Oath Taking: ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿ ಕಾಂಗ್ರೆಸ್ ನಾಯಕರು


  Congress MLC: ಇಂದು ವಿಧಾನ ಪರಿಷತ್ ಸದಸ್ಯರಾಗಿ ಮೂವರು ಕಾಂಗ್ರೆಸ್ ನಾಯಕರು ಪ್ರಮಾಣ ವಚನ ಸ್ವೀಕರಿಸಿದರು.ಇಂದು ಬೆಳಗ್ಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್​ನ ಮೂವರು ನಾಯಕರು ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಉಪಸ್ಥಿತರಿದ್ದರು.ಬಸವರಾಜ್ ಹೊರಟ್ಟಿ ಅವರ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು ಹಾಗೂ ಬೋಸರಾಜು ಪ್ರಮಾಣ ವಚನ ಸ್ವೀಕರಿಸಿದರು.ಜಗದೀಶ್ ಶೆಟ್ಟರ್ ಮತ್ತು ಬೋಸರಾಜು ಅವರು ದೇವರ ಹೆಸರಿನಲ್ಲಿ ಮತ್ತು ತಿಪ್ಪಣ್ಣಪ್ಪ ಕಮಕನೂರು ಕುಲ ದೇವತೆ ಮಾತಾ ಮಾಣಿಕೇಶ್ವರಿ ಮೇಲೆ ಪ್ರಮಾಣ ವಚನ ಸ್ವೀಕಾರ ಮಾಡಿದರು.ಸರಳವಾಗಿ ನಡೆದ ಪದಗ್ರಹಣ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವರಾದ ಪ್ರಿಯಾಂಕ್ ಖರ್ಗೆ, ಶರಣಪ್ರಕಾಶ್ ಪಾಟೀಲ್, ಹೆಚ್​ಕೆ ಪಾಟೀಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಡಿಸಿಎಂ ಡಿಕೆ ಶಿವಕುಮಾರ್ ಕಾರ್ಯಕ್ರಮಕ್ಕೆ ಗೈರಾಗಿದ್ದರು.ಸಣ್ಣ ನೀರಾವರಿ ಸಚಿವರು ಆಗಿರುವ ಎನ್ ಎಸ್ ಭೋಸರಾಜು ಅವರನ್ನು ವಿಧಾನಪರಿಷತ್ ಸಭಾ ನಾಯಕರನ್ನಾಗಿ ನಾಮ ನಿರ್ದೇಶನ ಮಾಡಲಾಗಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ನಾಮ ನಿರ್ದೇಶನ ಮಾಡಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.ಪ್ರಮಾಣ ವಚನ ಸ್ವೀಕರಿಸಿದ ನೂತನ ವಿಧಾನ ಪರಿಷತ್ ಸದಸ್ಯರಿಗೆ ಹೂವಿನ ಗುಚ್ಛ ನೀಡಿ ಸಿಎಂ ಸಿದ್ದರಾಮಯ್ಯ ಶುಭಾಶಯಗಳನ್ನು ತಿಳಿಸಿದರು.

Post a Comment

Previous Post Next Post