನರ್ಜಿ ಸ್ಥಳಕ್ಕೆ ಆಗಮಿಸಿ ಪರಿಹಾರ ಕ್ರಮಗಳ ಬಗ್ಗೆ ವಿಚಾರಣೆ ನಡೆಸಿದ್ದರು. ಬಾಲಸೋರ್ ರೈಲು ಅಪಘಾತದಲ್ಲಿ ಸತ್ತವರಲ್ಲಿ ಹೆಚ್ಚಿನವರು ಬಂಗಾಳದ ಪ್ರಯಾಣಿಕರು ಎಂದು ಹೇಳಲಾಗುತ್ತಿದೆ.
ಬುಧವಾರವೇ ನೇಮಕಾತಿ ದಾಖಲಾತಿ ವಿತರಣೆ
ಅಪಘಾತದಲ್ಲಿ ಮೃತರ ಕುಟುಂಬಗಳಿಗೆ ಪರಿಹಾರ ಮತ್ತು ಉದ್ಯೋಗ ನೇಮಕಾತಿ ದಾಖಲೆಗಳನ್ನು ಮಮತಾ ಬ್ಯಾನರ್ಜಿ ಬುಧವಾರ ಹಸ್ತಾಂತರಿಸಲಿದ್ದಾರೆ. ಅಪಘಾತದ ವಿಷಯದಲ್ಲಿ ಯಾವುದೇ ರಾಜಕೀಯ ಮಾಡಬಾರದು ಮತ್ತು ಗಾಯಗೊಂಡ ಪ್ರಯಾಣಿಕರಿಗೆ ಮತ್ತು ಅವರ ಕುಟುಂಬಗಳಿಗೆ ಎಲ್ಲಾ ರೀತಿಯಲ್ಲಿ ಸಹಾಯ ಮಾಡುವುದಾಗಿ ಬಂಗಾಳದ ಮುಖ್ಯಮಂತ್ರಿ ಹೇಳಿದ್ದಾರೆ.
ಇದನ್ನೂ ಓದಿ: Odisha Train Accident: ಒಡಿಶಾ ಭಯಾನಕ ದುರಂತದಲ್ಲಿ ಮೃತಪಟ್ಟ 101 ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ!ಪ್ರವಾಸ ರದ್ದುರೈಲು ಅಪಘಾತದಿಂದಾಗಿ ಮಮತಾ ಬ್ಯಾನರ್ಜಿ ಡಾರ್ಜಿಲಿಂಗ್‌ಗೆ ನಾಲ್ಕು ದಿನಗಳ ಭೇಟಿಯನ್ನು ರದ್ದುಗೊಳಿಸಿದರು. ಈ ಬಾರಿಯ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲಾ ಪಕ್ಷಗಳ ಮುಖಂಡರನ್ನು ಭೇಟಿ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ. ಇದಲ್ಲದೇ, ಉತ್ತಮ ಚಿಕಿತ್ಸೆ ಅಗತ್ಯವಿರುವ ಗಾಯಾಳುಗಳನ್ನು ಕೋಲ್ಕತ್ತಾ ಅಥವಾ ಇತರ ರಾಜ್ಯಗಳಿಗೆ ಕಳುಹಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ದೀದಿ ಹೇಳಿದ್ದಾರೆ.

Post a Comment