Moral Policing: ನೈತಿಕ ಪೊಲೀಸ್‌ಗಿರಿ ತಡೆಯಲು ಮಂಗಳೂರಿನಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ: ಗೃಹ ಸಚಿವರ ಘೋಷಣೆ


 ಡಾ. ಜಿ ಪರಮೇಶ್ವರ್, ಗೃಹ ಸಚಿವ

ಕರಾವಳಿಯಲ್ಲಿ ಇಂದು ಭಯದ ವಾತಾವರಣ ಇದೆ ಅಂತಾ ಜನ ಮಾತನಾಡಿಕೊಳ್ಳುತ್ತಿದ್ದಾರೆ. ಈ ಪರಿಸ್ಥಿತಿಯನ್ನು ನಾವು ತಡೆಯಲಿದ್ದೇವೆ. ಕೋಮು ಸೌಹಾರ್ದತೆಯನ್ನು ತರಲು ಪೊಲೀಸರಿಗೆ ಕಠಿಣ ಸೂಚನೆ ನೀಡಿದ್ದೇನೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.

ಮಂಗಳೂರು: ನೈತಿಕ ಪೊಲೀಸ್‌ಗಿರಿ ತಡೆಯಲು ಮಂಗಳೂರು (Mangaluru) ಕಮಿಷನರೇಟ್‌ ವ್ಯಾಪ್ತಿಯಲ್ಲಿ ನೂತನವಾಗಿ ಕೋಮುವಾದ ವಿರೋಧಿ ಪಡೆ (Anti Communal Wing) ಸ್ಥಾಪಿಸುವುದಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್ (Dr G Parameshwar) ಘೋಷಣೆ ಮಾಡಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ಪೊಲೀಸ್ ಇಲಾಖೆಗೆ ಸವಾಲುಗಳಿವೆ. ಕರಾವಳಿ ಭಾಗದಲ್ಲಿ ಒಳ್ಳೆಯ ಜನ ಇದ್ದಾರೆ ಅಂತ ನಂಬಿದ್ದೆವು. ಇಡೀ ದೇಶವೇ ಈ ಮಾತನ್ನು ನಂಬುತ್ತದೆ. ಆದರೆ ಅದರ ಜೊತೆಗೆ ಬೇರೆ ಮಾತುಗಳೂ ಕೇಳಿ ಬಂದಿದೆ. ದ.ಕ ಜಿಲ್ಲೆಯಲ್ಲಿ ಭಾಗದಲ್ಲಿ ಶಾಂತಿ ಇಲ್ಲ, ಕೋಮು ಸಾಮರಸ್ಯ ಇಲ್ಲ ಎಂಬ ಮಾತೂ ಇದೆ. ಪ್ರಣಾಳಿಕೆ ಸಮಿತಿ ಅಧ್ಯಕ್ಷನಾದ ಸಂದರ್ಭದಲ್ಲೂ ಇಪ್ಪತ್ತು ಸಂಸ್ಥೆಗಳ ಮುಖ್ಯಸ್ಥರನ್ನು ಭೇಟಿಯಾಗಿದ್ದೆ. ಆಗ ಇಲ್ಲಿ ಶಾಂತಿ ಕೊಡಿ ಎಂಬ ಮಾತೂ ಹೇಳಿದ್ದಾರೆ ಎಂದರು.ಇದನ್ನೂ ಓದಿ: Chakravarthy Sulibele ಒಬ್ಬ ಭಯೋತ್ಪಾದಕ ಅಲ್ಲ, ರಾಷ್ಟ್ರ ಭಕ್ತರ ಸಾಲಿಗೆ ಸೇರುವವರು: ಕೋಟ ಶ್ರೀನಿವಾಸ ಪೂಜಾರಿ

ಕೋಮು ಸೌಹಾರ್ದತೆಗೆ ಈ ಹಿಂದೆ ಪಾದಯಾತ್ರೆಯನ್ನೂ ಮಾಡಿದ್ದೆ ಎಂದ ಸಚಿವ ಪರಮೇಶ್ವರ್‌, ಕರಾವಳಿಯಲ್ಲಿ ಇಂದು ಭಯದ ವಾತಾವರಣ ಇದೆ ಅಂತಾ ಜನ ಮಾತನಾಡಿಕೊಳ್ಳುತ್ತಿದ್ದಾರೆ. ಈ ಪರಿಸ್ಥಿತಿಯನ್ನು ನಾವು ತಡೆಯಲಿದ್ದೇವೆ. ಕೋಮು ಸೌಹಾರ್ದತೆಯನ್ನು ತರಲು ಪೊಲೀಸರಿಗೆ ಕಠಿಣ ಸೂಚನೆ ನೀಡಿದ್ದೇನೆ. ಅನೈತಿಕ ಪೊಲೀಸ್ ಗಿರಿ ಇಲ್ಲಿ ತುಂಬಾ ನಡೆಯುತ್ತಿದೆ. ಇಲ್ಲಿ ಅನೈತಿಕ ಪೊಲೀಸ್ ಗಿರಿ ಮಾಡುವವರು ಯಾರು? ಎಲ್ಲವೂ ಇದ್ದು ನಾವು ತಡೆಯದಿದ್ದರೆ ಇಲಾಖೆ, ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತದೆ. ಅನೈತಿಕ ಪೊಲೀಸ್ ಗಿರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.

 ಮಂಗಳೂರು ಕಮೀಷನೇಟರ್ ವ್ಯಾಪ್ತಿಯಲ್ಲಿ ಅನೈತಿಕ ಪೊಲೀಸ್ ಗಿರಿಯನ್ನು ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುತ್ತಿದ್ದೇವೆ ಎಂದ ಗೃಹ ಸಚಿವರು, ಈ ವಿಂಗ್ ನಲ್ಲಿ ಸಮರ್ಥವಾದ ಅಧಿಕಾರಿಗಳು ಇರಲಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: CT Ravi: ಕಾಂಗ್ರೆಸ್‌ನವರ ಕಣ್ಣಿಗೆ ಚಕ್ರವರ್ತಿ ಸೂಲಿಬೆಲೆ ಲಾಡೆನ್ ಥರ ಕಾಣ್ತಿದ್ದಾರಾ?; ಸಿಟಿ ರವಿ ಪ್ರಶ್ನೆ

 ಇನ್ನು, ಮಂಗಳೂರಿಗೆ ಹೂಡಿಕೆ ಮಾಡಲು ಕಂಪೆನಿಗಳು ಬರುತ್ತಿಲ್ಲ, ಶಾಂತಿ-ಸೌಹಾರ್ದತೆ ಇಲ್ಲ ಎಂಬ ಮಾತು ಹೇಳುತ್ತಾರೆ ಎಂದು ಹೇಳಿದ ಸಚಿವರು, ಯಾವ ಧೈರ್ಯದಲ್ಲಿ ಸಾವಿರಾರು ಕೋಟಿ ಹೂಡಿಕೆ ಮಾಡಬೇಕು ಅಂತಾ ಹೇಳುತ್ತಾರೆ. ಕೋಮು ಭಾವನೆಗಳನ್ನು ಪ್ರಚೋದನೆ ಮಾಡುವವರ ಮೇಲೂ ಕ್ರಮ ಕೈಗೊಳ್ಳುತ್ತೇವೆ. ಕೇಸ್ ಆದ ಬಳಿಕ ರಿವ್ಯೂ ಮಾಡಲು ಸೂಚನೆ ನೀಡಿದ್ದೇನೆ. ಅಧಿಕಾರಿಗಳಿಗೆ ಕೇಸ್ ಗಳ ಫಾಲೋ ಅಪ್ ಮಾಡಲು ಸೂಚನೆ ನೀಡಿ ಆ ಕೇಸ್ ಗಳ ಜವಾಬ್ದಾರಿಯನ್ನು ಅಧಿಕಾರಿಗಳು ತೆಗೆದುಕೊಳ್ಳಬೇಕೆಂದು ಸೂಚಿಸಿದ್ದೇನೆ ಎಂದು ಹೇಳಿದರು.ಮೃತರಿಗೆ ಸರ್ಕಾರದಿಂದ ಪರಿಹಾರ

ಇನ್ನು ದುಷ್ಕರ್ಮಿಗಳಿಂದ ಮೃತರಾದ ದೀಪಕ್ ರಾವ್, ಫಾಜೀಲ್, ಜಲೀಲ್, ಮಸೂದ್ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡಲು ಬೇಕಾದ ವರದಿ ನೀಡಲು ಸೂಚಿಸಿದ್ದೇನೆ ಎಂದ ಡಾ ಪರಮೇಶ್ವರ್, ಆದಷ್ಟು ಶೀಘ್ರದಲ್ಲಿ ಸರ್ಕಾರ ಈ ಕುಟುಂಬಗಳಿಗೆ ಪರಿಹಾರ ನೀಡಲಿದೆ. ಡ್ರಗ್ಸ್ ಮಾಫಿಯಾ ತಡೆಯಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಅಗಸ್ಟ್ 15 ರೊಳಗೆ ಮಾಫಿಯಾ ವಿರುದ್ಧ ಡ್ರೈವ್ ಮಾಡಿ ಕ್ರಮ ಕೈಗೊಳ್ಳುತ್ತೇವೆ. ವಿದ್ಯಾರ್ಥಿಗಳು, ಯುವಕರು ಮಂಗಳೂರಿನಲ್ಲಿ ಶಾಂತಿ-ಸಾಮರಸ್ಯವನ್ನು ಕಟ್ಟಲು ಕೈ ಜೋಡಿಸಬೇಕು ಎಂದು ಹೇಳಿದರು.

Post a Comment

Previous Post Next Post