Siddaramaiah: ಆಸಿಡ್‌ ದಾಳಿಗೆ ಒಳಗಾಗಿದ್ದ ಯುವತಿಗೆ ಸಿಎಂ ಕಚೇರಿಯಲ್ಲೇ ಉದ್ಯೋಗ ನೀಡಿದ ಸಿದ್ದರಾಮಯ್ಯ!


 ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಆಸಿಡ್ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸ್ನಾತಕೋತ್ತರ ಪದವೀಧರೆ ಕೂಡ ಬಂದಿದ್ದರು. ಈ ವೇಳೆ ಅವರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ ಸಂತ್ರಸ್ಥೆಯ ಅಹವಾಲನ್ನು ಕೇಳಿ ಸ್ಥಳದಲ್ಲೇ ಉದ್ಯೋಗ ನೀಡುವ ಭರವಸೆ ನೀಡಿದರು.ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಆಸಿಡ್‌ ದಾಳಿಗೆ ಒಳಗಾಗಿದ್ದ ಸಂತ್ರಸ್ತ ಮಹಿಳೆಗೆ ಸಿಎಂ ಸಚಿವಾಲಯದಲ್ಲಿ (CM Office) ಉದ್ಯೋಗ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಆಸಿಡ್ ದಾಳಿಗೆ ಒಳಗಾಗಿದ್ದ ಸ್ನಾತಕೋತ್ತರ ಪದವೀಧರೆಗೆ ಸಿಎಂ ಸಚಿವಾಲಯದಲ್ಲೇ (CM Ministry) ಉದ್ಯೋಗ ನೀಡಿದ ಮುಖ್ಯಮಂತ್ರಿ ನಡೆ ಮೆಚ್ಚುಗೆಗೆ ಪಾತ್ರವಾಗಿದೆ.ಸಿಎಂ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಆಸಿಡ್ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸ್ನಾತಕೋತ್ತರ ಪದವೀಧರೆ ಕೂಡ ಬಂದಿದ್ದರು. ಈ ವೇಳೆ ಅವರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ ಸಂತ್ರಸ್ಥೆಯ ಅಹವಾಲನ್ನು ಕೇಳಿ ಸ್ಥಳದಲ್ಲೇ ಉದ್ಯೋಗ ನೀಡುವ ಭರವಸೆ ನೀಡಿದರು. ಬಳಿಕ ಮುಖ್ಯಮಂತ್ರಿ ಸಚಿವಾಲಯದಲ್ಲಿಯೇ ಉದ್ಯೋಗ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: Viral News: ಮದುವೆಯ ದಿನ ಹೊಟ್ಟೆ ನೋವು ಕಾಣಿಸಿಕೊಂಡ ವಧುವಿಗೆ ಹೆಣ್ಣು ಮಗು ಜನನ! ಕಂಗಾಲಾದ ವರ2022ರ ಏಪ್ರಿಲ್ 28 ರಂದು ಆಸಿಡ್ ದಾಳಿಗೆ ತುತ್ತಾಗಿದ್ದ ಎಂ.ಕಾಂ ಪದವೀಧರೆ ಯುವತಿ, ತಂದೆ ಮತ್ತು ತಾಯಿಯ ಜೊತೆಗೆ ಜನತಾ ದರ್ಶನಕ್ಕೆ ಬಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು. ಈ ವೇಳೆ ಹಿಂದಿನ ಸರ್ಕಾರದಲ್ಲಿ ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಅವರಲ್ಲೂ ಉದ್ಯೋಗ ನೀಡುವಂತೆ ಮನವಿ ಮಾಡಿದ್ದೆವು. ಅವರು ಭರವಸೆ ನೀಡಿದ್ದರು. ಆದರೆ ಉದ್ಯೋಗ ಮಾತ್ರ ಕೊಡಲಿಲ್ಲ ಎಂದು ಅಳಲು ತೋಡಿಕೊಂಡರು. ಆಗ ಅವರ ಅಹವಾಲು ಸ್ವೀಕರಿಸಿ ತಮ್ಮ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಸ್ವಾಮಿ ವೇಷದಲ್ಲಿ ಆರೋಪಿ, ಭಕ್ತರ ವೇಷದಲ್ಲಿ ಪೊಲೀಸರು!2022ರ ಏಪ್ರಿಲ್ 28 ರಂದು ಆಸಿಡ್ ದಾಳಿ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ತನಿಖೆಗೆ ಇಳಿದ ಪೊಲೀಸರು ಆರೋಪಿ ಸ್ವಾಮಿಯ ವೇಷದಲ್ಲಿ ತಿರುವಣ್ಣಾಮಲೈ ಆಶ್ರಮದಲ್ಲಿ ತಲೆ ಮರೆಸಿಕೊಂಡಿರುವುದನ್ನು ಪತ್ತೆ ಹಚ್ಚಿದ್ದರು. ಆಗ ಭಕ್ತರ ವೇಷದಲ್ಲಿ ಹೋಗಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.ಸದ್ಯ ಆರೋಪಿ ಬೆಂಗಳೂರು ಜೈಲಿನಲ್ಲಿದ್ದಾನೆ. ಆಸಿಡ್ ದಾಳಿಗೆ ಒಳಗಾದ ಸಂತ್ರಸ್ಥೆ ಚಿಕಿತ್ಸೆ ಪಡೆಯುತ್ತಾ ಚೇತರಿಸಿಕೊಳ್ಳುತ್ತಿದ್ದಾರೆ. ಆಕೆಯ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದಲೂ ನೆರವು ನೀಡಲಾಗಿದೆ.

 

Post a Comment

Previous Post Next Post