ಶರದ್ ಪವಾರ್
ಜುಲೈ 13 ಮತ್ತು 14 ರಂದು ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ನಡೆಯಲಿದೆ. ಶಿಮ್ಲಾದಲ್ಲಿ ಭಾರೀ ಮಳೆಯಿಂದಾಗಿ ನಿರ್ಧಾರವನ್ನು ಬದಲಾಯಿಸಿಕೊಂಡಿದ್ದೇವೆ ಎಂದು ಸ್ಥಳ ಬದಲಾವಣೆಯ ಬಗ್ಗೆ ಶರದ್ ಪವಾರ್ ಸ್ಪಷ್ಟನೆ ನೀಡಿದರು.ನವದೆಹಲಿ: ಬಿಜೆಪಿ ಸರ್ಕಾರದ (BJP Government) ವಿರುದ್ಧ ವಿರೋಧ ಪಕ್ಷಗಳ ( Opposition Parties) ಮಹಾಮೈತ್ರಿಕೂಟದ ಮುಂದಿನ ಸಭೆ ಶಿಮ್ಲಾ (Shimala) ಬದಲಿಗೆ ಬೆಂಗಳೂರಿನಲ್ಲಿ (Bengaluru) ನಡೆಯಲಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ (Sharad Pawar) ಘೋಷಿಸಿದ್ದಾರೆ. ಜುಲೈ 13 ಮತ್ತು 14 ರಂದು ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ನಾಯಕರು ಸಮಾವೇಶಗೊಳ್ಳಲಿದ್ದಾರೆ ಎಂದು ಗುರುವಾರ ತಿಳಿಸಿದ್ದಾರೆ. ಆಡಳಿತ ಪಕ್ಷಕ್ಕೆ ಕಳೆದ ಕೆಲವು ಚುನಾವಣೆಯಲ್ಲಿ ನಿರೀಕ್ಷಿಸಿದಷ್ಟು ಯಶಸ್ಸು ಸಿಕ್ಕಿಲ್ಲ. ಇನ್ನೂ ಕೇರಳ, ಆಂಧ್ರ, ತಮಿಳುನಾಡು, ತೆಲಂಗಾಣ, ಜಾರ್ಖಂಡ್, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಆಡಳಿತದಲ್ಲಿಲ್ಲ. ರಾಜಸ್ಥಾನ, ದೆಹಲಿ ಮತ್ತು ಪಂಜಾಬ್‌ನಲ್ಲಿಯೂ ಬಿಜೆಪಿ ಅಧಿಕಾರ ಕಳೆದುಕೊಂಡಿದೆ. ದೇಶದ ಬಹುತೇಕ ರಾಜ್ಯಗಳಲ್ಲಿ ಬಿಜೆಪಿ ನೆಲೆ ಕಳೆದುಕೊಳ್ಳುತ್ತಿದೆ ಎಂದರು ತಿಳಿಸಿದರು.ಬಿಜೆಪಿ ವಿರುದ್ಧ ಪವಾರ್ ವಾಗ್ದಾಳಿಬಿಜೆಪಿ ಸಿಎಂ ಇರುವ ಗುಜರಾತ್, ಉತ್ತರ ಪ್ರದೇಶ, ಅಸ್ಸಾಂ ಮತ್ತು ಮಣಿಪುರದಲ್ಲಿ ಕಳೆದ 45 ದಿನಗಳಿಂದ ಹೊತ್ತಿ ಉರಿಯುತ್ತಿದೆ. ನಾವು ಭಾರತದ ಪ್ರಜೆಗಳೋ ಅಲ್ಲವೋ ಎಂದು ನಿವೃತ್ತ ಸೇನಾಧಿಕಾರಿ ಕೇಳಿದ್ದಾರೆ. ಕೋಮುಗಲಭೆಯನ್ನು ಹೆಚ್ಚಿಸುವ ಮೂಲಕ ಕೋಮು ವಾತಾವರಣವನ್ನು ಸೃಷ್ಟಿಸಲು ಆಡಳಿತ ಪಕ್ಷ ಪ್ರಯತ್ನಿಸುತ್ತಿದೆ. ಕಳೆದ ಐದಾರು ತಿಂಗಳಲ್ಲಿ ಈ ಗಲಭೆಗಳು ನಡೆದಿವೆ. ಪ್ರಧಾನಿ ಅಮೆರಿಕದಲ್ಲಿದ್ದರೂ, ಪಾಟ್ನಾದಲ್ಲಿ ನಮ್ಮ ಸಭೆ ಬಗ್ಗೆ ತಿಳಿದು ವೈಯಕ್ತಿಕ ವಾಗ್ದಾಳಿ ನಡೆಸಿದ್ದರು ಎಂದರು.ಇದನ್ನೂ ಓದಿ: Viral Photos: ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್ ಹಣೆಗೆ ಕಾಲಿನಿಂದ ತಿಲಕವಿಟ್ಟ ಯುವತಿ!ಜುಲೈ 13 ಮತ್ತು 14 ರಂದು ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ನಡೆಯಲಿದೆ. ಶಿಮ್ಲಾದಲ್ಲಿ ಭಾರೀ ಮಳೆಯಿಂದಾಗಿ ನಿರ್ಧಾರವನ್ನು ಬದಲಾಯಿಸಿಕೊಂಡಿದ್ದೇವೆ ಎಂದು ಸ್ಥಳ ಬದಲಾವಣೆಯ ಬಗ್ಗೆ ಸ್ಪಷ್ಟನೆ ನೀಡಿದರು. ಜೂನ್ 23ರಂದು ನಡೆದಿದ್ದ ವಿರೋಧ ಪಕ್ಷಗಳ ಸಭೆಯಲ್ಲಿ 16 ರಾಜಕೀಯ ಪಕ್ಷಗಳು ಭಾಗವಹಿಸಿದ್ದವು. ಈ ಸಭೆಯಲ್ಲಿ ಹಲವು ಬಿಜೆಪಿಯೇತರ ಪಕ್ಷಗಳು 2024 ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿಯನ್ನು ಸೋಲಿಸಲು ಒಗ್ಗಟ್ಟಿನಿಂದ ಹೋರಾಡಲು ಮತ್ತು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಕೆಲಸ ಮಾಡಲು ನಿರ್ಧಾರ ಮಾಡಿದ್ದವು. ಜಂಟಿ ಕಾರ್ಯತಂತ್ರವನ್ನು ರೂಪಿಸಲು ಅವರು ಎರಡನೇ ಸಭೆಯ ಸ್ಥಳವಾಗಿ ಶಿಮ್ಲಾವನ್ನು ನಿರ್ಧಾರ ಮಾಡಲಾಗಿತ್ತು. ಆದರೆ, ಅವರು ಜುಲೈ 13 ಮತ್ತು 14 ರಂದು ಬೆಂಗಳೂರಿನಲ್ಲಿ ಸಭೆ ನಡೆಸಲು ನಿರ್ಧರಿಸಿಲಾಗಿದೆ.ಖರ್ಗೆಗೆ ನಾಯಕತ್ವ ಸಾಧ್ಯತೆವಿರೋಧ ಪಕ್ಷಗಳ ಮೊದಲ ಸಭೆಯನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪಾಟ್ನಾದಲ್ಲಿ ಆಯೋಜಿಸಿದ್ದರು. ಸಭೆಯ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಪಕ್ಷ ನಾಯಕರ ಮುಂದಿನ ಸಭೆಯನ್ನು ಜುಲೈನಲ್ಲಿ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆಸಲಾಗುವುದು ಎಂದು ಘೋಷಿಸಿದ್ದರು. ಇದೀಗ ಬೆಂಗಳೂರಿಗೆ ಸ್ಥಳಾಂತರಗೊಳ್ಳಲಿರುವ ಸಭೆಯಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆಯುವ ಸಾಧ್ಯತೆ ಇದ್ದು, ಇದರಲ್ಲಿ ಮುಂದಿನ ಲೋಕಸಭಾ ಚುನಾವಣೆಗೆ ಯೋಜನೆ ರೂಪಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Post a Comment